ಬೆಂಗಳೂರು, ಅ.04: ಡೆತ್ನೋಟ್ ಬರೆದಿಟ್ಟು ಪಿಜಿಯ ಐದನೇ ಮಹಡಿಯಿಂದ ಹಾರಿ ಆಂಧ್ರ ಪ್ರದೇಶದ ಕಡಪ ಮೂಲದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ(ಅ.03) ಸಂಜೆ ಏಳು ಗಂಟೆಯಲ್ಲಿ ವೈಟ್ಫೀಲ್ಡ್(Whitefield)ನ ಪ್ರಶಾಂತ್ ಲೇಔಟ್ನಲ್ಲಿ ನಡೆದಿದೆ. ಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ, ಟಿಸಿಎಸ್ನಲ್ಲಿ ಕೆಲಸ ಮಾಡುತ್ತಿದ್ದರು.
ಇನ್ನು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಯುವತಿ, ‘ನನ್ನ ಮೃತ ದೇಹವನ್ನು ಪಿಎಂ(ಪೋಸ್ಟ್ ಮಾರ್ಟಂ) ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ ನನ್ನ ಮೃತ ದೇಹ ನೀಡಿ ಎಂದು ಡೆತ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸೋದರತ್ತೆ ಬೆದರಿಕೆಗೆ ಹೆದರಿ ಅಳಿಯ ಆತ್ಮಹತ್ಯೆ! 17 ಗುಂಟೆ ಸೈಟ್ ವಿವಾದ, ಡೆತ್ ನೋಟ್ನಲ್ಲಿತ್ತು ರಹಸ್ಯ
ಹಾವೇರಿ: ಟಿಪ್ಪರ್ ಹರಿದು ಸ್ಕೂಟಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ನಡೆದಿದೆ. 60 ವರ್ಷದ ನಾಗರಾಜ್ ಮುದೋಳಮಠ ಮೃತ ಸ್ಕೂಟಿ ಸವಾರ. ರಸ್ತೆ ಕ್ರಾಸ್ ಮಾಡುವಾಗ ಈ ದುರ್ಘಟನೆ ನಡೆದಿದ್ದು, ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ದೇಹದ ಭಾಗವು ಛಿದ್ರವಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಡಾ.ಗಿರೇಶ ಬೋಜಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:51 pm, Fri, 4 October 24