AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ನಿರ್ಧಾರದಿಂದ ನಮ್ಮ ರಾಜ್ಯಕ್ಕೆ ಒಳಿತಾಗಲಿದೆ: ಶಾಗೆ ನಾರಾಯಣಸ್ವಾಮಿ ಬರೆದ ಪತ್ರದಲ್ಲೇನಿದೆ?

ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಆ್ಯಪ್​ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಈ ಆನ್‌ಲೈನ್ ಆಟಗಳಿಗೆ ವ್ಯಸನದ ನಂತರದ ಪರಿಣಾಮಗಳಿಂದ ಕುಟುಂಬಗಳು ಬೀದಿಗೆ ಬಂದಿವೆ. ಹೀಗಾಗಿ ಇವುಗಳನ್ನು ನಿಷೇಧಿಸುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪತ್ರ ಬರೆದಿದ್ದಾರೆ.

ನಿಮ್ಮ ನಿರ್ಧಾರದಿಂದ ನಮ್ಮ ರಾಜ್ಯಕ್ಕೆ ಒಳಿತಾಗಲಿದೆ: ಶಾಗೆ ನಾರಾಯಣಸ್ವಾಮಿ ಬರೆದ ಪತ್ರದಲ್ಲೇನಿದೆ?
ಅಮಿತ್ ಶಾ, ಛಲವಾದಿ ನಾರಾಯಣಸ್ವಾಮಿ
ಕಿರಣ್ ಹನುಮಂತ್​ ಮಾದಾರ್
|

Updated on:Sep 01, 2024 | 5:56 PM

Share

ಬೆಂಗಳೂರು, ಸೆ.01: ಯುವಕರು ಹಾಗೂ ಮಕ್ಕಳ‌ ಮೇಲೆ ದುಷ್ಪರಿಣಾಮ ಬೀರುತ್ತಿರುವ ಆನ್​ಲೈನ್ ಗೇಮ್, ಬೆಟ್ಟಿಂಗ್ ಆ್ಯಪ್​​ಗಳನ್ನ ನಿಷೇಧಿಸುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಗೆ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy)  ಅವರು ಪತ್ರ ಬರೆದಿದ್ದಾರೆ. ಹೌದು, ಕೋವಿಡ್ ಸಂದರ್ಭದಲ್ಲಿ ಅನೇಕ ಆನ್​ಲೈನ್​ ಗೇಮ್​ಗಳನ್ನ ನಿಷೇಧಿಸಿ ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದೀರಿ. ಈಗಲೂ ಅಂತದ್ದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ.

ಆರ್ಟಿಕಲ್ 370 ರದ್ದು ಸೇರಿದಂತೆ ಮಹತ್ವದ ನಿರ್ಧಾರ ತೆಗೆದುಕೊಂಡು ಧೈರ್ಯ ಪ್ರದರ್ಶಿಸಿದ್ದೀರಿ. ಆನ್ ಲೈನ್ ಗೇಮ್​ಗೆ ಅಡಿಕ್ಟ್ ಆಗಿ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಆದ್ರೆ, ಆನ್​ಲೈನ್ ಗೇಮ್​ ಮಾಲೀಕರು ಲಾಭ ಪಡೆಯುತ್ತಿದ್ದಾರೆ. ಇದಕ್ಕೆ ಆದಷ್ಟು ಬೇಗ ಕಡಿವಾಣ ಹಾಕುವಂತೆ ಛಲವಾದಿ ನಾರಾಯಣಸ್ವಾಮಿ ಮನವಿ ಮಾಡಿದ್ದು, ನಿಮ್ಮ ನಿರ್ಧಾರದಿಂದ ನಮ್ಮ ರಾಜ್ಯಕ್ಕೆ ಒಳಿತಾಗಲಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದನ್ನೂ ಓದಿ:ಸುಳ್ಳ ಎಂದು ಜಗತ್ತಿಗೇ ಪ್ರಸಿದ್ಧಿಯಾಗಿರೋದು ಸಿದ್ದರಾಮಯ್ಯ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಪತ್ರದಲ್ಲೇನಿದೆ?

ಆನ್‌ಲೈನ್ ಗೇಮ್‌ಗಳು, ಬೆಟ್ಟಿಂಗ್ ಆ್ಯಪ್​ಗಳು ಇಂದಿನ ಮಕ್ಕಳು ಹಾಗೂ ಯುವಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ.  ವಿಶೇಷವಾಗಿ ಕೋವಿಡ್ ಸಮಯದಲ್ಲಿ ಅನೇಕ ಆನ್‌ಲೈನ್ ಗೇಮ್‌ಗಳು, ಆ್ಯಪ್‌ಗಳನ್ನು ನಿಷೇಧಿಸುವುದು ಸೇರಿದಂತೆ ಅನೇಕ ಕ್ರಾಂತಿಕಾರಿ ಹೆಜ್ಜೆಯನ್ನ ನೀವು ಇಟ್ಟಿದ್ದೀರಿ. ಅನೇಕ ಕುಟುಂಬಗಳು ಮತ್ತು ಯುವಕರು ಈ ಆನ್‌ಲೈನ್ ಆಟಗಳಿಗೆ ವ್ಯಸನಿಯಾಗುವುದನ್ನು ನಾನು ನೋಡಿದ್ದೇನೆ ಮತ್ತು ಈ ಆನ್‌ಲೈನ್ ಆಟಗಳಿಗೆ ವ್ಯಸನದ ನಂತರದ ಪರಿಣಾಮಗಳಿಂದ ಕುಟುಂಬಗಳು ಬೀದಿಗೆ ಬಂದಿವೆ.

ಈ ಗೇಮ್‌ಗಳ ಮಾಲೀಕರು ಮಾತ್ರ ಐಷಾರಾಮಿ ಜೀವನವನ್ನು ನಡೆಸುತ್ತಿದ್ದಾರೆ. ಆದರೆ, ಇದರಿಂದ ಬಡಜನರು ಬಲಿಯಾಗುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಗೊಳಿಸಿದಲ್ಲಿ ಧೈರ್ಯ ಪ್ರದರ್ಶಿಸಿದ್ದೀರಿ. ಈ ಬಗ್ಗೆ ನೀವು ವೈಯಕ್ತಿಕ ಗಮನಹರಿಸಿ ದೇಶಾದ್ಯಂತ ಹೊಸ ಸಾಮಾಜಿಕ ಪಿಡುಗು ಎಂದು ಸಾಬೀತಾಗಿರುವ ಇಂತಹ ಆ್ಯಪ್​ಗಳ ಮಾಲೀಕರು/ಸಂಸ್ಥಾಪಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಾನು ಈ ಮೂಲಕ ಮನವಿ ಮಾಡುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಪತ್ರದ ಮೂಲಕ ಅಮಿತ್​ ಶಾ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  

Published On - 5:40 pm, Sun, 1 September 24

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?