AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟಾ ಸಂಸ್ಥೆಯ ವಿರುದ್ಧ ಯುವ ಕಾಂಗ್ರೆಸ್ ಸಮರ: ಬೆಂಗಳೂರಿನಾದ್ಯಂತ ‘ಮೆಟಾ ಬಿಜೆಪಿ ಕಾ ಬೇಠಾ’ ಬ್ಯಾನರ್ ಅಭಿಯಾನ!

ಮೆಟಾ ಸಂಸ್ಥೆ ರಾಜಕೀಯ ಪಕ್ಷಪಾತದ ಧೋರಣೆ ಅನುಸರಿಸುತ್ತಿದೆ ಎಂದು ಯುವ ಕಾಂಗ್ರೆಸ್ ಆರೋಪಿಸಿದೆ. ಅಲ್ಲದೆ, ಸಂಸ್ಥೆಯ ನಡೆ ಖಂಡಿಸಿ ಬೆಂಗಳೂರಿನಾದ್ಯಂತ ‘ಮೆಟಾ ಬಿಜೆಪಿ ಕಾ ಬೇಠಾ’ ಅಭಿಯಾನ ಆರಂಭಿಸಿದೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ನೇತೃತ್ವದಲ್ಲಿ ಸಾದಹಳ್ಳಿ ಗೇಟ್, ಏರ್‌ಪೋರ್ಟ್ ರಸ್ತೆ ಸೇರಿದಂತೆ ವಿವಿಧೆಡೆ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ.

ಮೆಟಾ ಸಂಸ್ಥೆಯ ವಿರುದ್ಧ ಯುವ ಕಾಂಗ್ರೆಸ್ ಸಮರ: ಬೆಂಗಳೂರಿನಾದ್ಯಂತ ‘ಮೆಟಾ ಬಿಜೆಪಿ ಕಾ ಬೇಠಾ’ ಬ್ಯಾನರ್ ಅಭಿಯಾನ!
ಮೆಟಾ ವಿರುದ್ಧ ಯುವ ಕಾಂಗ್ರೆಸ್ ಅಭಿಯಾನ
ಪ್ರಸನ್ನ ಗಾಂವ್ಕರ್​
| Edited By: |

Updated on:Nov 24, 2026 | 10:02 AM

Share

ಮುಖ್ಯಾಂಶಗಳು

  • ಮೆಟಾ ವಿರುದ್ಧ ಯುವ ಕಾಂಗ್ರೆಸ್‌ನಿಂದ ಬ್ಯಾನರ್ ಅಭಿಯಾನ
  • ಮಾರ್ಕ್ ಜುಕರ್‌ಬರ್ಗ್‌ಗೆ ವ್ಯಂಗ್ಯವಾಗಿ ‘ಮಾರ್ಕ್ ಬಿಜೆಪಿಬರ್ಗ್’ ಹೆಸರು
  • ಸಾದಹಳ್ಳಿ ಗೇಟ್, ಏರ್‌ಪೋರ್ಟ್ ರಸ್ತೆ ಬಳಿ ಬ್ಯಾನರ್

ಬೆಂಗಳೂರು, ನವೆಂಬರ್ 24: ಸಾಮಾಜಿಕ ಜಾಲತಾಣ ದಿಗ್ಗಜ ಮೆಟಾ ಸಂಸ್ಥೆಯ ವಿರುದ್ಧ ಯುವ ಕಾಂಗ್ರೆಸ್ ಸಮರ ಸಾರಿದೆ. ಸಂಸ್ಥೆಯು ರಾಜಕೀಯ ಪಕ್ಷಪಾತದ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಲ್ಲದೆ, ನಡೆಯನ್ನು ಖಂಡಿಸಿ ಬೆಂಗಳೂರಿನ ವಿವಿಧೆಡೆ ‘ಮೆಟಾ ಬಿಜೆಪಿ ಕಾ ಬೇಠಾ’ ಎಂಬ ಘೋಷಣೆಯೊಂದಿಗೆ ಬೃಹತ್ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ನೇತೃತ್ವದಲ್ಲಿ ಈ ಅಭಿಯಾನ ನಡೆಸಲಾಗಿದೆ. ಮೆಟಾ ಸಂಸ್ಥೆ ಹಾಗೂ ಅದರ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಅವರನ್ನು ಗುರಿಯಾಗಿಸಿಕೊಂಡು ಬ್ಯಾನರ್‌ಗಳನ್ನು ಹಾಕಲಾಗಿದೆ. ಮಾರ್ಕ್ ಜುಕರ್‌ಬರ್ಗ್ ಅವರನ್ನು ವ್ಯಂಗ್ಯವಾಗಿ ‘ಮಾರ್ಕ್ ಬಿಜೆಪಿಬರ್ಗ್’ ಎಂದು ಉಲ್ಲೇಖಿಸಲಾಗಿದೆ.

ಮೆಟಾ ಸಂಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಭಾಷಣಗಳಿಗೆ ಕಡಿವಾಣ ಹಾಕುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂಬುದು ಯುವ ಕಾಂಗ್ರೆಸ್‌ನ ಪ್ರಮುಖ ಆರೋಪವಾಗಿದೆ. ಅಲ್ಲದೆ, ಸುಳ್ಳು ಸುದ್ದಿಗಳ ಪ್ರಸಾರಕ್ಕೆ ಅವಕಾಶ ನೀಡುತ್ತಿದೆ ಮತ್ತು ರಾಜಕೀಯ ಪ್ರಭಾವಕ್ಕೆ ಮಣಿಯುವ ಧೋರಣೆ ಅನುಸರಿಸುತ್ತಿದೆ ಎಂದು ಯುವ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳಕೆದಾರರ ವೈಯಕ್ತಿಕ ಮಾಹಿತಿಯ ಗೌಪ್ಯತೆ ವಿಚಾರದಲ್ಲೂ ಮೆಟಾ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳು ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು. ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಮೆಟಾ ಸಂಸ್ಥೆ ತನ್ನ ಪಕ್ಷಪಾತದ ಧೋರಣೆಯನ್ನು ಕೈಬಿಟ್ಟು, ಹೆಚ್ಚು ಹೊಣೆಗಾರಿಕೆಯಿಂದ ವರ್ತಿಸಬೇಕು ಎಂದು ಯುವ ಕಾಂಗ್ರೆಸ್ ಒತ್ತಾಯಿಸಿದೆ.

ಬೆಂಗಳೂರಿನಾದ್ಯಂತ ಬ್ಯಾನರ್ ಅಭಿಯಾನ

ಬೆಂಗಳೂರಿನ ಸಾದಹಳ್ಳಿ ಗೇಟ್, ನ್ಯೂ ಏರ್‌ಪೋರ್ಟ್ ರಸ್ತೆಯ ಟೋಲ್ ಪ್ಲಾಜಾ ಸಮೀಪ ಹಾಗೂ ಚಿಕ್ಕಜಾಲ ಸೇರಿದಂತೆ ನಗರದ ವಿವಿಧೆಡೆ ಈ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಮೆಟಾ ಸಂಸ್ಥೆಯ ವಿರುದ್ಧ ಯುವ ಕಾಂಗ್ರೆಸ್ ನಡೆಸಿರುವ ಈ ಅಭಿಯಾನ ಗಮನ ಸೆಳೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 am, Tue, 24 November 26

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಎಲ್ಲದಕ್ಕೂ ಪರಿಹಾರ ಕೊಟ್ರೇ ಸರ್ಕಾರ ನಡೆಸುವುದ್ಹೇಗೆ? ಸಚಿವ ಶಿವಲಿಂಗೇಗೌಡ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ
ಕೊಪ್ಪಳದ ಗವಿಮಠದ ಕಾರ್ಯಕ್ಕೆ ನಿವೃತ್ತ ನ್ಯಾಯಮೂರ್ತಿ ದೀಕ್ಷಿತ್ ಮೆಚ್ಚುಗೆ