ಆನೇಕಲ್: ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಮಹಿಳೆ ಮೇಲೆ ಇಬ್ಬರಿಗೆ ಪ್ರೀತಿ

ಆನೇಕಲ್ ಮುಗಳೂರು ಹೊಳೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಒಂದೇ ಮಹಿಳೆಯನ್ನು ಇಬ್ಬರು ಪ್ರೀತಿ ಮಾಡಿದ್ದೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಅಕ್ಟೋಬರ್ 26 ರಂದು ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಶವ ಪತ್ತೆಯಾಗಿದ್ದು, ಸರ್ಜಾಪುರ ಪೊಲೀಸರು ಮೂರು ಆರೋಪಿಗಳನ್ನು ಬಂಧಿಸಿದ್ದಾರೆ.

ಆನೇಕಲ್: ಮುಗಳೂರು ಹೊಳೆಯಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಮಹಿಳೆ ಮೇಲೆ ಇಬ್ಬರಿಗೆ ಪ್ರೀತಿ
ಕೊಲೆಯಾದ ಚೇತನ್ ಮತ್ತು ಆರೋಪಿ ಸತೀಶ್
Follow us
ರಾಮು, ಆನೇಕಲ್​
| Updated By: Rakesh Nayak Manchi

Updated on: Nov 04, 2023 | 11:40 AM

ಆನೇಕಲ್, ನ.4: ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರು ಹೊಳೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಒಂದೇ ಮಹಿಳೆಯನ್ನು ಇಬ್ಬರು ಪ್ರೀತಿ ಮಾಡಿದ್ದೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಅಕ್ಟೋಬರ್ 26 ರಂದು ದಕ್ಷಿಣ ಪಿನಾಕಿನಿ ಹೊಳೆಯಲ್ಲಿ ಶವ ಪತ್ತೆಯಾಗಿದ್ದು, ಸರ್ಜಾಪುರ ಪೊಲೀಸರು ಮೂರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೋಲಾರ ಮಾಲೂರು ತಾಲೂಕಿನ ಅಯ್ಯಪ್ಪನಗರದ ಪ್ರಕಾಶ್ ರೆಡ್ಡಿ ಮಗ ಚೇತನ್ ಕೊಲೆಯಾದ ಯುವಕನಾಗಿದ್ದು, ಮಾಲೂರು ಸೊನ್ನಾಪುರ ಗ್ರಾಮದ ಸತೀಶ್ ಕೊಲೆ ಅರೋಪಿಯಾಗಿದ್ದಾನೆ. ಪ್ರಕರಣ ಸಂಬಂಧ ಸತೀಶ್, ಶಶಿ ಮತ್ತು ಶೋಭಾ ಅವರನ್ನು ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇದನ್ನೂ ಓದಿ: ಹಾವೇರಿ: ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿ

ಶವ ಪತ್ತೆಯಾದ ದಕ್ಷಿಣ ಪಿನಾಕಿನಿ ಹೊಳೆಯ ಬ್ರಿಡ್ಜ್​ನ ತಡೆಗೋಡೆ ಮೇಲೆ ರಕ್ತದ ಕಲೆಗಳ ಪತ್ತೆಯಾಗಿತ್ತು. ಮಧ್ಯರಾತ್ರಿ 2 ಗಂಟೆಗೆ ಮಚ್ಚಿನಿಂದ ಹೊಡೆದು ಮೇಲಿಂದ ಕೆಳಗೆ ಎಸೆದಿದ್ದರು. ಈ ಬಗ್ಗೆ ಪೊಲೀಸ್ ತನಿಖೆ ವೇಳೆ ಆರೋಪಿಗಳು ಬಾಯಿಬಿಟ್ಟಿದ್ದಾರೆ.

ಅಕ್ಟೋಬರ್ 7 ರಂದು ಶೋಭಾ ಮೂಲಕ ಚೇತನ್ ಹಾಗೂ ಸತೀಶ್ ಪರಿಚಯವಾಗಿದೆ. ಪರಿಚಯದ ನಂತರ ಅ.26 ರಂದು ಹೊಸಕೋಟೆ ಐಶ್ವರ್ಯ ಬಾರ್​ನಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಪಾರ್ಟಿ ಮುಗಿಸಿ ಮಧ್ಯರಾತ್ರಿ ಎರಡು ಗಂಟೆಗೆ ಮುಗಳೂರು ಬಳಿ ಚೇತನ್​ನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು.

ಪ್ರಕರಣ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸರ್ಜಾಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಕೊಲೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಅತ್ತಿಬೆಲೆ ಕೊಲೆ ಪ್ರಕರಣದಲ್ಲಿ ಶೋಭಾ ಜೈಲಿಗೆ ಹೋಗಿದ್ದಳು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ