ಬೆಂಗಳೂರು: ದೆಹಲಿಗೆ ಹೊರಟಿದ್ದ ಸ್ನೇಹಿತೆಗೆ ಬೈಬೈ ಹೇಳಲು ವಿಮಾನದ ನಕಲಿ ಟಿಕೆಟ್ ತಯಾರಿಸಿದ್ದ ಸ್ನೇಹಿತ ಅರೆಸ್ಟ್​

ಪ್ರಯಾಣದ ನಕಲಿ ಟಿಕೆಟ್​ ತಯಾರಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ಜಾರ್ಖಾಂಡ್​ ಮೂಲದ ಯುವಕನನ್ನು ಬೆಂಗಳೂರು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಯುವಕ ನಕಲಿ ಟಿಕೆಟ್​ ತಯಾರಿಸಿದ್ದು ಏಕೆ? ಈ ಸ್ಟೋರಿ ಓದಿ..

ಬೆಂಗಳೂರು: ದೆಹಲಿಗೆ ಹೊರಟಿದ್ದ ಸ್ನೇಹಿತೆಗೆ ಬೈಬೈ ಹೇಳಲು ವಿಮಾನದ ನಕಲಿ ಟಿಕೆಟ್ ತಯಾರಿಸಿದ್ದ ಸ್ನೇಹಿತ ಅರೆಸ್ಟ್​
ಆರೋಪಿ ಪ್ರಖರ್​
Follow us
Jagadisha B
| Updated By: ವಿವೇಕ ಬಿರಾದಾರ

Updated on:Mar 13, 2024 | 9:34 AM

ಬೆಂಗಳೂರು, ಮಾರ್ಚ್​ 13: ಸ್ನೇಹಿತೆಯನ್ನು ಬೀಳ್ಕೊಡಲು ನಕಲಿ ಟಿಕೆಟ್‌ನೊಂದಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ (Kempegowda International Airport) ಪ್ರವೇಶಿಸಿದ್ದ ಯುವಕನನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಿಬ್ಬಂದಿ (Bengaluru Airport Police) ಬಂಧಿಸಿದ್ದಾರೆ. ಜಾರ್ಖಂಡ್‌ ಮೂಲದ ಪ್ರಖರ್ ಶ್ರೀವಾಸ್ತವ (24 ವರ್ಷ) ಬಂಧಿತ ಆರೋಪಿ. ಆರೋಪಿ ಪ್ರಖರ್ ಶ್ರೀವಾಸ್ತವ ಸ್ನೇಹಿತೆ ಸಂಸ್ಕೃತಿ ಬೆಂಗಳೂರಿನಿಂದ ದೆಹಲಿಗೆ ವಿಮಾನ ಮೂಲಕ ಪ್ರಯಾಣ ಬೆಳೆಸಲು ಬೆಂಗಳೂರು (Bengaluru) ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಸ್ನೇಹಿತೆಯನ್ನು ಕಳುಹಿಸಲು ಕೊಡಲು ಪ್ರಖರ್, ಪ್ರಯಾಣದ ನಕಲಿ ಟಿಕೆಟ್ ತಯಾರಿಸಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ.

ನಕಲಿ ಟಿಕೆಟ್​​ ಅನ್ನು ತೋರಿಸಿ, ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದಾನೆ. ಆದರೆ ವಿಮಾನದಲ್ಲಿ ಪ್ರಯಾಣಿಸದೆ, ಸ್ನೇಹಿತೆಯನ್ನು ಕಳುಹಿಸಿ ವಾಪಸ್​ ಆಗಿದ್ದಾನೆ. ಆಗ ಗೇಟ್ ನಂ. 9ರ ಭದ್ರತಾ ಸಿಬ್ಬಂದಿ ಪ್ರಶ್ನಿಸಿದಾಗ, ನನಗೆ ತುರ್ತು ​ಕರೆ ಬಂದಿದೆ, ಹೀಗಾಗಿ ಮರಳಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾನೆ. ಅನುಮಾನಗೊಂಡ ಭದ್ರತಾ ಸಿಬ್ಬಂದಿ ಪ್ರಖರ್​ನ ಪ್ರಯಾಣದ ಟಿಕೆಟ್​ ಅನ್ನು ಮತ್ತೊಮ್ಮೆ ಪರಿಶೀಲಿಸಿದಾಗ ನಕಲಿ ಎಂಬುವುದು ತಿಳಿದು ಬಂದಿದೆ.

ಇದನ್ನೂ ಓದಿ: ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್​​

ಕೂಡಲೆ ಪ್ರಖರ್​ನನ್ನು ವಿಮಾನ ನಿಲ್ದಾಣದ ಪೊಲೀಸರು ವಶಕ್ಕೆ ಪಡೆದುಕೊಂಡು, ತೀವ್ರ ವಿಚಾರಣೆ ನಡೆಸಿದಾಗ ಸ್ನೇಹಿತೆಗೆ ಬೈ ಬೈ ಹೇಳಲು ವಿಮಾನ ಟಿಕೆಟ್ ಅನ್ನು ನಕಲಿ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ವಿಮಾನ ನಿಲ್ದಾಣದ ಒಳಗೆ ಅತಿಕ್ರಮಣ, ನಕಲಿ ಟಿಕೆಟ್​ ಮತ್ತು ವಂಚನೆಯ ಅಡಿಯಲ್ಲಿ ಆರೋಪಿ ವಿರುದ್ಧ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ವರದಿಯಾದ ಎರಡನೇ ಪ್ರಕರಣ ಇದಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಜಾರ್ಖಂಡ್ ಮೂಲದ 26 ವರ್ಷದ ಹರ್‌ಪ್ರೀತ್ ಕೌರ್ ಸೈನಿ ಎಂಬ ಟೆಕ್ಕಿಯು ಟಿಕೆಟ್​ ಇಲ್ಲದೆ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ್ದರು. ಕೂಡಲೆ ಅವರನ್ನು ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:12 am, Wed, 13 March 24

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ