ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ನೇಹಿತನಿಂದಲೇ ಇರ್ಫಾನ್(28) ಎಂಬಾತನ ಕೊಲೆಯಾಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸ್ನೇಹಿತನಿಂದಲೇ ಇರ್ಫಾನ್(28) ಎಂಬಾತನ ಕೊಲೆಯಾಗಿದೆ. ಅಶೋಕನಗರದ ಆನೇಪಾಳ್ಯದಲ್ಲಿ ಖಾಸಿಂ ಎಂಬಾತ ವೈಯಕ್ತಿಕ ದ್ವೇಷದ ಹಿನ್ನೆಲೆ ನಿನ್ನೆ ರಾತ್ರಿ 1 ಗಂಟೆ ವೇಳೆ ಚಾಕುವಿನಿಂದ ಹಲ್ಲೆ ನಡೆಸಿ, ಇರ್ಫಾನ್ ಎಡ ತೊಡೆಗೆ ಚಾಕುವಿನಿಂದ ಇರಿದಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇರ್ಫಾನ್ (28) ಕೊನೆಯುಸಿರೆಳೆದಿದ್ದಾನೆ. ಇರ್ಫಾನ್, ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ. ಅಶೋಕನಗರ ಪೊಲೀಸರು ಕೊಲೆ ಆರೋಪಿ ಖಾಸಿಂನನ್ನು ವಶಕ್ಕೆ ಪಡೆದಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿ ಘಟನೆ ಆದ ಬೆನ್ನಲ್ಲೇ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ ಗೌಡ ಸ್ಥಳಕ್ಕೆ ದೌಡಾಯಿಸಿದರು. ಸ್ಥಳದಲ್ಲಿ ನಾಲ್ವರಿದ್ದು, ಉಳಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.