ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್

ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಇಲ್ಲದೇ ರೀಲ್ಸ್ ಮಾಡಲು ಯುವಕರ ಹೊಸ ಪ್ಲಾನ್: ಚುರುಕಾದ ಟ್ರಾಫಿಕ್ ಪೊಲೀಸ್
ನಂಬರ್ ಪ್ಲೇಟ್ ಬ್ಲರ್ ಮಾಡಿರುವ ರೀಲ್​ಗಳು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 16, 2022 | 1:52 PM

ಬೆಂಗಳೂರು: ಬೈಕ್​ ಮೇಲೆ ಸ್ಟಂಟ್ ಮಾಡಿ ರೀಲ್ಸ್​ ಮಾಡುತ್ತಿದ್ದ ಪುಂಡರನ್ನು ಟ್ರಾಫಿಕ್ ಪೊಲೀಸರು ಹುಡುಹುಡುಕಿ ದಂಡ ಹಾಕಲು ಶುರು ಮಾಡಿದ್ದಾರೆ. ಪೊಲೀಸರು ಚಾಪೆ ಕೆಳಗೆ ನುಸುಳಿದರೆ, ಪುಂಡರು ರಂಗೋಲಿ ಕೆಳಗೆ ನುಸುಳುವ ಚಾಣಾಕ್ಷತೆ ತೋರಿಸುತ್ತಾ ರೀಲ್ಸ್ ಮಾಡುತ್ತಿದ್ದಾರೆ. ಬ್ಲರ್ ಮಾಡುವ ಆಯ್ಕೆ ಬಳಸುತ್ತಿರುವ ಪುಂಡರು ರೀಲ್ಸ್​ಗಳಲ್ಲಿ ಬೈಕ್​ಗಳ ನಂಬರ್​ ಪ್ಲೇಟ್ ಕಾಣದಂತೆ ಎಚ್ಚರವಹಿಸುತ್ತಿದ್ದಾರೆ.

ಹೆಲ್ಮೆಟ್ ಧರಿಸದೇ ವಾಹನ ಸವಾರಿ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೊ, ವಿಡಿಯೊ ಹಾಕುವವರನ್ನು ಪೊಲೀಸರು ಎಚ್ಚರಿಕೆಯಿಂದ ಗಮನಿಸುತ್ತಿದ್ದಾರೆ. ನಂಬರ್​ ಪ್ಲೇಟ್ ಮೂಲಕ ವಾಹನಗಳ ಮಾಲೀಕರನ್ನು ಗುರುತಿಸಿ, ದಂಡದ ನೊಟೀಸ್​ಗಳನ್ನು ಕಳಿಸುತ್ತಿದ್ದಾರೆ. ಸಿಗ್ನಲ್ ಉಲ್ಲಂಘನೆ ಅಥವಾ ಬೇರೊಂದು ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರ ಕೈಗೆ ಸಿಕ್ಕಿ ಬೀಳುವ ವಾಹನ ಸವಾರರು ಹಳೆಯ ತಪ್ಪುಗಳ ದಂಡವನ್ನೂ ಸೇರಿಸಿ ಕಟ್ಟಬೇಕಾಗುತ್ತದೆ. ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ರೀಲ್ಸ್​ ಮಾಡುತ್ತಿದ್ದವರಿಗೆ ಪೊಲೀಸರು ಇದೇ ರೀತಿ ದಂಡದ ಮೂಲಕ ಚುರುಕು ಮುಟ್ಟಿಸಿದ್ದರು.

ಪೊಲೀಸರ ಕ್ರಮದಿಂದ ತಪ್ಪಿಸಿಕೊಳ್ಳಲು ರೀಲ್ಸ್​ ಪುಂಡರು ಇದೀಗ ಮತ್ತೊಂದು ಉಪಾಯ ಕಂಡುಕೊಂಡಿದ್ದಾರೆ. ಅದೇ ‘ದಚ್ಚು ದಿವು’ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ಹಲವು ರೀಲ್ಸ್​ಗಳು ಪತ್ತೆಯಾಗಿವೆ. ಸಂಚಾರ ಪೊಲೀಸರಿಗೆ ಈ ಹಿಂದೆ ₹ 17,500 ದಂಡವನ್ನು ಪಾವತಿಸಿದ್ದರು. ಆದರೆ ಈಗ ಹೊಸ ಉಪಾಯದಿಂದ ರೀಲ್ಸ್​ ಮಾಡುತ್ತಿದ್ದು, ನಂಬರ್ ಪ್ಲೇಟ್ ಕಾಣಿಸದ ರೀತಿಯಲ್ಲಿ ಎಚ್ಚರ ವಹಿಸುತ್ತಿದ್ದಾರೆ. ಇದನ್ನು ಮಟ್ಟ ಹಾಕುವುದು ಹೇಗೆ ಎಂದು ಪೊಲೀಸರು ಚಿಂತನೆ ನಡೆಸಿದ್ದಾರೆ.

Published On - 1:52 pm, Sun, 16 October 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?