ಬೆಂಗಳೂರಿನಲ್ಲಿ ಮಾದಕ ಜಾಲ: ಪ್ರಖ್ಯಾತ ಯೂಟ್ಯೂಬರ್, ಇಬ್ಬರು ವಿದೇಶಿ ಮಹಿಳಾ ಡ್ರಗ್ ಪೆಡ್ಲರ್​ಗಳ ಬಂಧನ

Youtuber Ebazee Justice: ಆರೋಪಿಗಳು ಸ್ಟೂಡೆಂಟ್ಸ್ ವೀಸಾದಡಿ ಭಾರತಕ್ಕೆ ಬಂದಿದ್ದರು. ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಿದ್ರು. ಆರೋಪಿ ಜಸ್ಟೀಸ್ ಒಬೆಜೋ ಈ ಹಿಂದೆ ಜೆ.ಬಿ. ನಗರ ಠಾಣಾ ವ್ಯಾಪ್ತಿಯಲ್ಲೂ ಸಿಕ್ಕಿಬಿದ್ದಿದ್ದ. ಡ್ರಗ್ಸ್​​ ಕೇಸ್ ನಲ್ಲಿ ಸಿಕ್ಕಿಬಿದ್ದು, ಜಾಮೀನಿನ ಮೇಲೆ ಹೊರ ಬಂದಿದ್ದ.

ಬೆಂಗಳೂರಿನಲ್ಲಿ ಮಾದಕ ಜಾಲ: ಪ್ರಖ್ಯಾತ ಯೂಟ್ಯೂಬರ್, ಇಬ್ಬರು ವಿದೇಶಿ ಮಹಿಳಾ ಡ್ರಗ್ ಪೆಡ್ಲರ್​ಗಳ ಬಂಧನ
ಬೆಂಗಳೂರಿನಲ್ಲಿ ಮಾದಕ ಜಾಲ: ಪ್ರಖ್ಯಾತ ಯೂಟ್ಯೂಬರ್, ಇಬ್ಬರು ವಿದೇಶಿ ಮಹಿಳಾ ಡ್ರಗ್ಸ್ ಪೆಡ್ಲರ್​ಗಳ ಬಂಧನ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 09, 2022 | 8:29 PM

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡ್ತಿದ್ದ ಯೂ ಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಪ್ರಖ್ಯಾತ ಯೂಟ್ಯೂಬರ್ ಮೋಲಾ ಅಲಿಯಾಸ್ ಜಸ್ಟಿಸ್ ಒಬೆಜೊ (Youtuber Ebazee Justice) ಮತ್ತು ಆತನ ಸ್ನೇಹಿತ ಸ್ಯಾಮುಯಲ್ ಅಲಿಯಾಸ್ ಸ್ಯಾಮ್ ನನ್ನು ಕೆ.ಜಿ ಹಳ್ಳಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಆರೋಪಿಗಳು ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯ ಟೀಚರ್ಸ್ ಅಕಾಡೆಮಿ ಬಳಿ ಡ್ರಗ್ಸ್​​ ಮಾರಾಟಕ್ಕೆ ಯತ್ನಿಸ್ತಿದ್ದರು. ಖಚಿತ ಮಾಹಿತಿ ಆಧರಿಸಿ, ದಾಳಿ ನಡೆಸಿದ ಕಾಡುಗೊಂಡನ ಹಳ್ಳಿ ಪೊಲೀಸರು (KG Halli Police) ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳನ್ನ ಬಂಧಿಸಿ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಜಪ್ತಿ ಮಾಡಿದ್ದಾರೆ.

ಸ್ಟೂಡೆಂಟ್ಸ್ ವೀಸಾದಡಿ ಭಾರತಕ್ಕೆ ಬಂದಿದ್ದ ಆರೋಪಿಗಳು

ಆರೋಪಿಗಳು ಸ್ಟೂಡೆಂಟ್ಸ್ ವೀಸಾದಡಿ ಭಾರತಕ್ಕೆ ಬಂದಿದ್ದರು. ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಿದ್ರು. ಆರೋಪಿ ಜಸ್ಟೀಸ್ ಒಬೆಜೋ ಈ ಹಿಂದೆ ಜೆ.ಬಿ. ನಗರ ಠಾಣಾ ವ್ಯಾಪ್ತಿಯಲ್ಲೂ ಸಿಕ್ಕಿಬಿದ್ದಿದ್ದ. ಡ್ರಗ್ಸ್​​ ಕೇಸ್ ನಲ್ಲಿ ಸಿಕ್ಕಿಬಿದ್ದು (drug peddler), ಜಾಮೀನಿನ ಮೇಲೆ ಹೊರ ಬಂದಿದ್ದ. ಆರೋಪಿಗಳು ಜೈಲಿನಿಂದ ಹೊರ ಬಂದು ಮತ್ತೆ ಅದೇ ಚಾಳಿ ಮುಂದುವರೆಸಿದ್ದರು. ಸದ್ಯ ಕೆ.ಜಿ. ಹಳ್ಳಿ ಪೊಲೀಸರು ಆರೋಪಿಗಳನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸ್ತಿದಾರೆ.

ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಮಹಿಳಾ ಡ್ರಗ್ ಪೆಡ್ಲರ್​ಗಳ ಬಂಧನ

ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಮಹಿಳಾ ಡ್ರಗ್ ಪೆಡ್ಲರ್​ಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ನಮೂಟೆಬಿ ಶಮೀರಾ, ನಫೀಕಾ ಫ್ಯೂಯೆನಿ ಬಂಧಿತ ಆರೋಪಿಗಳು. 1.5 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟಲ್​, 2 ಮೊಬೈಲ್​ಗಳ​ನ್ನು ಜಪ್ತಿ ಮಾಡಲಾಗಿದೆ. ಮೆಡಿಕಲ್ ವೀಸಾ, ಟೂರಿಸ್ಟ್ ವೀಸಾದಲ್ಲಿ ಈ ಮಹಿಳೆಯರು ಬಂದಿದ್ದರು. ಬಾಣಸವಾಡಿ ಬಿಡಿಎ ಪಾರ್ಕ್​ ಬಳಿ ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ ವೇಳೆ ಬಂಧನಕ್ಕೊಳಗಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ