ಲೋಕಸಭಾ ಚುನಾವಣೆ ಹೊಸ್ತಿನಲ್ಲಿ ಯುವ ಸಮುದಾಯದ ಮತಬೇಟೆಗೆ ಇಳಿದ ಕಾಂಗ್ರೆಸ್, ಇಂದಿನಿಂದ ಯುವ ನಿಧಿ ನೋಂದಣಿ ಆರಂಭ

ಲೋಕಸಭಾ ಚುನಾವಣೆ (Lok Sabha) ಹೊಸ್ತಿನಲ್ಲಿ ಕಾಂಗ್ರೆಸ್ ಐದನೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ಇಂದಿನಿಂದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.

ಲೋಕಸಭಾ ಚುನಾವಣೆ ಹೊಸ್ತಿನಲ್ಲಿ ಯುವ ಸಮುದಾಯದ ಮತಬೇಟೆಗೆ ಇಳಿದ ಕಾಂಗ್ರೆಸ್, ಇಂದಿನಿಂದ ಯುವ ನಿಧಿ ನೋಂದಣಿ ಆರಂಭ
ಯುವ ನಿಧಿ ಯೋಜನೆ
Follow us
Anil Kalkere
| Updated By: ಆಯೇಷಾ ಬಾನು

Updated on:Dec 26, 2023 | 7:33 AM

ಬೆಂಗಳೂರು, ಡಿ.26: ನಾವು ನುಡಿದಂತೆ ನಡೆಯುತ್ತೇವೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಜ್ಯಾಡಳಿತ ನಡೆಸುತ್ತಿರುವ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ (Congress Government) ಅದನ್ನ ಮತ್ತೊಮ್ಮೆ ಸಾಭೀತು ಮಾಡಿದೆ. ಕೊಟ್ಟ ಮಾತಿನಂತೆ ತನ್ನ ಕೊನೆಯ ಗ್ಯಾರಂಟಿ ಯೋಜನೆ ಯುವ ನಿಧಿಯನ್ನ (Yuva Nidhi Scheme) ತಿಂಗಳಾಂತ್ಯಕ್ಕೆ ಜಾರಿ ಮಾಡಲು ಮುಂದಾಗಿದೆ. ಲೋಕಸಭಾ ಚುನಾವಣೆ (Lok Sabha) ಹೊಸ್ತಿನಲ್ಲಿ ಕಾಂಗ್ರೆಸ್ ಐದನೇ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ಇಂದಿನಿಂದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.

ಡಿಸೆಂಬರ್ ತಿಂಗಳ 26ರಂದು ಯುವ ನಿಧಿ ಯೋಜನೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಸಲುವಾಗಿನ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಯುವನಿಧಿ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇನ್ನು ರಾಷ್ಟ್ರ ಕವಿ, ಯುವ ಸಮುದಾಯದ ಸ್ಪೂರ್ತಿ ಕುವೆಂಪುರವರ ಪುಣ್ಯಭೂಮಿ ಶಿವಮೊಗ್ಗದಲ್ಲಿ 2024ರ ಜನವರಿ 12ರಂದು ಈ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಅಂದೇ ಯೂತ್ ಐಕಾನ್ ವಿವೇಕಾನಂದರ ಜನ್ಮ ಜಯಂತಿ ಅನ್ನೋದು ಮತ್ತೊಂದು ಗಮನಾರ್ಹ ವಿಚಾರ.

ಪ್ರಸಕ್ತ ಸಾಲಿನಲ್ಲಿ ಯೋಜನಾ ಗಾತ್ರ 250 ಕೋಟಿಯಾಗಿದ್ದು ಮುಂದಿನ ವರ್ಷ ಇದರ ಪ್ರಮಾಣ 1,250 ಕೋಟಿಗಳಾಗಲಿದೆ. ರಾಜ್ಯದ ವಿಧ್ಯಾರ್ಥಿಗಳಿಗೆ ಮಾತ್ರ ಯೋಜನೆ ಲಾಭ ದೊರೆಯಲಿದೆ. ಇನ್ನು ಯೋಜನೆ ದುರ್ಬಳಕೆ ತಡೆಗೂ ಸರ್ಕಾರ ಕ್ರಮ ಕೈಗೊಂಡಿದೆ. ಯುವಕರಿಗೆ ಕೆಲಸ ಸಿಗುವವರೆಗೆ ಯೋಜನೆ ಹಣ ಲಭ್ಯವಾಗತ್ತೆ ಇದಕ್ಕಾಗಿ ಅವರು ಪ್ರತಿ ತಿಂಗಳ 25ನೇ ತಾರೀಖಿನೊಳಗೆ ತಮ್ಮ ಅರ್ಜಿಯಲ್ಲಿ ನಿಖರ ಮಾಹಿತಿ ನಮೂದು ಮಾಡಬೇಕು. ಜೊತೆಗೆ ಯೋಜನೆ ಹಣ ಪಡೆಯುವವರ ಬಗ್ಗೆ ಸಮಗ್ರ ಮಾಹಿತಿಯನ್ನು ಸರ್ಕಾರ ಕಲೆ ಹಾಕಲಿದೆ. ಒಂದು ವೇಳೆ ಕೆಲಸ ಸಿಕ್ಕ ಬಳಿಕವೂ ಹಣ ಪಡೆಯುವುದು ಕಂಡುಬಂದರೆ ಅವರಿಂದ ಹಣ ವಾಪಾಸ್ ಪಡೆದುಕೊಳ್ಳಲು ಸರ್ಕಾರ ಪ್ಲಾನ್ ಮಾಡಿದೆ. ಯುವನಿಧಿ ಅರ್ಜಿ ಸಲ್ಲಿಕೆಯನ್ನ ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಸೇವಾಸಿಂಧು ಪೋರ್ಟ್ ಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಇದನ್ನೂ ಓದಿ: ಡಿಸೆಂಬರ್ 26ರಂದು ‘ಯುವನಿಧಿ’ ನೋಂದಣಿಗೆ ಚಾಲನೆ: ಸಚಿವ ಶರಣಪ್ರಕಾಶ್ ಪಾಟೀಲ್ ಘೋಷಣೆ

ಯುವನಿಧಿ ಯೋಜನೆ ಸದುಪಯೋಗ ಪಡೆದುಕೊಳ್ಳಲು ಬೇಕಾದ ಅರ್ಹತೆಗಳೇನು?

  • 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿರಬೇಕು
  • ಉನ್ನತ ಶಿಕ್ಷಣ ವ್ಯಾಸಾಂಗ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಬಹುದು
  • ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ
  • ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೋಮಾ ಹೊಂದಿರುವವರಿಗೆ 1,500 ರೂ. ಆರ್ಥಿಕ ನೆರವು
  • ಉದ್ಯೋಗ ಸಿಗುವವರೆಗೆ ಅಥವಾ 2 ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತೆ.

ಯುವನಿಧಿಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

  • ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು.
  • ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ ಇರಬೇಕು
  • ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ), ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.
  • ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ.
  • ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ಸ್ಥಗಿತಗೊಳ್ಳಲಿದೆ.

ಯೋಜನೆಗೆ ಅರ್ಹರಾಗದೇ ಇರುವವರು

  • ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ
  • Apprentice ವೇತನವನ್ನು ಪಡೆಯುತ್ತಿರುವವರು
  • ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು
  • ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರಿಗೆ ಯೋಜನೆಯ ಫಲ ಸಿಗುವುದಿಲ್ಲ.ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:29 am, Tue, 26 December 23

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ