AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮೇಲಿನ ಲೋಕಾಯುಕ್ತ ಕೇಸ್​​ಗೆ ಹೈಕೋರ್ಟ್​​ ತಡೆ

ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮೇಲಿನ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾಗಿ ಅರ್ಜಿದಾರರು ವಾದಿಸಿದ್ದರೆ, ಶೇ.131ರಷ್ಟು ಆದಾಯ ಮೀರಿ ಆಸ್ತಿ ಗಳಿಕೆ ಕಂಡುಬಂದಿದೆ ಎಂದು ಲೋಕಾಯುಕ್ತ ಹೇಳಿದೆ. ಅಂತಿಮವಾಗಿ ಐಟಿ ಇಲಾಖೆಗೆ ಎಲ್ಲ ಆದಾಯ ಘೋಷಿಸಿದ್ದಾರೆಯೇ ಇಲ್ಲವೇ ಎಂದು ಫೆ.27ಕ್ಕೆ ಮಾಹಿತಿ ನೀಡಲು ಸೂಚಿಸಿ ತನಿಖೆಗೆ ತಡೆ ನೀಡಿ ಕೋರ್ಟ್ ಆದೇಶಿಸಿದೆ.

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಮೇಲಿನ ಲೋಕಾಯುಕ್ತ ಕೇಸ್​​ಗೆ ಹೈಕೋರ್ಟ್​​ ತಡೆ
ಸರ್ದಾರ್ ಸರ್ಫರಾಜ್ ಖಾನ್​​ಗೆ ತಾತ್ಕಾಲಿಕ ರಿಲೀಫ್​Image Credit source: Tv9 Kannada
ರಮೇಶ್​ ಎಮ್​.
| Edited By: |

Updated on: Feb 12, 2026 | 3:59 PM

Share

ಬೆಂಗಳೂರು, ಫೆಬ್ರವರಿ 12: ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​ಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿ ಆದೇಶಿಸಿದೆ. ಅರ್ಜಿದಾರರ ಪರ ವಾದಿಸಿದ್ದ ಹಿರಿಯ ವಕೀಲ ಸಿ.ಹೆಚ್.ಜಾಧವ್, ಆಸ್ತಿಗಳ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಘೋಷಣೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಆದರೆ ಲೋಕಾಯುಕ್ತ ಪರ ವಕೀಲ ಬಿ.ಬಿ.ಪಾಟೀಲ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಶೀಲನೆಯಲ್ಲಿ ಶೇ.131ರಷ್ಟು ಆದಾಯ ಮೀರಿದ ಆಸ್ತಿ ಗಳಿಕೆ ಕಂಡುಬಂದಿದೆ. ಸರ್ದಾರ್ ಸರ್ಫರಾಜ್ ಖಾನ್, 2 ಕೋಟಿ 80 ಲಕ್ಷ ಕೃಷಿ ಆದಾಯ ಘೋಷಿಸಿಕೊಂಡಿದ್ದಾರೆ. ಆದರೆ ಅದಕ್ಕೆ ಆಧಾರ ಒದಗಿಸಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಐಟಿ ಇಲಾಖೆಗೆ ಎಲ್ಲ ಆದಾಯ ಘೋಷಿಸಿದ್ದಾರೆಯೇ ಇಲ್ಲವೇ ಎಂದು ಫೆ.27ಕ್ಕೆ ಮಾಹಿತಿ ನೀಡಲು ಸೂಚಿಸಿ ತನಿಖೆಗೆ ತಡೆ ನೀಡಿ ಆದೇಶಿಸಿದೆ.

ಸರ್ದಾರ್ ಸರ್ಫರಾಜ್ ಖಾನ್ ನಿವಾಸದಲ್ಲಿ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದರು. 8.44 ಕೋಟಿ ರೂ. ಮೌಲ್ಯ ಸ್ಥಿರಾಸ್ತಿ ಮತ್ತು 5.93 ಕೋಟಿ ರೂ. ಮೊತ್ತದ ಚರಾಸ್ತಿ ದಾಳಿ ವೇಳೆ ಪತ್ತೆಯಾಗಿದೆ. 4 ವಾಸದ ಮನೆ ಮತ್ತು 35 ಎಕರೆ ಕೃಷಿ ಜಮೀನು ದಾಖಲೆ, 66,500 ಹಣ, 2.99 ಲಕ್ಷ ಮೌಲ್ಯದ ಚಿನ್ನ, 1.29 ಕೋಟಿ ಎಫ್​ಡಿ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿತ್ತು.

ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತು ಇದೆ ಗೊತ್ತೇ?

ಬೆಂಗಳೂರಿನ ಹಲಸೂರು ನಿವಾಸ, ಇತರ ಆರು ಮನೆಗಳು ಸೇರಿದಂತೆ ಒಟ್ಟು ಏಳು ಮನೆಗಳು, ಕೊಡಗಿನಲ್ಲಿರುವ ಎರಡು ಕಾಫಿ ಎಸ್ಟೇಟ್‌ಗಳು ಮತ್ತು ಹೆಚ್.ಡಿ.ಕೋಟೆಯಲ್ಲಿನ ಒಂದು ರೆಸಾರ್ಟ್ ಒಳಗೊಂಡು ಸರ್ಫರಾಜ್ ಖಾನ್​​ಗೆ​​ ಸೇರಿದ ಒಟ್ಟು 13 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.24 ಬೆಳ್ಳಂ ಬೆಳಿಗ್ಗೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಎಲ್ಲಾ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಆಸ್ತಿ ವಿವರಗಳ ಸಂಗ್ರಹ ಕಾರ್ಯ ನಡೆಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ