AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದೆಲ್ಲ ನಮಗೂ ಗೊತ್ತು, ಸಚಿವರಾಗಿ ನೀವೇನು ಮಾಡಿದ್ದೀರಿ ಬೆಂಗಳೂರಿಗೆ: ಪ್ರಿಯಾಂಕ್ ಖರ್ಗೆಗೆ ಮೋಹನ್ ದಾಸ್ ಪೈ ಪ್ರಶ್ನೆ

ಉದ್ಯಮಿ ಮೋಹನ್ ದಾಸ್ ಪೈ ಬೆಂಗಳೂರಿನ ಮೂಲಸೌಕರ್ಯದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರು ಸ್ವಚ್ಛ ಮತ್ತು ನಡೆದಾಡಲು ಅನುಕೂಲಕರವಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ. ಬೆಂಗಳೂರಿನ ಹೆಗ್ಗಳಿಕೆಗಳಿಗೆ ಸಂಬಂಧಿಸಿ ಖರ್ಗೆ ಮಾಡಿರುವ ಟ್ವೀಟ್​ಗೆ ಪ್ರತಿಕ್ರಿಯಿಸಿದ ಪೈ, ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ.

ಅದೆಲ್ಲ ನಮಗೂ ಗೊತ್ತು, ಸಚಿವರಾಗಿ ನೀವೇನು ಮಾಡಿದ್ದೀರಿ ಬೆಂಗಳೂರಿಗೆ: ಪ್ರಿಯಾಂಕ್ ಖರ್ಗೆಗೆ ಮೋಹನ್ ದಾಸ್ ಪೈ ಪ್ರಶ್ನೆ
ಮೋಹನ್ ದಾಸ್ ಪೈ ಹಾಗೂ ಪ್ರಿಯಾಂಕ್ ಖರ್ಗೆ
Follow us
Ganapathi Sharma
|

Updated on: Feb 25, 2025 | 2:56 PM

ಬೆಂಗಳೂರು, ಫೆಬ್ರವರಿ 25: ‘‘ರಾಜ್ಯ ಸರ್ಕಾರದ ಸಚಿವರಾಗಿ ಬೆಂಗಳೂರಿಗೆ ನೀವೇನು ಮಾಡಿದ್ದೀರಿ? ಮೊದಲು ಸ್ವಚ್ಛ ಮತ್ತು ಸರಿಯಾಗಿ ನಡೆದಾಡಬಲ್ಲಂಥ ನಗರವನ್ನು ನಮಗೆ ಕೊಡಿ’’ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಇನ್ಫೋಸಿಸ್ ಮಾಜಿ ಸಿಎಫ್ಓ ಮೋಹನ್ ದಾಸ್ ಪೈ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಪ್ರಿಯಾಂಕ್ ಖರ್ಗೆ ಸಂದೇಶಕ್ಕೆ ಪ್ರತಿಕ್ರಿಯೆ ನೀಡಿರುವ ಪೈ, ಸಚಿವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅತಿ ಹೆಚ್ಚಿನ ಮೌಲ್ಯ ಹೊಂದಿರುವ ಹೆಚ್ಚು ಕಂಪನಿಗಳನ್ನು ಒಳಗೊಂಡಿರುವ ಭಾರತದ ನಗರಗಳ ಪೈಕಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ ಎಂಬ ಹರುನ್ ವರದಿಯನ್ನು ಪ್ರಿಯಾಂಕ್ ಖರ್ಗೆ ಎಕ್ಸ್​ನಲ್ಲಿ ಹಂಚಿಕೊಂಡಿದ್ದರು. ಜತೆಗೆ ಬೆಂಗಳೂರಿನ ಹೆಗ್ಗಳಿಕೆಗಳನ್ನು ಪಟ್ಟಿ ಮಾಡಿದ್ದರು. ಇದು ಮೋಹನ್ ದಾಸ್ ಪೈ ಅವರನ್ನು ಕೆರಳಿಸಿದೆ. ಇದಕ್ಕೆ ಅವರು ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಮೋಹನ್ ದಾಸ್ ಪೈ ಸಂದೇಶದಲ್ಲಿ ಏನಿದೆ?

‘‘ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಇದು ನಮಗೆ ಗೊತ್ತಿದೆ. ನಮ್ಮ ಜೀವನ ಮಟ್ಟವನ್ನು ಸುಧಾರಿಸಲು ಒಬ್ಬ ಸಚಿವರಾಗಿ ನೀವೇನು ಮಾಡಿದ್ದೀರಿ? ಸ್ವಚ್ಛ ನಗರ, ಗುಂಡಿಗಳಿಲ್ಲದ ರಸ್ತೆ ಮತ್ತು ಸರಿಯಾದ ಫುಟ್​ಪಾತ್ ಅನ್ನು ಒದಗಿಸಿಕೊಡುವುದು ನಿಮ್ಮಿಂದ ಸಾಧ್ಯವಾಗಿಲ್ಲ. ಇದೇನು ದೊಡ್ಡ ರಾಕೆಟ್ ಸೈನ್ಸ್ ಅಲ್ಲ, ಸಾಧಾರಣ ನಿರ್ವಹಣೆ ಪ್ರಕ್ರಿಯೆ ಅಷ್ಟೇ. ದಯಮಾಡಿ ಡಿಕೆ ಶಿವಕುಮಾರ್ ಅವರ ಜೊತೆ ಮಾತನಾಡಿ ನಮಗೆ ಸ್ವಚ್ಛ ಮತ್ತು ನಡೆದಾಡಬಲ್ಲಂತಹ ನಗರವನ್ನು ಒದಗಿಸಿಕೊಡಿ. ಕಳೆದ ಎರಡು ವರ್ಷಗಳಿಂದ ನಮ್ಮ ಜೀವನ ದುಸ್ತರವಾಗಿದೆ’’ ಎಂದು ಮೋಹನ್ ದಾಸ್ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಮೋಹನ್ ದಾಸ್ ಪೈ ಟ್ವೀಟ್

ರಾಜ್ಯಸಭೆ ಸದಸ್ಯ ಸ್ಥಾನ ಬೇಕಿದೆ ಅನ್ಸುತ್ತೆ: ಪ್ರಿಯಾಂಕ್ ಖರ್ಗೆ ತಿರುಗೇಟು

ಮೋಹನ್ ದಾಸ್ ಪೈ ಟೀಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಮೋಹನ್ ದಾಸ್ ಪೈ ಸುಮ್ಮನೇ ಸರ್ಕಾರವನ್ನು ಟೀಕೆ ಮಾಡುತ್ತಿದ್ದಾರೆ. ಅವರಿಗೆ ಕೇಂದ್ರದಲ್ಲಿ ಉನ್ನತ ಹುದ್ದೆ ಬೇಕಾಗಿದೆ. ರಾಜ್ಯಸಭೆ ಸದಸ್ಯ ಸ್ಥಾನ ಬೇಕಿದೆ ಅನಿಸುತ್ತೆ. ಅದಕ್ಕೆ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ ಒಂದು ಗುಂಡಿಯನ್ನು ಮುಚ್ಚುವ ಯೋಗ್ಯತೆ ಈ ಸರ್ಕಾರಕ್ಕಿಲ್ಲ: ಬಿವೈ ವಿಜಯೇಂದ್ರ

ಹಿಂದೆ ಮೋಹನ್ ದಾಸ್ ಪೈ ತಾನೇ ಬೇರೆ ಬೇರೆ ಹುದ್ದೆಯಲ್ಲಿ‌ದ್ದವರು. ರಾಜ್ಯದಲ್ಲಿ ಸರ್ಕಾರ ಬದಲಾವಣೆ ಆದ್ಮೇಲೆ ಇವರ ವರಸೆ ಬದಲಾಗಿದೆ. ಅದಕ್ಕಾಗಿಯೇ ಸಿದ್ದರಾಮಯ್ಯ, ಡಿಕೆಶಿ, ಪ್ರಿಯಾಂಕ್ ಖರ್ಗೆಯನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅವರು ಈಗ ಸೋಷಿಯಲ್ ಮಿಡಿಯಾ ವಾರಿಯರ್ಸ್‌ ಆಗಿದ್ದಾರೆ. ಈ ಮೊದಲು 6 ತಿಂಗಳಿಗೆ ಒಮ್ಮೆ ಮಾತನಾಡುತ್ತಿದ್ದರು. ಈಗ ಪ್ರತಿ ವಾರವೂ ಸಚಿವರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಐಟಿ ಸರ್ವೀಸ್ ಕಡಿಮೆ ಆಗುವ ಹಾಗೆ ಟ್ರಂಪ್ ಮಾತನಾಡಿದ್ದಾರೆ. ಅದರ ಬಗ್ಗೆ ಪೈ ಮಾತನಾಡಲ್ಲ ಎಂದು ಪ್ರಿಯಾಂಕ್ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್