ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ?

Power Tariff Hike: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ(ಬೆಸ್ಕಾಂ) ಸೇರಿ ಕರ್ನಾಟಕದ ಎಲ್ಲ ಎಸ್ಕಾಂಗಳು ತನ್ನ ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಮುಂದಾಗಿವೆ. ಪ್ರತಿ ಯುನಿಟ್ ದರ ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಹಾಗಾದ್ರೆ, ಪ್ರತಿ ಯುನಿಟ್​ಗೆ ಎಷ್ಟು ಹೆಚ್ಚಳ? ಯಾವಾಗಿನಿಂದ ಹೊಸ ದರ ಜಾರಿಗೆ ಬರಬಹುದು ಎನ್ನುವ ವಿವರ ಇಲ್ಲಿದೆ.

ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ?
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Dec 06, 2024 | 3:52 PM

ಬೆಂಗಳೂರು(ಡಿಸೆಂಬರ್ 06): ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ(ಬೆಸ್ಕಾಂ) ಸೇರಿ ಕರ್ನಾಟಕದ ಎಲ್ಲ ಎಸ್ಕಾಂಗಳು ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್​ ಮಾಡಿವೆ. ಮುಂದಿನ ಮೂರು ವರ್ಷಗಳಿಗೆ ಅನುಗುಣವಾಗುವಂತೆ ಪ್ರತಿ ಯುನಿಟ್​ ದರ ಏರಿಕೆಗೆ ಮುಂದಾಗಿವೆ. 2025-26 ರಲ್ಲಿ ಪ್ರತಿ ಯೂನಿಟ್ ಗೆ 67 ಪೈಸೆ, 2026-27 ರಲ್ಲಿ ಪ್ರತಿ ಯೂನಿಟ್​ಗೆ 75 ಪೈಸೆ ಹಾಗೂ 2027-28 ರಲ್ಲಿ 91 ಪೈಸೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.30 ಕೊನೆಯ ದಿನವಾಗಿತ್ತು. ಆ ಗಡುವಿನೊಳಗೆ ಎಲ್ಲಾ ಎಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿವೆ. ದರ ಏರಿಕೆ ಒಟ್ಟೊಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಲಿದೆ ಎಂದು ಕೆಇಆರ್‌ಸಿ ಮೂಲಗಳು ತಿಳಿಸಿವೆ.

ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನವೆಂಬರ್ 30 ಕೊನೆ ದಿನವಾಗಿತ್ತು. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಫೆಬ್ರುವರಿಯಲ್ಲಿ ಉದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು, ತಜ್ಞರ ಸಭೆ ನಡೆಸಲಿದ್ದು, ಅಹವಾಲು ಸ್ವೀಕಾರ ಮಾಡಲಿದೆ. ಬಳಿಕ ಸಾಧಕ ಸಾಧಕ ಗಳ ಪರಿಶೀಲನೆ ಮಾಡಿ, ಪರ ವಿರೋಧಗಳ ಆಲಿಕೆ ನಂತರ ಮಾರ್ಚ್ ತಿಂಗಳಲ್ಲಿ ‌ದರ ಏರಿಕೆ ಬಗ್ಗೆ ಅಂತಿಮ ಆದೇಶ ಹೊರಡಿಸಲಿದ್ದು, ಏಪ್ರಿಲ್ 1 2025 ರಿಂದ ನೂತನ ದರ ಜಾರಿ ಬರುವ ಸಾಧ್ಯತೆಗಳಿವೆ.

ಇದನ್ನೂ ಓದಿ: ನೀರಿನ ದರ ಹೆಚ್ಚಳ ಸುಳಿವು ನೀಡಿದ ಬೆಂಗಳೂರು ಜಲಮಂಡಳಿ: ಡಿಕೆಶಿ ನೇತೃತ್ವದ ಮುಂದಿನ ಸಭೆಯಲ್ಲಿ ತೀರ್ಮಾನ ಸಾಧ್ಯತೆ

ಪ್ರಸ್ತಾವನೆಯಲ್ಲೇನಿದೆ?

ಮುಂದಿನ ಮೂರು ವರ್ಷಗಳ ಕಾಲ ಕ್ರಮವಾಗಿ ಪ್ರತಿ ಯುನಿಟ್‌ಗೆ 67 ಪೈಸೆ, 75 ಪೈಸೆ ಹಾಗೂ 91 ಪೈಸೆಯಂತೆ ದರ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬೆಸ್ಕಾಂ ಮನವಿ ಸಲ್ಲಿಸಿದೆ. ತನ್ನ ದರ ಪರಿಷ್ಕರಣೆಯ ಮನವಿ ಪ್ರಸ್ತಾವನೆಯಲ್ಲಿ ಮುಂದಿನ ವರ್ಷದಲ್ಲಿ (2025-26) ಬೆಸ್ಕಾಂಗೆ 2,572.69 ಕೋಟಿ ರು.ಗಳಷ್ಟು ಆದಾಯ ಕೊರತೆ ಉಂಟಾಗಲಿದೆ. ಇದನ್ನು ನೀಗಿಸಲು 2025ರ ಏ.1ರಿಂದ ಅನ್ವಯವಾಗುವಂತೆ 2025-26ರ ಸಾಲಿಗೆ ಪ್ರತಿ ಯುನಿಟ್‌ಗೆ 67 ಪೈಸೆಯಂತೆ ದರ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದೆ.

ಇನ್ನು 2026-27ನೇ ಆರ್ಥಿಕ ವರ್ಷದಲ್ಲಿ 3,018.95 ಕೋಟಿ ರೂ. ಆದಾಯ ಕೊರತೆ ಉಂಟಾಗಲಿದೆ. ಹೀಗಾಗಿ 2026-27ನೇ ಸಾಲಿಗೆ ಪ್ರತಿ ಯುನಿಟ್‌ ಗೆ 75 ಪೈಸೆ ದರ ಹೆಚ್ಚಳ ಮಾಡಬೇಕು. 2027-28ರಲ್ಲಿ 3,882.69 ಕೊರತೆ ಉಂಟಾಗಲಿದ್ದು, ಪ್ರತಿ ಯುನಿಟ್‌ಗೆ 91 ಪೈಸೆ ಪರಿಷ್ಕರಣೆ ಮಾಡಬೇಕು ಎಂದು ಬೆಸ್ಕಾಂ ಕೋರಿದೆ.

ಎಚ್‌ಟಿ ಗ್ರಾಹಕರಿಗೆ ನಿಗದಿತ ಶುಲ್ಕವನ್ನೂ ಪರಿಷ್ಕರಣೆ ಮಾಡಬೇಕು ಎಂಬುದು ಸೇರಿ ಹಲವು ಅಂಶಗಳನ್ನು ಪ್ರಸ್ತಾವನೆಯಲ್ಲಿ ಸಲ್ಲಿಕೆ ಮಾಡಿದೆ. ಬೆಸ್ಕಾಂ ಸೇರಿ ಎಲ್ಲಾ ಎಸ್ಕಾಂಗಳು ದರ ಏರಿಕೆ ಬಗ್ಗೆ ಪ್ರಸ್ತಾವನೆ ಮಾತ್ರ ಸಲ್ಲಿಸಿವೆ. ಈ ಬಗ್ಗೆ ಕೆಇಆರ್‌ಸಿಯು ಸಾರ್ವಜನಿಕರು, ಉದ್ಯಮಿಗಳು, ವ್ಯಾಪಾರಸ್ಥರು ಸೇರಿ ಎಲ್ಲಾ ವರ್ಗದವರಿಂದ ಅಹವಾಲು ಸ್ವೀಕರಿಸುತ್ತದೆ. ಬಳಿಕ ಅಂತಿಮವಾಗಿ ದರ ಹೆಚ್ಚಳದ ಅಂತಿಮ ಆದೇಶ ಹೊರಡಿಸುತ್ತದೆ. ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಈ ಆದೇಶ ಹೊರ ಬೀಳಲಿದ್ದು, 2025ರ ಏ.1ರಿಂದ ಪರಿಷ್ಕೃತ ದರ ಜಾರಿಗೆ ಬರುವ ಸಾಧ್ಯತೆಗಳು ಹೆಚ್ಚಿವೆ ಎಂದು ತಿಳಿದುಬಂದಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ