ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ

ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಸ್ಕಾಂ ಹೇಳಿದೆ. ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ, ವಾಣಿಜ್ಯ ಬಳಕೆ, ಅಪಾರ್ಟ್ಮೆಂಟ್​ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರಿಗೂ ಇದು ಅನ್ವಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ
ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ.1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on:Aug 30, 2024 | 8:21 PM

ಬೆಂಗಳೂರು, ಆಗಸ್ಟ್​ 30: ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ‌್ ಸಂಪರ್ಕ ಕಟ್​ ಬಿಸಿ ಮುಟ್ಟಿಸಲು ಬೆಸ್ಕಾಂ ಮುಂದಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸೆಪ್ಟೆಂಬರ್ 1ರಿಂದಲೇ ಕಟ್ಟುನಿಟ್ಟಾಗಿ ನಿಯಮ ಪಾಲನೆ ಜಾರಿಯಾಗಲಿದೆ ಎಂದು ತಿಳಿಸಿದೆ.

ಯಾವೆಲ್ಲಾ ನಿಯಮಗಳು ಜಾರಿ?

ನಿಗದಿತ 30 ದಿನದೊಳಗೆ ಬಿಲ್‌ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಸ್ಕಾಂ ಹೇಳಿದೆ. ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ, ವಾಣಿಜ್ಯ ಬಳಕೆ, ಅಪಾರ್ಟ್ಮೆಂಟ್​ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರಿಗೂ ಇದು ಅನ್ವಯವಾಗಲಿದೆ. ಮೀಟರ್‌ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್‌ ಸಂಪರ್ಕ ಕಡಿತ ಮಾಡಲಾಗುತ್ತಿದ್ದು, ಹಾಗಾಗಿ ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಬೆಸ್ಕಾಂನಿಂದ ಮನವಿ ಮಾಡಲಾಗಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್​ ಕಟ್​

ವಿದ್ಯುತ‌ ಬಿಲ್‌ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ‌ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ. ಗಳಿಗಿಂತ ಅಧಿಕವಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಬೆಸ್ಕಾಂ ಕಡಿತಗೊಳಿಸಲಿದೆ.

ಬೆಸ್ಕಾಂ ಟ್ವೀಟ್​ 

ಇನ್ನು ಕರ್ನಾಟಕ ವಿದ್ಯುತ್​ ಸರಬರಾಜು ನಿಗಮ ನಿಯಮಿತ ಲೈನ್‌ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿ ಸಲುವಾಗಿ ನಾಳೆ ಅಂದರೆ ಆಗಸ್ಟ್​ 31ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ವಿದ್ಯುತ್ ಅಡಚಣೆಗಾಗಿ ಬೆಸ್ಕಾಂ ವಿಷಾದಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:02 pm, Fri, 30 August 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ