AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಟರ್​​​ ರೀಡಿಂಗ್​​ ಇಲ್ಲ: ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ; ಯಾರಿಗೆಲ್ಲಾ ಅನ್ವಯ?

ಸದ್ಯ ರಾಜ್ಯದಲ್ಲಿ ಜುಲೈ 1ರಿಂದ ಗೃಹಜ್ಯೋತಿ ಗ್ಯಾರಂಟಿ ಯೋಜನೆ ಪರಿಶೀಲನೆ ಶುರುವಾಗಿದೆ. ಮನೆ ಮನೆಗೆ ಮೀಟರ್ ರೀಡರ್​​ಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಹೀಗಾಗಿ ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ. ಹಾಗಾದರೆ ಈ ತಿಂಗಳ ಕರೆಂಟ್​ ಬಿಲ್​​ ಬರುವುದಿಲ್ಲವಾ ಎಂಬ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ. ​​

ಮೀಟರ್​​​ ರೀಡಿಂಗ್​​ ಇಲ್ಲ: ಜುಲೈ ತಿಂಗಳ ಕರೆಂಟ್​ ಬಿಲ್​​ ಬರಲ್ಲ; ಯಾರಿಗೆಲ್ಲಾ ಅನ್ವಯ?
ಬೆಸ್ಕಾಂImage Credit source: Getty images
ಗಂಗಾಧರ​ ಬ. ಸಾಬೋಜಿ
|

Updated on:Jul 02, 2026 | 3:56 PM

Share

ಮುಖ್ಯಾಂಶಗಳು

  • ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ
  • ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇಲ್ಲ
  • ಬೆಸ್ಕಾಂ ಮಹತ್ವದ ಆದೇಶ

ಬೆಂಗಳೂರು, ಜುಲೈ 02: ಗೃಹಜ್ಯೋತಿ (Gruha Jyothi Scheme) 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ. ಅನರ್ಹರಿಗೆ ಗ್ಯಾರಂಟಿ ಯೋಜನೆ ಲಾಭ ಸಿಗಬಾರದೆಂದು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಫಿಲ್ಟರ್ ಮಾಡುತ್ತಿದೆ. ಇದರ ಭಾಗವಾಗಿ ರಾಜ್ಯಾದ್ಯಂತ ಆಪರೇಷನ್ ಗೃಹಜ್ಯೋತಿ ಶುರುವಾಗಿದೆ. ಹೀಗಾಗಿ ಜುಲೈನಲ್ಲಿ ಮೀಟರ್​​​ ರೀಡಿಂಗ್​​ ಇರುವುದಿಲ್ಲ. ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ನೀಡಲು ಬೆಸ್ಕಾಂ (BESCOM)​​ ಮುಂದಾಗಿದೆ.

ಬೆಸ್ಕಾಂ ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಈ ಕುರಿತಾಗಿ ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳನ್ನು ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಟ್ವೀಟ್​

ಇನ್ನು ಮೀಟರ್ ರೀಡಿಂಗ್ ಬದಲಾಗಿ, ಗ್ರಾಹಕರಿಗೆ ಜುಲೈ ತಿಂಗಳಲ್ಲಿ ಸರಾಸರಿ ಬಿಲ್ ನೀಡಲಾಗುತ್ತದೆ. ಅಂದರೆ ಕಳೆದ 3 ತಿಂಗಳ ನಿಮ್ಮ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ ತಿಂಗಳ ಬಿಲ್ ಅನ್ನು ಸಿದ್ಧಪಡಿಸಲಾಗುತ್ತದೆ.

ಯಾರಿಗೆಲ್ಲಾ ಅನ್ವಯ 

ಈ ಹೊಸ ನಿಯಮವು ಹೆಚ್.ಟಿ ಗ್ರಾಹಕರು, 40 ಹೆಚ್.ಪಿ ಮತ್ತು ಅದಕ್ಕಿಂತ ಹೆಚ್ಚಿನ ಲೋಡ್ ಹೊಂದಿರುವ ಎಲ್.ಟಿ ಗ್ರಾಹಕರು, ಸೋಲಾರ್ ರೂಫ್‌ಟಾಪ್ ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವವರಿಗೆ ಅನ್ವಯಿಸುವುದಿಲ್ಲ. ಈ ಗ್ರಾಹಕರಿಗೆ ಎಂದಿನಂತೆ ನಿಯಮಿತವಾಗಿ ಮೀಟರ್ ರೀಡಿಂಗ್ ಮಾಡಿ ಬಿಲ್ ನೀಡಲಾಗುವುದು ಎಂದು ಬೆಂಗಳೂರು ವಿದ್ಯುತ್​​​ ಸರಬರಾಜು ಕಂಪನಿ ನಿಯಮಿತ ಮಾಹಿತಿ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:19 pm, Thu, 2 July 26

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಕರ್ನಾಟಕದ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರ ತಂಡ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಚಾಮರಾಜನಗರ ಆದಿವಾಸಿಗಳಿಗೆ ಆಹಾರ ಕಿಟ್ ಸ್ಥಗಿತ
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಗದಗದ ಕೆಆರ್​ಡಿಎಲ್​ ಎಇಇ ಪತ್ರ ಬರೆದು ನಾಪತ್ತೆ ವಿಚಾರಕ್ಕೆ ಸಿಎಂ ಹೀಗಂದ್ರು
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಬಿಗ್ ಬಾಸ್ ಕನ್ನಡ: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಖರ್ಗೆ ಜತೆ ಏನೇನು ಮಾತುಕತೆಯಾಯ್ತು? ಸಿಎಂ ಡಿಕೆ ಶಿವಕುಮಾರ್ ಮಾಹಿತಿ