Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಷಾರ್: ಬಿವೈ ವಿಜಯೇಂದ್ರಗೆ ಎಚ್ಚರಿಕೆ ಕೊಟ್ಟ ಅರವಿಂದ ಲಿಂಬಾವಳಿ

ಬೆಳಗಾವಿ ಗಾಂಧಿ ಭವನದಲ್ಲಿ ವಕ್ಫ್​ ಭೂ ಕಬಳಿಕೆ ವಿರೋಧಿಸಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ವಿರೋಧ ಪಕ್ಷಕ್ಕೆ ಬಂದಿದ್ದೇವೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಅಧ್ಯಕ್ಷ ಮಾಡಿಲ್ಲ‌ ಎಂದು ಬಿ.ವೈ.ವಿಜಯೇಂದ್ರಗೆ ಎಚ್ಚರಿಕೆ ನೀಡಿದ್ದಾರೆ.

ಹುಷಾರ್: ಬಿವೈ ವಿಜಯೇಂದ್ರಗೆ ಎಚ್ಚರಿಕೆ ಕೊಟ್ಟ ಅರವಿಂದ ಲಿಂಬಾವಳಿ
ಹುಷಾರ್: ಬಿವೈ ವಿಜಯೇಂದ್ರಗೆ ಎಚ್ಚರಿಕೆ ಕೊಟ್ಟ ಅರವಿಂದ ಲಿಂಬಾವಳಿ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Dec 01, 2024 | 4:37 PM

ಬೆಳಗಾವಿ, ಡಿಸೆಂಬರ್​ 01: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಅಧ್ಯಕ್ಷ ಮಾಡಿಲ್ಲ‌ ಹುಷಾರ್ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ (Aravind Limbavali) ಎಚ್ಚರಿಕೆ ಕೊಟ್ಟಿದ್ದಾರೆ. ನಗರದ ಗಾಂಧಿ ಭವನದಲ್ಲಿ ವಕ್ಫ್​ ಭೂ ಕಬಳಿಕೆ ವಿರೋಧಿಸಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ವಿರೋಧ ಪಕ್ಷಕ್ಕೆ ಬಂದಿದ್ದೇವೆ ಎಂದು ವಾಗ್ದಾಳಿ ಮಾಡಿದ್ದಾರೆ.

ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ ಎಂದು ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ವಿಜಯೇಂದ್ರ ವಿರುದ್ಧ ದಾಖಲೆಗಳೊಂದಿಗೆ ಹೈಕಮಾಂಡ್​ ಭೇಟಿಗೆ ಹೊರಟು ನಿಂತ ಯತ್ನಾಳ್ ಟೀಂ

ಬೀದರ್​ದಿಂದ ವಕ್ಫ್​ ಹೋರಾಟ ಮಾಡುತ್ತಿದ್ದೇವೆ. ನಮಗೆ ಕೆಲವರು ಬೆಂಗಳೂರಿನಲ್ಲಿ ಕುಳಿತು ಪಕ್ಷ ವಿರೋಧಿ ಕೆಲಸ ಅಂತಿದ್ದಾರೆ. ನಾವು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದೇವಾ‌? ನಾವು ಜನಪರ ಹೋರಾಟ ಮಾಡುತ್ತಿದ್ದೇವೆ ನೀವೇನೂ ಮಾಡುತ್ತಿದ್ದೀರಿ. ಉಪ ಚುನಾವಣೆ ಸೋತ ಮೇಲೆ ಇದನ್ನ ಗಂಭೀರವಾಗಿ ತಗೊಂಡಿಲ್ಲ ಅಂತಾ ಹೇಳ್ಳುತ್ತಾರೆ. ಚುನಾವಣೆ ರಾಜಕೀಯ ಪಕ್ಷಕ್ಕೆ ಗಂಭೀರ ಅಲ್ಲಾ ಅನ್ನೋದಕ್ಕೆ ಏನೂ ಹೇಳಬೇಕು.

ಪಕ್ಷ ಕಟ್ಟಿದವರು ನಾವು: ಅರವಿಂದ ಲಿಂಬಾವಳಿ

ಪಕ್ಷ ಕಟ್ಟಿದವರು ನಾವು, ಯತ್ನಾಳ್ ಅವರನ್ನ ಉಚ್ಚಾಟನೆ ಮಾಡಿಸುತ್ತೇವೆ ಅಂತಾರೆ. ಜನರ ಪರವಾಗಿ ನಾವು ಧ್ವನಿ ಎತ್ತುತ್ತಿದ್ದೇವೆ. ಇದಕ್ಕೆ ಜನ ವಿರೋಧಿ ಅಂತಿರಿ, ಇದಕ್ಕೆ ನಗಬೇಕಾ ಅಳಬೇಕಾ ಗೊತ್ತಾಗುತ್ತಿಲ್ಲ. ಆಂದ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರು ವಕ್ಫ್​ ಬೋರ್ಡ್ ನಿಷೇಧ ಮಾಡಿದ್ದಾರೆ ಅವರಿಗೆ ಅಭಿನಂದಿಸಬೇಕು.

ಇದನ್ನೂ ಓದಿ: ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ತಾರಕಕ್ಕೇರಿದ ಬಣ ಬಡಿದಾಟ: ಎರಡೂ ಬಣಗಳ ರಹಸ್ಯ ಸಭೆ

ಲೋಕಸಭೆ ಚುನಾವಣೆಯಲ್ಲಿ ಯಾಕೆ ಸೋಲಾಯಿತು ಅಂತಾ ಯಾವತ್ತಾದ್ರೂ ಯೋಚಿಸಿದ್ದಿದ್ದಾರೆ. ದಾವಣಗೆರೆಯಲ್ಲಿ ಯಡಿಯೂರಪ್ಪ, ವಿಜಯೇಂದ್ರ ನೇತೃತ್ವದಲ್ಲಿ ಹೊರಟ್ಟಿದ್ದಾರೆ ಅಂತಾರೆ. ವಾಲ್ಮೀಕಿ ಹಗರಣದ ಪಾದಯಾತ್ರೆ ಅನುಮತಿ ಕೊಡಿಸಲಿಲ್ಲ. ಉಪಚುನಾವಣೆ ಮುಗಿದು ಬಹಳ ದಿನವಾಯಿತು. ವಕ್ಫ್ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿ. ಹಾದಿ ಬೀದಿಯಲ್ಲಿ ಮಾತಾಡುತ್ತಾರೆ ಅಂತಾ ನಮಗೆ ಹೇಳುತ್ತಾರೆ. ಬೆಂಗಳೂರಿನಲ್ಲಿ ಕುಳಿತು ನೀವು ಮಾತಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:13 pm, Sun, 1 December 24

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!