ಬೆಳಗಾವಿ, ಡಿಸೆಂಬರ್ 01: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಅಧ್ಯಕ್ಷ ಮಾಡಿಲ್ಲ ಹುಷಾರ್ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ (Aravind Limbavali) ಎಚ್ಚರಿಕೆ ಕೊಟ್ಟಿದ್ದಾರೆ. ನಗರದ ಗಾಂಧಿ ಭವನದಲ್ಲಿ ವಕ್ಫ್ ಭೂ ಕಬಳಿಕೆ ವಿರೋಧಿಸಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ವಿರೋಧ ಪಕ್ಷಕ್ಕೆ ಬಂದಿದ್ದೇವೆ ಎಂದು ವಾಗ್ದಾಳಿ ಮಾಡಿದ್ದಾರೆ.
ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ ಎಂದು ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ: ವಿಜಯೇಂದ್ರ ವಿರುದ್ಧ ದಾಖಲೆಗಳೊಂದಿಗೆ ಹೈಕಮಾಂಡ್ ಭೇಟಿಗೆ ಹೊರಟು ನಿಂತ ಯತ್ನಾಳ್ ಟೀಂ
ಬೀದರ್ದಿಂದ ವಕ್ಫ್ ಹೋರಾಟ ಮಾಡುತ್ತಿದ್ದೇವೆ. ನಮಗೆ ಕೆಲವರು ಬೆಂಗಳೂರಿನಲ್ಲಿ ಕುಳಿತು ಪಕ್ಷ ವಿರೋಧಿ ಕೆಲಸ ಅಂತಿದ್ದಾರೆ. ನಾವು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದೇವಾ? ನಾವು ಜನಪರ ಹೋರಾಟ ಮಾಡುತ್ತಿದ್ದೇವೆ ನೀವೇನೂ ಮಾಡುತ್ತಿದ್ದೀರಿ. ಉಪ ಚುನಾವಣೆ ಸೋತ ಮೇಲೆ ಇದನ್ನ ಗಂಭೀರವಾಗಿ ತಗೊಂಡಿಲ್ಲ ಅಂತಾ ಹೇಳ್ಳುತ್ತಾರೆ. ಚುನಾವಣೆ ರಾಜಕೀಯ ಪಕ್ಷಕ್ಕೆ ಗಂಭೀರ ಅಲ್ಲಾ ಅನ್ನೋದಕ್ಕೆ ಏನೂ ಹೇಳಬೇಕು.
ಪಕ್ಷ ಕಟ್ಟಿದವರು ನಾವು, ಯತ್ನಾಳ್ ಅವರನ್ನ ಉಚ್ಚಾಟನೆ ಮಾಡಿಸುತ್ತೇವೆ ಅಂತಾರೆ. ಜನರ ಪರವಾಗಿ ನಾವು ಧ್ವನಿ ಎತ್ತುತ್ತಿದ್ದೇವೆ. ಇದಕ್ಕೆ ಜನ ವಿರೋಧಿ ಅಂತಿರಿ, ಇದಕ್ಕೆ ನಗಬೇಕಾ ಅಳಬೇಕಾ ಗೊತ್ತಾಗುತ್ತಿಲ್ಲ. ಆಂದ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಅವರು ವಕ್ಫ್ ಬೋರ್ಡ್ ನಿಷೇಧ ಮಾಡಿದ್ದಾರೆ ಅವರಿಗೆ ಅಭಿನಂದಿಸಬೇಕು.
ಇದನ್ನೂ ಓದಿ: ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ತಾರಕಕ್ಕೇರಿದ ಬಣ ಬಡಿದಾಟ: ಎರಡೂ ಬಣಗಳ ರಹಸ್ಯ ಸಭೆ
ಲೋಕಸಭೆ ಚುನಾವಣೆಯಲ್ಲಿ ಯಾಕೆ ಸೋಲಾಯಿತು ಅಂತಾ ಯಾವತ್ತಾದ್ರೂ ಯೋಚಿಸಿದ್ದಿದ್ದಾರೆ. ದಾವಣಗೆರೆಯಲ್ಲಿ ಯಡಿಯೂರಪ್ಪ, ವಿಜಯೇಂದ್ರ ನೇತೃತ್ವದಲ್ಲಿ ಹೊರಟ್ಟಿದ್ದಾರೆ ಅಂತಾರೆ. ವಾಲ್ಮೀಕಿ ಹಗರಣದ ಪಾದಯಾತ್ರೆ ಅನುಮತಿ ಕೊಡಿಸಲಿಲ್ಲ. ಉಪಚುನಾವಣೆ ಮುಗಿದು ಬಹಳ ದಿನವಾಯಿತು. ವಕ್ಫ್ ವಿರುದ್ಧ ಬೀದಿಗಿಳಿದು ಹೋರಾಟ ಮಾಡಿ. ಹಾದಿ ಬೀದಿಯಲ್ಲಿ ಮಾತಾಡುತ್ತಾರೆ ಅಂತಾ ನಮಗೆ ಹೇಳುತ್ತಾರೆ. ಬೆಂಗಳೂರಿನಲ್ಲಿ ಕುಳಿತು ನೀವು ಮಾತಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:13 pm, Sun, 1 December 24