ಎಚ್ಚರ! ಬೆಂಗಳೂರು- ಮೈಸೂರು ಹೈವೇಯಲ್ಲಿ ಶಕ್ತಿಶಾಲಿ ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ

|

Updated on: May 17, 2024 | 4:57 PM

ಬೆಂಗಳೂರು-ಮೈಸೂರು ಎಕ್ಸ್​​ಪ್ರೇಸ್ ವೇ ಅಲ್ಲಿ ಹಗಲು ರಾತ್ರಿ ನಮ್ಮ ಶಕ್ತಿಶಾಲಿ ಕ್ಯಾಮೆರಾಗಳು ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ಸಂಚಾರಿ ನಿಯಮ ಉಲ್ಲಂಘನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಡಿಜಿಪಿ ಅಲೋಕ್​​ ಕುಮಾರ್ ಎಂದು​ ಹೇಳಿದ್ದಾರೆ. ಜೊತೆಗೆ ದಯವಿಟ್ಟು ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸದಂತೆ ಮನವಿ ಮಾಡಿದ್ದಾರೆ.

ಎಚ್ಚರ! ಬೆಂಗಳೂರು- ಮೈಸೂರು ಹೈವೇಯಲ್ಲಿ ಶಕ್ತಿಶಾಲಿ ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ
ಎಚ್ಚರ...ಬೆಂಗಳೂರು- ಮೈಸೂರು ಹೈವೇಯಲ್ಲಿ ಶಕ್ತಿಶಾಲಿ ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ
Follow us on

ಬೆಂಗಳೂರು, ಮೇ 17: ಕೋಟ್ಯಾಂತರ ರೂ ವೆಚ್ಚದಲ್ಲಿ ನೂತನ ಬೆಂಗಳೂರು-ಮೈಸೂರು ಎಕ್ಸ್​​ಪ್ರೇಸ್ ವೇ (Bengaluru Mysuru Expressway) ನಿರ್ಮಾಣ ಮಾಡಲಾಗಿದೆ. ಜೊತೆಗೆ ಅತ್ಯಾಧುನಿಕ ಎಐ ತಂತ್ರಜ್ಞಾನ ಆಧಾರಿತ ಕ್ಯಾಮರಾಗಳು ಅಳವಡಿಸಲಾಗಿದೆ. ಯಾವುದೇ ರೀತಿಯ ಸಂಚಾರಿ ನಿಯಮಗಳನ್ನು ಉಂಘಿಸಿದ್ದೇ ಆದಲ್ಲಿ ಫೋಟೋ ಸಹಿತ ದಂಡದ ನೋಟಿಸ್​ ನೀಡಲಾಗುತ್ತದೆ. ಇದೀಗ ಅಂತಹದ್ದೇ ಸಂಚಾರಿ ನಿಯಮಗಳನ್ನು ಉಂಘಿಸಿರುವ ಕೆಲ ವಾನಗಳ ಫೋಟೋಗಳನ್ನು ಹಂಚಿಕೊಂಡಿರುವ ಎಡಿಜಿಪಿ ಅಲೋಕ್​​ ಕುಮಾರ್​ ಶಕ್ತಿಶಾಲಿ ಕ್ಯಾಮೆರಾಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಹಗಲು ರಾತ್ರಿ ನಮ್ಮ ಶಕ್ತಿಶಾಲಿ ಕ್ಯಾಮೆರಾಗಳು ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ಸಂಚಾರಿ ನಿಯಮ ಉಲ್ಲಂಘನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು​ ಹೇಳಿದ್ದಾರೆ.

ದಯವಿಟ್ಟು ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸದಂತೆ ಮನವಿ ಮಾಡಿದ್ದಾರೆ. ಸಂಚಾರಿ ನಿಯಮಗಳನ್ನು ನಿರ್ಲಕ್ಷಿಸಿದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕೆಎಸ್​​ಆರ್​ಟಿಸಿ ಇಲಾಖೆಗೂ ಎಡಿಜಿಪಿ ಅಲೋಕ್​​ ಕುಮಾರ್​ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇಯಲ್ಲಿ ಮತ್ತೊಂದು ಕಂಟಕ: ಪ್ರಯಾಣಿಕರಿಗೆ ಪ್ರಾಣ ಭಯ

ಕರ್ನಾಟಕ ರಾಜ್ಯ ಪೊಲೀಸ್​ ಕೂಡ ಟ್ವೀಟ್​ ಮಾಡಿದ್ದು, ಬೆಂಗಳೂರು- ಮೈಸೂರು ಹೈವೇನಲ್ಲಿ ನಮ್ಮ ಪೊಲೀಸ್ ಕ್ಯಾಮೆರಾಗಳು ತಮ್ಮ ಕೆಲಸ ಮಾಡುತ್ತಿವೆ. ಕೇವಲ 15 ದಿನದಲ್ಲಿ 12192 ಸಂಚಾರ ನಿಯಮ ಉಲ್ಲಂಘನೆಗಳನ್ನು ಸೆರೆ ಹಿಡಿದಿವೆ ಎಂದು ಮಾಹಿತಿ ನೀಡಿದೆ.


ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತವಾದರೆ ಅದನ್ನು ಕುಟುಂಬದವರು ಸಹಿಸಿಕೊಳ್ಳಲು ಸಾಧ್ಯವೇ ಒಮ್ಮೆ ಯೋಚಿಸಿ. ಯಾವಾಗಲೂ ಸಂಚಾರ ನಿಯಮ ಪಾಲಿಸಿ, ಸುರಕ್ಷಿತವಾಗಿ ಚಲಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕಾಮಗಾರಿ ಅಪೂರ್ಣ

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ನೋಟಿಸ್​ ಕೂಡ ನೀಡಲಾಗಿದ್ದು, ನೋಟಿಸ್ ತಲುಪಿದ 7 ದಿನಗಳಲ್ಲಿ ಸಂಬಂಧಪಟ್ಟ ಆಯಾ ಸಂಚಾರಿ ಠಾಣೆಯಲ್ಲಿ ದಂಡ ಪಾತಿಸಬೇಕು. ಒಂದು ವೇಳೆ ದಂಡ ಕಟ್ಟದಿದ್ದಲ್ಲಿ ಕಾನೂನು ರೀತಿಯಲ್ಲಿ 6 ತಿಂಗಳು ಜೈಲು ಅಥವಾ 5000 ರೂ. ವಿಧಿಸುವ ಎಚ್ಚರಿಕೆಯನ್ನು ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.