ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ

[lazy-load-videos-and-sticky-control id=”ti2UR7inivo”]

ಭದ್ರಾವತಿ: ಕಿಲ್ಲರ್ ಕೊರೊನಾ ಸೋಂಕಿಗೆ ಮಾಜಿ ಶಾಸಕ ಅಪ್ಪಾಜಿಗೌಡ ಬಲಿಯಾಗಿದ್ದಾರೆ. ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಅಪ್ಪಾಜಿ ಗೌಡ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಅಪ್ಪಾಜಿ ಗೌಡ ಕೊರೊನಾದಿಂದ ಮೃತಪಟ್ಟಿರುವುದಾಗಿ ಟಿವಿ9ಗೆ ಪ್ರಭಾರಿ ಡಿಹೆಚ್ ಒ ಡಾ.ನಾಗರಾಜ್ ನಾಯಕ್ ಮಾಹಿತಿ ನೀಡಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಅಪ್ಪಾಜಿಗೌಡ ಶಿವಮೊಗ್ಗದ ಕೋವಿಡ್ ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸೆಪ್ಟೆಂಬರ್ 2ರ ರಾತ್ರಿ 11.30ಕ್ಕೆ ಕೊನೆಯುಸಿರೆಳೆದಿದ್ದಾರೆ.

Published On - 7:45 am, Thu, 3 September 20

Click on your DTH Provider to Add TV9 Kannada