ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಭಾರತ್ ಬಂದ್​ಗೆ ಕರೆ

ಬೆಂಗಳೂರು: ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ. ಹುಬ್ಬಳ್ಳಿ, ಕೊಪ್ಪಳ, ಮಡಿಕೇರಿ, ಮಂಗಳೂರು ಮತ್ತು ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅನೇಕ ಸಂಘಟನೆಗಳು ಬೆಂಬಲ ನೀಡಿವೆ. ನಾಳೆ ಇಡೀ ದೇಶ ಸ್ತಬ್ದವಾಗಲಿದೆಯಾ? ರಾಜ್ಯಕ್ಕೆ ಇದರ ಬಿಸಿ ತಟ್ಟುತ್ತಾ ಎಂಬ ಪ್ರಶ್ನೆಗಳು ಜನಸಾಮಾನ್ಯರಲ್ಲಿ ಎದ್ದಿವೆ. ಕಾರ್ಮಿಕ ಪ್ರಮುಖ ‌ಬೇಡಿಕೆಗಳು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇವರ ಬೇಡಿಕೆಗಳೇನು […]

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಭಾರತ್ ಬಂದ್​ಗೆ ಕರೆ
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​

Updated on: Jan 07, 2020 | 3:45 PM

ಬೆಂಗಳೂರು: ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಮುಷ್ಕರ ಮಾಡಲು ನಿರ್ಧರಿಸಿದ್ದಾರೆ. ಹುಬ್ಬಳ್ಳಿ, ಕೊಪ್ಪಳ, ಮಡಿಕೇರಿ, ಮಂಗಳೂರು ಮತ್ತು ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅನೇಕ ಸಂಘಟನೆಗಳು ಬೆಂಬಲ ನೀಡಿವೆ. ನಾಳೆ ಇಡೀ ದೇಶ ಸ್ತಬ್ದವಾಗಲಿದೆಯಾ? ರಾಜ್ಯಕ್ಕೆ ಇದರ ಬಿಸಿ ತಟ್ಟುತ್ತಾ ಎಂಬ ಪ್ರಶ್ನೆಗಳು ಜನಸಾಮಾನ್ಯರಲ್ಲಿ ಎದ್ದಿವೆ.

ಕಾರ್ಮಿಕ ಪ್ರಮುಖ ‌ಬೇಡಿಕೆಗಳು:
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇವರ ಬೇಡಿಕೆಗಳೇನು ಎಂಬುವುದನ್ನು ನೋಡುವುದಾದರೆ.
-ಕಾರ್ಮಿಕರಿಗೆ ಕನಿಷ್ಠ ವೇತನ ₹21 ಸಾವಿರ ನಿಗದಿ ಮಾಡಬೇಕು
-ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡಬಾರದು
-ಖಾತ್ರಿ ಪಿಂಚಣಿಗಾಗಿ ತಿಂಗಳಿಗೆ ಕನಿಷ್ಠ ₹10,000 ನೀಡಬೇಕು
-ಬೆಲೆ ಏರಿಕೆ ನಿಯಂತ್ರಣಕ್ಕೆ ಸಾರ್ವತ್ರಿಕ ಪಡಿತರ ವ್ಯವಸ್ಥೆ
-ಆರ್ಥಿಕ ಹಿಂಜರಿತದಿಂದಾಗಿ ಉದ್ಯೋಗ ಕಳೆದುಕೊಂಡಿದ್ದಾರೆ
-ಕಾರ್ಮಿಕರಿಗೆ ಉದ್ಯೋಗ, ವೇತನ ಗಳಿಕೆಯ ರಕ್ಷಣೆ
-ದೇಶದ ಕಟ್ಟಡ ಕಾರ್ಮಿಕರು, ಆಟೋ ಚಾಲಕರು ಸೇರಿದಂತೆ ಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಪಿಂಚಣಿ ನೀಡಬೇಕು
-ಕಲ್ಯಾಣ ಯೋಜನೆ ಅನುದಾನ ನೀಡಬೇಕು
-ಮಹಿಳಾ ದೌರ್ಜನ್ಯ ತಡೆ ಸಮಿತಿಯನ್ನು ರಚನೆ ಮಾಡಬೇಕು
-ಮಹಿಳಾ ಕಾರ್ಮಿಕರ ರಾತ್ರಿ ಪಾಳಿಯನ್ನು ರದ್ದು ಮಾಡಬೇಕು
-ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆಗಾಗಿ ಡಾ ಸ್ವಾಮಿನಾಥ್ ವರದಿ ಜಾರಿಮಾಡಬೇಕು
-ಸಾಲ‌ಮನ್ನ, ರೈತರ ಆತ್ಮಹತ್ಯೆ ತಡೆ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಲಪಡಿಸಬೇಕು
ಈ ರೀತಿ ಅನೇಕ ಬೇಡಿಕೆಗೆ ಆಗ್ರಹಿಸಿ ನಾಳೆ ದೇಶ ವ್ಯಾಪ್ತಿ ಬಂದ್​ಗೆ ಕರೆ ನೀಡಲಾಗಿದೆ.

Published On - 10:38 am, Tue, 7 January 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us