Bharat Bandh: ಕೃಷಿ ಕಾಯ್ದೆ ವಿರೋಧಿಸಿ ಸೆ. 27ರಂದು ಭಾರತ್ ಬಂದ್; ಯಾವ ಸೇವೆ ಲಭ್ಯ? ಏನಿರುವುದಿಲ್ಲ?
ದೇಶದ 500ಕ್ಕೂ ಹೆಚ್ಚು ಸಂಘಟನೆಗಳು ಭಾರತ್ ಬಂದ್ಗೆ ಬೆಂಬಲ ನೀಡಿವೆ. ಸೋಮವಾರ ನಡೆಯಲಿರುವ ಭಾರತ್ ಬಂದ್ನಿಂದ ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಚಾರದಲ್ಲೇನೂ ವ್ಯತ್ಯಾಸ ಉಂಟಾಗುವುದಿಲ್ಲ.
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ವಿರುದ್ಧ ರೈತಪರ ಸಂಘಟನೆಗಳು ಮತ್ತೊಮ್ಮೆ ಪ್ರತಿಭಟನೆಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಸೆ. 27ರಂದು ಭಾರತ್ ಬಂದ್ ನಡೆಸಲು ನಿರ್ಧರಿಸಲಾಗಿದೆ. ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಅನೇಕ ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಭಾರತ್ ಬಂದ್ಗೆ ತಮಿಳುನಾಡಿನಲ್ಲಿ ಸಂಪೂರ್ಣ ಬೆಂಬಲ ಸೂಚಿಸಲಾಗಿದ್ದು, ಕರ್ನಾಟಕದಲ್ಲೂ ಭಾರತ್ ಬಂದ್ ಯಶಸ್ವಿಯಾಗುವ ಸಾಧ್ಯತೆಯಿದೆ. ಸಂಯುಕ್ತ ಕಿಸಾನ್ ಮೋರ್ಚಾ, ಕರ್ನಾಟಕದ ಕಬ್ಬು ಬೆಳೆಗಾರರ ಸಂಘ, ರೈತ ಸಂಘ, ಹಸಿರು ಸೇನೆ, ಹಲವು ರೈತ ಸಂಘಟನೆಗಳು ಕೂಡ ಬೆಂಬಲ ಘೋಷಿಸಿವೆ.
ದೇಶದ 500ಕ್ಕೂ ಹೆಚ್ಚು ಸಂಘಟನೆಗಳು ಭಾರತ್ ಬಂದ್ಗೆ ಬೆಂಬಲ ನೀಡಿವೆ. ಸೋಮವಾರ ನಡೆಯಲಿರುವ ಭಾರತ್ ಬಂದ್ನಿಂದ ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಚಾರದಲ್ಲೇನೂ ವ್ಯತ್ಯಾಸ ಉಂಟಾಗುವುದಿಲ್ಲ. ಕ್ಯಾಬ್, ಆಟೋ, ಟ್ಯಾಕ್ಸಿಗಳು ನೈತಿಕ ಬೆಂಬಲವನ್ನಷ್ಟೇ ನೀಡಿದ್ದು, ಸಂಚಾರ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ.
ಕರ್ನಾಟಕದ ಹೋಟೆಲ್ ಮಾಲೀಕರ ಸಂಘ ಈ ಭಾರತ್ ಬಂದ್ಗೆ ಬೆಂಬಲ ಘೋಷಿಸುವ ಸಾಧ್ಯತೆಯಿದೆ. ಲಾರಿ ಮಾಲೀಕರು ಕೂಡ ಬೆಂಬಲ ಘೋಷಿಸುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಭಾರತ್ ಬಂದ್ ದಿನ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ, ಆಟೋ, ಟ್ಯಾಕ್ಸಿ, ಕ್ಯಾಬ್, ಬೀದಿಬದಿ ವ್ಯಾಪಾರ, ಶಾಲಾ-ಕಾಲೇಜುಗಳು ಎಂದಿನಂತೆ ಇರಲಿವೆ. ಹೋಟೆಲ್ ಓಪನ್ ಇರುತ್ತದಾ? ಎಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಭಾರತ್ ಬಂದ್ಗೆ ಸಂಯುಕ್ತ ಕಿಸಾನ್ ಮೋರ್ಚಾ, ಹಾವೇರಿ, ದಾವಣೆಗೆರ ರೈತ ಸಂಘಟನೆಗಳು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ರಾಜ್ಯ ರೈತ ಸಂಘ, ಹಸಿರು ಸೇನೆ, ಪ್ರಾಂತ್ಯ ರೈತ ಸಂಘ, ರೈತ ಕಾರ್ಮಿಕರ ಸಂಘ, ಅಖಿಲ ಭಾರತ್ ಕಿಸಾನ್ ಸಭಾ, ಆಟೋ ಮಾಲೀಕರು, ಕ್ಯಾಬ್ ಚಾಲಕರ ಸಂಘ, ಬ್ಯಾಂಕ್ ಒಕ್ಕೂಟ ನೈತಿಕ ಬೆಂಬಲ ಘೋಷಿಸಿವೆ.
ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ.
ಇದನ್ನೂ ಓದಿ: ಸೆ 27ರ ಭಾರತ್ ಬಂದ್ಗೆ ಹಾವೇರಿ, ದಾವಣಗೆರೆ ರೈತ ಸಂಘಟನೆಗಳು, ಓಲಾ-ಊಬರ್ ಕಾರ್ಮಿಕರ ಬೆಂಬಲ
(Bharat Bandh announced on September 27 against Anti Agriculture Farm Law What available What Closed on Monday)
Published On - 2:48 pm, Fri, 24 September 21