AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಬೆಂಗಳೂರಿನಾದ್ಯಂತ ಪೊಲೀಸರ ಹೈಅಲರ್ಟ್; ಟ್ರಾಫಿಕ್ ಜಾಮ್ ಸಾಧ್ಯತೆ- ವಿವರ ಇಲ್ಲಿದೆ

Bengaluru: ಬೆಂಗಳೂರಿನಾದ್ಯಂತ ಪೊಲೀಸರಿಂದ ಹೈಅಲರ್ಟ್‌ ಘೋಷಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 12 ಡಿಸಿಪಿ, ಎಲ್ಲಾ ಎಸಿಪಿಗಳು, 120ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌ಗಳು, 150ಕ್ಕೂ ಹೆಚ್ಚು ಸಬ್‌ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ, ಭದ್ರತೆಗಾಗಿ ನಾಳೆ 5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

Bharat Bandh: ಬೆಂಗಳೂರಿನಾದ್ಯಂತ ಪೊಲೀಸರ ಹೈಅಲರ್ಟ್; ಟ್ರಾಫಿಕ್ ಜಾಮ್ ಸಾಧ್ಯತೆ- ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 26, 2021 | 5:34 PM

Share

ಬೆಂಗಳೂರು: ನಾಳೆ (ಸೆಪ್ಟೆಂಬರ್ 27) ಭಾರತ್​ ಬಂದ್​​ ಹಿನ್ನೆಲೆ ಟ್ರಾಫಿಕ್​ ಜಾಮ್ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ನಾಳೆ ಹೆಚ್ಚು ಟ್ರಾಫಿಕ್​ ಜಾಮ್​ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರತಿಭಟನಾ ಮೆರವಣಿಗೆ ಮೈಸೂರು ರಸ್ತೆ, ಕೆ.ಆರ್. ಪುರಂ, ಮಾಗಡಿ ರಸ್ತೆ, ಹೊಸೂರು ರಸ್ತೆಯಿಂದ ಬರಲಿದೆ. ಅಲ್ಲದೆ ಬೆಂಗಳೂರಿನಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿಗಳ ಜತೆಗೆ ಮೆರವಣಿಗೆ ಹಿನ್ನೆಲೆ ಟ್ರಾಫಿಕ್​ ಜಾಮ್ ಆಗುವ ಸಂಭವವಿದೆ. ಬೇರೆ ಭಾಗಗಳಿಂದ ಬೆಂಗಳೂರಿಗೆ ಬರುವವರು ಎಚ್ಚರ ವಹಿಸಬೇಕು ಎಂದು ತಿಳಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಾದ್ಯಂತ ಪೊಲೀಸರಿಂದ ಹೈಅಲರ್ಟ್‌ ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ ನಡೆಯಲಿದೆ. ನಾಳೆ ಬೆಂಗಳೂರಿನಾದ್ಯಂತ ಪೊಲೀಸರಿಂದ ಹೈಅಲರ್ಟ್‌ ಘೋಷಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 12 ಡಿಸಿಪಿ, ಎಲ್ಲಾ ಎಸಿಪಿಗಳು, 120ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌ಗಳು, 150ಕ್ಕೂ ಹೆಚ್ಚು ಸಬ್‌ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ, ಭದ್ರತೆಗಾಗಿ ನಾಳೆ 5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

ಮುಂಜಾನೆ 5 ಗಂಟೆಯಿಂದಲೇ ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿ ವಿಭಾಗದಲ್ಲಿ ಡಿಸಿಪಿಗಳ ನೇತೃತ್ವದಲ್ಲಿ ಬಂದೋಬಸ್ತ್‌ ಮಾಡಲಾಗಿದೆ. ನಗರದ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಫ್ರೀಡಂಪಾರ್ಕ್‌, ಟೌನ್‌ಹಾಲ್‌ನಲ್ಲಿ ಹೆಚ್ಚುವರಿ ಭದ್ರತೆ ಇದೆ. ಹೆಚ್ಚುವರಿಯಾಗಿ ಕೆಎಸ್​ಆರ್​ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ.

ಸಾರ್ವಜನಿಕರ ದೈನಂದಿನ ಕೆಲಸಕ್ಕೆ ಅಡ್ಡಿಪಡಿಸುವಂತಿಲ್ಲ. ನಾಳೆ ಯಾವುದೇ ರಸ್ತೆ ತಡೆಗಳಿಗೆ ಅನುಮತಿ ನೀಡಿಲ್ಲ. ಈವರೆಗೂ ಯಾರೂ ಮೆರವಣಿಗೆಗೆ ಅನುಮತಿ ಕೇಳಿಲ್ಲ. ಪ್ರತಿಭಟನೆ ಹೆಸರಿನಲ್ಲಿ ನಿಯಮ ಉಲ್ಲಂಘಿಸುವಂತಿಲ್ಲ. ದುಷ್ಕೃತ್ಯಗಳಲ್ಲಿ ಭಾಗಿಯಾದ್ರೆ ಪೊಲೀಸರಿಂದ ಕಠಿಣ ಕ್ರಮ ಎಂಬ ಸೂಚನೆ ನೀಡಲಾಗಿದೆ.

ಭಾರತ್ ಬಂದ್​ಗೆ ಕಾಂಗ್ರೆಸ್‌ ಪಕ್ಷದ ಬೆಂಬಲ ಇದೆ ಭಾರತ್ ಬಂದ್‌ಗೆ ಕಾಂಗ್ರೆಸ್‌ ಪಕ್ಷದ ಬೆಂಬಲ ಇದೆ. ನಾಳೆ ಕೇಂದ್ರದ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆ ರೈತರ ಪ್ರತಿಭಟನೆಗೆ ಕಾಂಗ್ರೆಸ್‌ ಬೆಂಬಲ ಇದೆ. ಕಳೆದ ಒಂದು ವರ್ಷದಿಂದ ರೈತರು ಹೋರಾಟ ಮಾಡ್ತಿದ್ದಾರೆ. ಬದುಕಲು ಬಿಡಿ ಅಂತ ರೈತರು ಹೋರಾಟ ಮಾಡುತ್ತಿದ್ದಾರೆ. ಆದ್ರೆ ಪ್ರಧಾನಿ ಈವರೆಗೆ ರೈತರನ್ನು ಭೇಟಿಯಾಗಿ ಚರ್ಚಿಸಿಲ್ಲ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ನಾಳೆ ನಡೆಯುವ ಭಾರತ್ ಬಂದ್​ಗೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಬೆಂಬಲಿಸಲು ಬೆಂಗಳೂರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ಮನವಿ ಮಾಡಿದ್ದಾರೆ. ಪ್ರಮುಖ ಮಾರ್ಗಗಳಲ್ಲಿ ತೆರೆದ ವಾಹನದಲ್ಲಿ ತೆರಳಿ ಮನವಿ ಮಾಡಿದ್ದಾರೆ.

ಭಾರತ್ ಬಂದ್​ಗೆ ಬೆಂಬಲ ಸೂಚಿಸಿ ಪ್ರತಿಭಟನೆಗೆ ಕಾಂಗ್ರೆಸ್ ಕಿಸಾನ್ ಘಟಕ ಸಾಥ್ ನೀಡಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ಕಿಸಾನ್ ಕಾಂಗ್ರೆಸ್ ಬೆಳಗ್ಗೆ ಪ್ರತಿಭಟನೆ, ರಸ್ತೆ ತಡೆ ನಡೆಸಲಿದೆ. ಚಂದಾಪುರ, ಹೊಸಕೋಟೆ, ಕನಕಪುರ ರಸ್ತೆ, ಯಶವಂತಪುರ ಎಪಿಎಂಸಿ ಎದುರು ರಸ್ತೆ ತಡೆಗೆ ನಿರ್ಧಾರ ಮಾಡಲಾಗಿದೆ.

ಧಾರವಾಡ: ಬಂದ್ ವಿವರಗಳು ಇಲ್ಲಿದೆ ಸೆಪ್ಟೆಂಬರ್ 27ರಂದು ಭಾರತ ಬಂದ್ ಕರೆ ಹಿನ್ನೆಲೆ, ಬಂದ್ ಬೆಂಬಲಿಸಿ ಧಾರವಾಡ ಬಂದ್‌ಗೆ ನಿರ್ಧಾರ ಮಾಡಲಾಗಿದೆ. ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಧಾರವಾಡ ಬಂದ್ ಕರೆ ನೀಡಲಾಗಿದೆ. ಬೆಳಗ್ಗೆ 6ರಿಂದ ಬಂದ್ ಆರಂಭ ಆಗಲಿದೆ. ಬೆಳಿಗ್ಗೆ ಜ್ಯುಬಿಲಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ನಂತರ ನಗರದ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ಹಾಗೂ ಜ್ಯುಬಿಲಿ ಸರ್ಕಲ್‌ನಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಸಿಎಫ್‌ಡಿ, ವಿವಿಧ ರೈತ ಸಂಘಟನೆ, ಆರ್‌ಕೆಎಸ್, ಲೀಡಕರ ಸಂಘ, ಆಟೋ ಚಾಲಕರ ಸಂಘ, ಎಐಟಿಯುಸಿ, ಸಿಐಟಿ ಸೇರಿ 20ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಬಲ ಸೂಚಿಸಲಾಗಿದೆ. ಕೃಷಿ ಕಾನೂನುಗಳ ರದ್ದತಿಗಾಗಿ ನಾಳೆ ಭಾರತ್ ಬಂದ್ ನಡೆಯಲಿದೆ.

ನಾಳೆ ಭಾರತ್ ಬಂದ್​ಗೆ ಬೆಂಬಲ ಸೂಚಿಸಿರುವ ಸಂಘಟನೆಗಳು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಕೆಆರ್​ಆರ್​ಎಸ್) ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್​ಎಸ್) ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಟ್ರೇಡ್ ಯೂನಿಯನ್ ಕೋಆರ್ಡಿನೇಷನ್ ಕಮಿಟಿ (ಟಿಯುಸಿಸಿ) ಅಟೋರಿಕ್ಷಾ ಚಾಲಕರ ಸಂಘ ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ಹುಬ್ಬಳ್ಳಿ ತಾಲೂಕು ಸಮಿತಿಗಳು

ಬಂದ್​ಗೆ ಬೆಂಬಲ ನೀಡದ ಸಂಘಟನೆಗಳು ಸಾರಿಗೆ ಸಂಸ್ಥೆ ಟ್ಯಾಕ್ಸಿ, ಖಾಸಗಿ ವಾಹನಗಳ ಒಕ್ಕೂಟ ಬಿಜೆಪಿ ಜಿಲ್ಲಾ ಘಟಕ ಹೋಟೆಲ್ ಮಾಲೀಕರ ಸಂಘ ಬೇಂದ್ರೆ ನಗರ ಸಾರಿಗೆ

ಪೀಸ್ ಆಟೋ ಚಾಲಕರ ಬೆಂಬಲ ನಾಳಿನ ಬಂದ್​ಗೆ ಪೀಸ್​ ಆಟೋ ಚಾಲಕರ ಬೆಂಬಲ ಇದೆ ಎಂದು ಟಿವಿ9ಗೆ ಸಂಘದ ರಾಜ್ಯಾಧ್ಯಕ್ಷ ರಘು ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಪೀಸ್​ ಆಟೋ ಚಾಲಕರೂ ನಾಳೆ ರಸ್ತೆಗಿಳಿಯಲ್ಲ. ದೆಹಲಿಯಲ್ಲಿನ ರೈತರ ಪ್ರತಿಭಟನೆಗೆ ನ್ಯಾಯ ಸಿಗಬೇಕು. ಸರ್ಕಾರಗಳು ರೈತರನ್ನು ಬಗ್ಗು ಬಡಿಯುವ ಕೆಲಸ ಮಾಡ್ತಿವೆ. ನಮ್ಮಲ್ಲಿ ಹತ್ತು ಸಾವಿರಕ್ಕಿಂತಲೂ ಹೆಚ್ಚು ಆಟೋಗಳಿವೆ. ನಾಳೆ ರಸ್ತೆಗಿಳಿಯದಂತೆ ನಾವು ಮಾಹಿತಿ ನೀಡಿದ್ದೇವೆ. ನಾಳಿನ ರೈತರ ‌ಮೆರವಣಿಗೆಯಲ್ಲಿ ನಾವೆಲ್ಲರೂ ಭಾಗಿಯಾಗುತ್ತೇವೆ. ಆಟೋ ಚಾಲಕರ ಸಂಘದ ರಾಜ್ಯಾಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Bharat Bandh: ಬಂದ್​ಗೆ ಯಾವುದೇ ರಾಜಕೀಯ ಪಕ್ಷಗಳ ಬೆಂಬಲ ಕೋರಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ

ಇದನ್ನೂ ಓದಿ: Bharat Bandh: ಕೃಷಿ ಕಾಯ್ದೆ ವಿರೋಧಿಸಿ ಸೆ. 27ರಂದು ಭಾರತ್ ಬಂದ್; ಯಾವ ಸೇವೆ ಲಭ್ಯ? ಏನಿರುವುದಿಲ್ಲ?

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!