ಎಲ್ಲಾ ಬಿಸಿಎಂ ಹಾಸ್ಟೆಲ್​ಗಳಲ್ಲಿಂದು ರಾತ್ರಿ ಭೂರಿ ಭೋಜನ ವ್ಯವಸ್ಥೆಗೆ ಆದೇಶ: ಏನು ಸ್ಪೆಷಲ್ ಗೊತ್ತಾ?

ರಾಜ್ಯವು ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳನ್ನು ಪೂರ್ಣವಾಗಿದೆ. ಹೀಗಾಗಿ ಇದೇ ಖುಷಿಗೆ ರಾಜ್ಯದ ಎಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳು ವಿದ್ಯಾರ್ಥಿಗಳಿಗೆ ಭೂರಿ ಬೋಜನಕ್ಕೆ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾಗಿರುವ ಶಿವರಾಜ್ ತಂಗಡಗಿ ಆದೇಶಿಸಿದ್ದಾರೆ.

ಎಲ್ಲಾ ಬಿಸಿಎಂ ಹಾಸ್ಟೆಲ್​ಗಳಲ್ಲಿಂದು ರಾತ್ರಿ ಭೂರಿ ಭೋಜನ ವ್ಯವಸ್ಥೆಗೆ ಆದೇಶ: ಏನು ಸ್ಪೆಷಲ್ ಗೊತ್ತಾ?
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ರಮೇಶ್ ಬಿ. ಜವಳಗೇರಾ

Updated on: Nov 07, 2024 | 4:33 PM

ಬೆಂಗಳೂರು, (ನವೆಂಬರ್ 07): ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಭೂರಿ ಭೋಜನ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ ಎಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಇಂದು(ನವೆಂಬರ್ 07) ರಾತ್ರಿ ವಿದ್ಯಾರ್ಥಿಗಳಿಗೆ ಭೂರಿ ಬೋಜನ ವ್ಯವಸ್ಥೆ ಮಾಡುವಂತೆ ಆದೇಶಿಸಲಾಗಿದೆ.

ರಾಜ್ಯದ ಎಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಸತಿ ನಿಲಯಗಳಲ್ಲಿ ಇಂದು ರಾತ್ರಿ ಊಟಕ್ಕೆ ವಿದ್ಯಾರ್ಥಿಗಳಿಗೆ ಭೂರಿ ಭೋಜನ ಅಂದರೆ ಮೈಸೂರು ಪಾಕ್, ಹೋಳಿಗೆ, ಪಲಾವ್ ಚಪಾತಿ, ಬೀನ್ಸ್ ಪಲ್ಲೆ, ಅನ್ನ, ಮಜ್ಜಿಗೆ, ಬಾಳೆಹಣ್ಣು ನೀಡಲು ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಭೂರಿ ಭೋಜನ ನೀಡುವುದರ ಜೊತೆ ಇಲಾಖೆ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಬೇಕು. ಹಾಗೇ ಮಕ್ಕಳ ಜೊತೆ ಊಟ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ