ಬೆಂಗಳೂರು, (ನವೆಂಬರ್ 07): ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಭೂರಿ ಭೋಜನ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ ಎಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಇಂದು(ನವೆಂಬರ್ 07) ರಾತ್ರಿ ವಿದ್ಯಾರ್ಥಿಗಳಿಗೆ ಭೂರಿ ಬೋಜನ ವ್ಯವಸ್ಥೆ ಮಾಡುವಂತೆ ಆದೇಶಿಸಲಾಗಿದೆ.
ರಾಜ್ಯದ ಎಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಸತಿ ನಿಲಯಗಳಲ್ಲಿ ಇಂದು ರಾತ್ರಿ ಊಟಕ್ಕೆ ವಿದ್ಯಾರ್ಥಿಗಳಿಗೆ ಭೂರಿ ಭೋಜನ ಅಂದರೆ ಮೈಸೂರು ಪಾಕ್, ಹೋಳಿಗೆ, ಪಲಾವ್ ಚಪಾತಿ, ಬೀನ್ಸ್ ಪಲ್ಲೆ, ಅನ್ನ, ಮಜ್ಜಿಗೆ, ಬಾಳೆಹಣ್ಣು ನೀಡಲು ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳಿಗೆ ಭೂರಿ ಭೋಜನ ನೀಡುವುದರ ಜೊತೆ ಇಲಾಖೆ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಬೇಕು. ಹಾಗೇ ಮಕ್ಕಳ ಜೊತೆ ಊಟ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.