ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನ ನೇಮಿಸಿ, ಇಲ್ಲ ಅಂದ್ರೆ ಲಿಂಬಾವಳಿ ಮನೆ ಮುಂದೆ ಧರಣಿ ನಡೆಸುತ್ತೇವೆ -ಭೋವಿ ಮುಖಂಡರು
ಸಚಿವ ಅರವಿಂದ್ ಲಿಂಬಾವಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈವರೆಗೂ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಿಲ್ಲ ಎಂದು ಲಿಂಬಾವಳಿ ವಿರುದ್ಧ ದೂರು ನೀಡಿದ್ದಾರೆ. ಹಾಗೂ ಶೀಘ್ರದಲ್ಲೇ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಬೇಕು. ಇಲ್ಲದೇ ಹೋದಲ್ಲಿ ಲಿಂಬಾವಳಿ ಮನೆ ಮುಂದೆ ಧರಣಿ ಮಾಡೋದಾಗಿ ಭೋವಿ ಸಮಾಜ ಸೇವಾ ಸಂಘ ರಾಷ್ಟ್ರೀಯ ಉಪಾಧ್ಯಕ್ಷ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕಕ್ಕೆ ಮನವಿ ಮಾಡುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಕೆ.ಕೆ.ಗೆಸ್ಟ್‌ಹೌಸ್ನಲ್ಲಿ ಭೋವಿ ಅಭಿವೃದ್ಧಿ ಸಂಘದ ಭೋವಿ ಸಮುದಾಯದ ಮುಖಂಡರು ಉಸ್ತುವಾರಿ ಅರುಣ್ ಸಿಂಗ್ರನ್ನು ಭೇಟಿ ಮಾಡಿ ಭೋವಿ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನ ಆಯ್ಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಸಚಿವ ಅರವಿಂದ್ ಲಿಂಬಾವಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈವರೆಗೂ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಿಲ್ಲ ಎಂದು ಲಿಂಬಾವಳಿ ವಿರುದ್ಧ ದೂರು ನೀಡಿದ್ದಾರೆ. ಹಾಗೂ ಶೀಘ್ರದಲ್ಲೇ ನಿಗಮಕ್ಕೆ ಅಧ್ಯಕ್ಷರ ನೇಮಕ ಮಾಡಬೇಕು. ಇಲ್ಲದೇ ಹೋದಲ್ಲಿ ಲಿಂಬಾವಳಿ ಮನೆ ಮುಂದೆ ಧರಣಿ ಮಾಡೋದಾಗಿ ಭೋವಿ ಸಮಾಜ ಸೇವಾ ಸಂಘ ರಾಷ್ಟ್ರೀಯ ಉಪಾಧ್ಯಕ್ಷ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.
ಇನ್ನು ಬಸವರಾಜ ಬೊಮ್ಮಾಯಿ ಮತ್ತು ಅರುಣ್ ಸಿಂಗ್ ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ. ನಿನ್ನೆ ಕೆ.ಕೆ.ಗೆಸ್ಟ್‌ಹೌಸ್‌ಗೆ ಕರೆಸಿಕೊಂಡಿದ್ದ ಅರುಣ್ ಸಿಂಗ್ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಲೆಹರ್ ಸಿಂಗ್‌ರನ್ನು ಕರೆಸಿಕೊಂಡು ಮಾತನಾಡಿದ್ದಾರೆ. ಇದಕ್ಕೂ ಮುನ್ನ ಅರುಣ್ ಸಿಂಗ್ಗೆ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದಾರೆ.
ಇದನ್ನೂ ಓದಿ: ವಿಶ್ವದಲ್ಲಿ ಅತಿ ದುಬಾರಿ ಮಾವಿನ ಹಣ್ಣು ಯಾವುದು ಗೊತ್ತೇ? ಹಣ್ಣಿನ ಬೆಲೆ ಕೇಳಿದ್ರೆ ಹುಬ್ಬೇರುವುದು ಗ್ಯಾರೆಂಟಿ!