AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಾಡಳಿತ ಸಚಿವರ ಸ್ವಕ್ಷೇತ್ರದಲ್ಲೇ ಪುರಸಭೆ ಮುಂಭಾಗ ರಾಶಿ ರಾಶಿ ಕಸ: ಕೋಟ್ಯಾಂತರ ಮೌಲ್ಯದ ವಾಹನಗಳು ಧೂಳು ಪಾಲು

ರಾಮನಗರದ ಬಿಡದಿ ಪುರಸಭೆಯಲ್ಲಿ ವ್ಯಾಪಕ ನಿರ್ಲಕ್ಷ್ಯ, ಅಕ್ರಮ ಆರೋಪಗಳು ಕೇಳಿಬಂದಿವೆ. ಪುರಸಭೆ ಮುಂಭಾಗದಲ್ಲೇ ಕಸದ ರಾಶಿ ಬಿದ್ದಿದ್ದು, ಕೋಟ್ಯಾಂತರ ರೂ. ಮೌಲ್ಯದ ಸರ್ಕಾರಿ ವಾಹನಗಳು ಸಣ್ಣ ರಿಪೇರಿ ಇಲ್ಲದೆ ತುಕ್ಕು ಹಿಡಿಯುತ್ತಿವೆ. ಅಧಿಕಾರಿಗಳು ಖಾಸಗಿ ವಾಹನಗಳಿಗೆ ಬಾಡಿಗೆ ನೀಡಿ ಕಮಿಷನ್ ಪಡೆಯುತ್ತಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಕ್ರಮದ ಭರವಸೆ ನೀಡಿದ್ದಾರೆ.

ಪೌರಾಡಳಿತ ಸಚಿವರ ಸ್ವಕ್ಷೇತ್ರದಲ್ಲೇ ಪುರಸಭೆ ಮುಂಭಾಗ ರಾಶಿ ರಾಶಿ ಕಸ: ಕೋಟ್ಯಾಂತರ ಮೌಲ್ಯದ ವಾಹನಗಳು ಧೂಳು ಪಾಲು
ಬಿಡದಿ ಪುರಸಭೆImage Credit source: Tv9 kannada
ಪ್ರಶಾಂತ್​ ಬಿ.
| Edited By: |

Updated on:Nov 02, 2026 | 6:26 PM

Share

ರಾಮನಗರ, ನ.2: ಅದು ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಸ್ವಲ್ಪ ದೂರುದಲ್ಲಿರುವ ಬಿಡದಿ ಪುರಸಭೆ. ಇಡೀ ಪಟ್ಟಣವನ್ನು ಸ್ವಚ್ಛವಾಗಿಡಬೇಕಾದ ಪುರಸಭೆಯ ಮುಂಭಾಗದಲ್ಲೇ ರಾಶಿ ರಾಶಿ ಕಸ ಬಿದ್ದಿದ್ದರೂ ಕೇಳುವವರಿಲ್ಲ, ನೋಡುವವರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಸಾರ್ವಜನಿಕರ ತೆರಿಗೆ ಹಣದಿಂದ ಖರೀದಿಸಿದ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ವಾಹನಗಳು ಸಣ್ಣಪುಟ್ಟ ರಿಪೇರಿಯಿಲ್ಲದೆ ನಿಂತಲ್ಲಿಯೇ ಧೂಳು ತಿನ್ನುತ್ತಾ ಹಾಳಾಗುತ್ತಿವೆ.

ಇಷ್ಟೆಲ್ಲಾ ಅವಾಂತರ ನಡೆಯುತ್ತಿರುವುದು ರಾಜ್ಯದ ಪೌರಾಡಳಿತ ಸಚಿವ ಹಾಗೂ ಶಾಸಕರಾದ ಹೆಚ್.ಸಿ. ಬಾಲಕೃಷ್ಣ ಅವರ ಸ್ವಕ್ಷೇತ್ರವಾದ ಮಾಗಡಿ, ರಾಮನಗರ ಗಡಿ ವ್ಯಾಪ್ತಿಯ ಬಿಡದಿ ಪುರಸಭೆಯಲ್ಲಿ ಅಧಿಕಾರಿಗಳ ಈ ತೀವ್ರ ನಿರ್ಲಕ್ಷ್ಯ ಹಾಗೂ ಅಕ್ರಮದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಡದಿ ಪುರಸಭೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕಮಿಷನ್ ಆಸೆಯ ಗಂಭೀರ ಆರೋಪಗಳು ಕೇಳಿಬಂದಿವೆ.

ಸಾರ್ವಜನಿಕರ ತೆರಿಗೆ ಹಣದಿಂದ ಖರೀದಿಸಿದ ಜೆಸಿಬಿ, ಫಾಗಿಂಗ್ ಯಂತ್ರಗಳು, ಚರಂಡಿ ಸ್ವಚ್ಛಗೊಳಿಸುವ ಜೆಟ್ಟಿಂಗ್ ವಾಹನಗಳು ಹಾಗೂ ಕಸ ಸಾಗಣೆ ವಾಹನಗಳು ಕಳೆದ ಹಲವು ತಿಂಗಳುಗಳಿಂದ ಆವರಣದಲ್ಲಿ ನಿಂತು ತುಕ್ಕು ಹಿಡಿಯುತ್ತಿವೆ. ಸ್ವಂತ ಸರ್ಕಾರಿ ವಾಹನಗಳನ್ನು ಸಣ್ಣಪುಟ್ಟ ರಿಪೇರಿ ಮಾಡಿಸಿ ಬಳಸಿಕೊಳ್ಳುವ ಸೌಜನ್ಯ ತೋರದ ಅಧಿಕಾರಿಗಳು, ಖಾಸಗಿಯವರಿಂದ ದುಬಾರಿ ಬಾಡಿಗೆಗೆ ವಾಹನಗಳನ್ನು ಪಡೆದು ಜೇಬು ತುಂಬಿಸಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಡೀ ನಗರಕ್ಕೆ ಸ್ವಚ್ಛತೆಯ ಪಾಠ ಮಾಡಬೇಕಾದ ಪುರಸಭೆಯ ಆವರಣ ಮತ್ತು ಮುಂಭಾಗದಲ್ಲೇ ಕಸ ದುರ್ನಾತ ಬೀರುತ್ತಿದ್ದು, ವಿವಿಧ ಕೆಲಸಗಳಿಗೆ ಕಚೇರಿಗೆ ಬರುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಸಿಐಡಿ ಹಳೆಯ ಅಧಿಕಾರಿಗಳಿಗೆ ಕೊಕ್ ನೀಡಿ ಇಬ್ಬರು ಐಪಿಎಸ್ ಅಧಿಕಾರಿಗಳ ಎಸ್‌ಐಟಿ ರಚಿಸಿದ ಹೈಕೋರ್ಟ್

“ಸಾರ್ವಜನಿಕರ ಹಣದಲ್ಲಿ ತಂದ ವಾಹನಗಳನ್ನು ರಿಪೇರಿ ಮಾಡಿಸದೆ ನಿಲ್ಲಿಸಿ, ಖಾಸಗಿ ವಾಹನಗಳಿಗೆ ಬಾಡಿಗೆ ನೀಡಿ ಕಮಿಷನ್ ಹೊಡೆಯಲಾಗುತ್ತಿದೆ. ಪುರಸಭೆ ಮುಂಭಾಗದಲ್ಲೇ ಕಸದ ರಾಶಿಯಿದ್ದು, ಅಧಿಕಾರಿಗಳಿಗೆ ಸ್ವಚ್ಛತೆಯ ಅರಿವೇ ಇಲ್ಲ,” ಎಂದು ಸ್ಥಳೀಯ ನಿವಾಸಿ ಬಾಲಕೃಷ್ಣ ಹಾಗೂ ನಗರಸಭೆ ಸದಸ್ಯ ಉಮೇಶ್ ಕಿಡಿಕಾರಿದ್ದಾರೆ. ಬಿಡದಿ ಪುರಸಭೆಯ ಈ ಅವಾಂತರದ ಕುರಿತು ಪೌರಾಡಳಿತ ಸಚಿವ / ಸ್ಥಳೀಯ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರನ್ನು ಈ ಬಗ್ಗೆ ಕೇಳಿದಾಗ ಅವರು, “ಬಿಡದಿ ಪುರಸಭೆಯಲ್ಲಿ ವಾಹನಗಳು ನಿಂತಲ್ಲಿಯೇ ಹಾಳಾಗುತ್ತಿರುವುದು ಹಾಗೂ ಕಸದ ನಿರ್ವಹಣೆ ಲೋಪದ ಕುರಿತು ಇದೀಗ ತಷ್ಟೇ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ತಕ್ಷಣವೇ ಪರಿಶೀಲನೆ ನಡೆಸಿ, ಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ.” ಎಂದು ಹೇಳಿದ್ದಾರೆ. ಇನ್ನಾದರೂ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿರುವುದನ್ನು ತಡೆದು, ತುಕ್ಕು ಹಿಡಿಯುತ್ತಿರುವ ಕೋಟ್ಯಾಂತರ ರೂಪಾಯಿ ಮೌಲ್ಯದ ವಾಹನಗಳಿಗೆ ಮುಕ್ತಿ ನೀಡಿ, ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Mon, 2 November 26

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಹೈದರಾಬಾದ್​ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಜೂಪಲ್ಲಿ ರಾಮೇಶ್ವರ ರಾವ್
ಹೈದರಾಬಾದ್​ನಲ್ಲಿ ಅಮಿತ್ ಶಾ ಅವರನ್ನು ಭೇಟಿಯಾದ ಜೂಪಲ್ಲಿ ರಾಮೇಶ್ವರ ರಾವ್
ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!
ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!
ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ಹಾಲು, ಮೊಸರು ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!