ಬೀದರ್: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಅಧಿಕಾರಿ ಸಾವು

| Updated By: ಗಂಗಾಧರ​ ಬ. ಸಾಬೋಜಿ

Updated on: May 06, 2024 | 4:17 PM

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕರ್ತವ್ಯ ನಿರ್ವಹಿಸುವಾಗ ಹೃದಯಾಘಾತ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇನ್ನು ವಿಜಯಪುರದಲ್ಲಿ ಚುನಾವಣಾ ಕರ್ತವ್ಯಕ್ಕೆ ಬಂದಿದ್ದ ಅಧಿಕಾರಿ ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ.

ಬೀದರ್: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಅಧಿಕಾರಿ ಸಾವು
ಬೀದರ್: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಅಧಿಕಾರಿ ಸಾವು
Follow us on

ಬೀದರ್, ಮೇ 05: ಹೃದಯಾಘಾತದಿಂದ (Heart attack) ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ. ಆನಂದ್(31) ಮೃತ (death) ಸಹಾಯಕ ಕೃಷಿ ಅಧಿಕಾರಿ. ಕೋಡಂಬಲ್ ಚೆಕ್​ಪೋಸ್ಟ್​ನಲ್ಲಿ ಕರ್ತವ್ಯ ನಿರ್ವಹಿಸುವಾಗ ಹೃದಯಾಘಾತ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನಾಳೆ ಎರಡನೇ ಹಂತದ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದೆ.

ಚುನಾವಣಾ ಕರ್ತವ್ಯಕ್ಕೆ ಬಂದಿದ್ದ ಅಧಿಕಾರಿ ಅಸ್ವಸ್ಥ

ವಿಜಯಪುರ: ಚುನಾವಣಾ ಕರ್ತವ್ಯಕ್ಕೆ ಬಂದಿದ್ದ ಅಧಿಕಾರಿ ಅಸ್ವಸ್ಥಗೊಂಡಿರುವಂತಹ ಘಟನೆ ನಡೆದಿದೆ. ಚುನಾವಣಾ ಎಪಿಆರ್​ಒ ರಮೇಶ ನಿಡಗುಂದಿ ಅಸ್ವಸ್ಥರಾದ ಅಧಿಕಾರಿ. ಕರ್ತವ್ಯಕ್ಕೆ ಹಾಜರಾಗಲು ನಗರದ ಸೈನಿಕ ಶಾಲೆಗೆ ಆಗಮಿಸಿದ್ದರು. ಹೈ ಶುಗರ್, ಹೈಬಿಪಿಯಿಂದ ಕುಸಿದು ಬಿದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣಾ ತರಬೇತಿಯಲ್ಲಿ ಅವ್ಯವಸ್ಥೆ: ರೊಚ್ಚಿಗೆದ್ದ ಸರ್ಕಾರಿ ನೌಕರರು

ನಾಗಠಾಣ ವಿಧಾನಸಭಾ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನೇಮಿಸಲಾಗಿತ್ತು. ಸೈನಿಕ ಶಾಲೆಯ ಆರೋಗ್ಯ ತಪಾಸಣಾ ಕೇಂದ್ರಲ್ಲಿ ಚಿಕಿತ್ಸೆ ನೀಡಲಾಗಿದ್ದು, ಜಿಲ್ಲಾಧಿಕಾರಿ ಅಧಿಕಾರಿಯ ಆರೋಗ್ಯ ವಿಚಾರಿಸಿದರು. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಮೀನು ಹಿಡಿಯಲು ಹೋಗಿ ಬಿದ್ದಿರುವ ಶಂಕೆ

ಆನೇಕಲ್: ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವವಾಗಿ ಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ದೊಡ್ಡಕೆರೆಯಲ್ಲಿ ನಡೆದಿದೆ. ಮೀನು ಹಿಡಿಯಲು ಹೋಗಿ ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು 40 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ವ್ಯಕ್ತಿ ಎಂದು ಅಂದಾಜಿಸಲಾಗಿದ್ದು, ಮೃತ ವ್ಯಕ್ತಿ ಗುರುತು ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ: ವಿಕೋಪಕ್ಕೆ ತಿರುಗಿದ ಜಗಳ: ಕಪಾಳಕ್ಕೆ ಹೊಡೆದಿದ್ದಕ್ಕೆ ವ್ಯಕ್ತಿ ಸಾವು

ಕೆರೆಯಲ್ಲಿ ತೇಲುತ್ತಿದ್ದ ಶವವನ್ನ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೊಲೀಸರು ಮೃತದೇಹವನ್ನ ಹೊರತೆಗೆದಿದ್ದಾರೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಕಲ್ಲು ಎತ್ತಿಹಾಕಿದ ಪತಿ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಪತಿ ಕಲ್ಲು ಎತ್ತಿಹಾಕಿರುವಂತಹ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ದೀಪಿಕಾ ಮೇಲೆ ಕಲ್ಲು ಎತ್ತಿಹಾಕಿದ ಪತಿ ಅನಿಲ್. ದೀಪಿಕಾ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಅನಿಲ್​​​ನನ್ನ  ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.