ಬೀದರ್​ನಲ್ಲಿ ಮಂಗನ ಉಪಟಳಕ್ಕೆ ಗ್ರಾಮಸ್ಥರು ಸುಸ್ತು: 10ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಮುಶ್ಯಾ

ಬೀದರ್ ತಾಲೂಕಿನ ಚಿಟ್ಟಾವಾಡಿ ಗ್ರಾಮದಲ್ಲಿ ಕೋತಿಯೊಂದು ಎರಡು ವಾರಗಳಲ್ಲಿ ಹತ್ತು ಜನಕ್ಕೂ ಹೆಚ್ಚು ಜನರನ್ನು ಕಚ್ಚಿರುವಂತಹ ಘಟನೆ ನಡೆದಿದೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಕೋತಿಯನ್ನು ಸೆರೆಹಿಡಿದು ಕಾಡಿಗೆ ಬಿಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಮಕ್ಕಳು ಮನೆಯಿಂದ ಹೊರಬರಲು ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬೀದರ್​ನಲ್ಲಿ ಮಂಗನ ಉಪಟಳಕ್ಕೆ ಗ್ರಾಮಸ್ಥರು ಸುಸ್ತು: 10ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಮುಶ್ಯಾ
ಬೀದರ್​ನಲ್ಲಿ ಮಂಗನ ಉಪಟಳಕ್ಕೆ ಗ್ರಾಮಸ್ಥರು ಸುಸ್ತು: 10ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಮುಶ್ಯಾ
Follow us
ಸುರೇಶ ನಾಯಕ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 12, 2024 | 6:45 PM

ಬೀದರ್​, ಡಿಸೆಂಬರ್​ 12: ಎರಡು ವಾರದಲ್ಲಿ 10ಕ್ಕೂ ಹೆಚ್ಚು ಜನರಿಗೆ ಕೋತಿಯೊಂದು (monkey) ಕಚ್ಚಿರುವಂತಹ ಘಟನೆ ಬೀದರ್ ತಾಲೂಕಿನ ಚಿಟ್ಟಾವಾಡಿ ಗ್ರಾಮದಲ್ಲಿ ನಡೆದಿದೆ. ಸದ್ಯ ಮಂಗನ ದಾಳಿಯಿಂದಾಗಿ  ಚಿಟ್ಟಾವಾಡಿ ಗ್ರಾಮಸ್ಥರು ಬೆಚ್ಚಿಬಿದಿದ್ದಾರೆ. ಕೋತಿಯನ್ನ ಸೆರೆ ಹಿಡಿದು ಕಾಡಿಗೆ ಬಿಡುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ನಿನ್ನೆ ಗ್ರಾಮದ ಲಲಿತಾ ಎಂಬುವರ ಕಾಲಿಗೆ ಕೋತಿ ಕಚ್ಚಿದೆ. ಗಾಯಾಳು ಮಹಿಳೆಗೆ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ. ಕೋತಿ ಕಾಟದಿಂದಾಗಿ ಮಕ್ಕಳು ಮನೆಯಿಂದ ಹೊರಬರಲು ಹೆದರುವಂತಾಗಿದೆ.

ಚಿತ್ರದುರ್ಗ ಜನರ ನೆಮ್ಮದಿ ಕೆಡಿಸಿದ್ದ ಮಂಗಗಳು 

ಇತ್ತೀಚೆಗೆ ಕೋಟೆನಾಡು ಚಿತ್ರದುರ್ಗದ ಐಯುಡಿಪಿ ಬಡಾವಣೆಯಲ್ಲಿ ಮಂಗಗಳ ಗುಂಪೊಂದು ಬಿಡಾರ ಹೂಡಿತ್ತು. ಮಕ್ಕಳು ಹೊರಗೆ ಓಡಾಡುವಂತಿಲ್ಲ. ವೃದ್ಧರು ಹಾಲು, ಹಣ್ಣು , ತರಕಾರಿ ತರುವಂತಿಲ್ಲ. ಮಹಿಳೆಯರು ಅಡುಗೆ ಮನೆಯಲ್ಲಿ ಕೆಲಸ ಮಾಡುವಂತಿಲ್ಲ. ಎಲ್ಲಿ ನೋಡಿದರಲ್ಲಿ ಮಂಗಗಳು ದಾಂಗುಡಿಯಿಟ್ಟು ಜನರ ನೆಮ್ಮದಿ ಕೆಡಿಸಿದ್ದವು.

ಇದನ್ನೂ ಓದಿ: ಬಾಲಕನ ಮೇಲೆ ನಾಯಿ ಡೆಡ್ಲಿ ಅಟ್ಯಾಕ್: ರಕ್ತ ಸಿಕ್ತವಾದ ಮಗುವನಿ ಸ್ಥಿತಿ ನೋಡಿ ಬೆಚ್ಚಿಬಿದ್ದ ಸ್ಥಳೀಯರು

ಕೆಲವರಿಗೆ ತಲೆ, ಮೈ ಕೈ ಪರಿಚಿದ ಘಟನೆಗಳು ನಡೆದಿದ್ದವು. ಹೀಗಾಗಿ, ಅರಣ್ಯ ಇಲಾಖೆ, ನಗರಸಭೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಮಂಗಗಳನ್ನು ಸ್ಥಳಾಂತರಿಸಬೇಕೆಂಬುದು ಆಗ್ರಹಿಸಿದ್ದರು.

ಸಾಕು ನಾಯಿಯ ಮೇಲೆ ಚಿರತೆ ದಾಳಿ

ಮನೆಯ ಕಾವಲಿಗೆ ಇದ್ದ ಸಾಕು ನಾಯಿಯ ಮೇಲೆ ಚಿರತೆಯೊಂದು ಅಟ್ಯಾಕ್ ಮಾಡಿ ನಾಯಿಯನ್ನ ಹೊತ್ತೊಯ್ದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಗಂಗಾಧರನಗರದಲ್ಲಿ ನಡೆದಿತ್ತು. ಗ್ರಾಮದ ರಾಮದಾಸ್ ಎಂಬುವವರ ಮನೆಯಲ್ಲಿ ಘಟನೆ ನಡೆದಿದ್ದು, ನಾಯಿಯನ್ನ ಚಿರತೆ ಹೊತ್ತೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ; ಕಬ್ಬನ್ ಪಾರ್ಕ್ ನಲ್ಲೂ ಸಾಕುನಾಯಿಗಳ ಮಾಲೀಕರಿಂದ ರೂಲ್ಸ್ ಬ್ರೇಕ್

ಇನ್ನು ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ಉಪಟಳ ಹೆಚ್ಚಾಗಿದ್ದು, ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿದರೂ ಅರಣ್ಯ ಇಲಾಖೆ ಅಧಿಕಾರಿಗಳು ಕ್ಯಾರೆ ಎಂದಿಲ್ಲ. ಇದರಿಂದ ರಾತ್ರಿ ವೇಳೆ ಮನೆಯಿಂದ ಹೊರಬರಲು ನಿವಾಸಿಗಳು ಹೆದರುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್