ಕೃಷಿ ಪ್ರಧಾನ ಜಿಲ್ಲೆಯಲ್ಲೇ ಹೆಚ್ಚಾಗುತ್ತಿದೆ ರೈತರ ಆತ್ಮಹತ್ಯೆ ಪ್ರಕರಣ.. ಏನು ಕ್ರಮ ಕೈಗೊಳ್ಳುತ್ತಿದೆ ಸರ್ಕಾರ?

ಅತಿವೃಷ್ಟಿ, ಅನಾವೃಷ್ಟಿಯ ಸಂಕಷ್ಟ ಎದುರಾಗಿ ಇದರ ಹೊಡೆತಕ್ಕೆ ಸಿಲುಕಿ ಅನ್ನದಾತ ನರಳಾಡುತ್ತಿದ್ದಾನೆ. ಎರಡು ರಾಜ್ಯದ ಗಡೀ ಹಂಚಿಕೊಂಡಿರುವ ಬೀದರ್ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿಲ್ಲ.

ಕೃಷಿ ಪ್ರಧಾನ ಜಿಲ್ಲೆಯಲ್ಲೇ ಹೆಚ್ಚಾಗುತ್ತಿದೆ ರೈತರ ಆತ್ಮಹತ್ಯೆ ಪ್ರಕರಣ.. ಏನು ಕ್ರಮ ಕೈಗೊಳ್ಳುತ್ತಿದೆ ಸರ್ಕಾರ?
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಸ್ಥರು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 19, 2020 | 2:31 PM

ಬೀದರ್: ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ಸಾಲದ ಸುಳಿಯಿಂದ ಹೊರಬರಲಾರದೆ ಅನ್ನದಾತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ದುರಂತವೆಂದರೆ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಹತ್ತಾರು ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿವೆಯೇ ಹೊರತು ಕಡಿಮೆಯಾಗುತ್ತಿಲ್ಲ. ಸಾಲಮನ್ನಾ, ಬೆಳೆ ವಿಮೆ ಆಸರೆ ಇದ್ದರೂ ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಮಾತ್ರ ಬ್ರೇಕ್ ಬಿದ್ದಿಲ್ಲ.

ಜಿಲ್ಲೆಯಲ್ಲಿ ನಿರಂತರವಾಗಿ ಅತಿವೃಷ್ಟಿ, ಅನಾವೃಷ್ಟಿಯ ಸಂಕಷ್ಟ ಎದುರಾಗಿ ಇದರ ಹೊಡೆತಕ್ಕೆ ಸಿಲುಕಿ ಅನ್ನದಾತ ನರಳಾಡುತ್ತಿದ್ದಾನೆ. ಎರಡು ರಾಜ್ಯದ ಗಡೀ ಹಂಚಿಕೊಂಡಿರುವ ಬೀದರ್ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿಲ್ಲ.

ಬೀದರ್‌ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ರೈತರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಬ್ಬು, ಉದ್ದು, ಹೆಸರು ಕಾಳು, ಸೋಯಾಬಿನ್‌, ಶುಂಠಿ, ಭತ್ತ ಹೀಗೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತದೆ. ಆದರೆ ವಿಪರ್ಯಾಸವೆಂದ್ರೆ ಮೂರು ವರ್ಷಗಳಲ್ಲಿ ಜಿಲ್ಲೆಯೊಂದರಲ್ಲೇ ಬರೋಬ್ಬರಿ 140 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷಿ ಪ್ರಧಾನ ಜಿಲ್ಲೆಯಲ್ಲೇ ಹೆಚ್ಚಾಗುತ್ತಿದೆ ರೈತರ ಆತ್ಮಹತ್ಯೆ: ಬಹುತೇಕ ರೈತರ ಆತ್ಮಹತ್ಯೆಗೆ ಬ್ಯಾಂಕ್‌ ಹಾಗೂ ಖಾಸಗಿ ಸಾಲವೇ ಕಾರಣವಾಗಿರುವುದು ಸ್ಪಷ್ಟವಾಗಿದೆ. ಬರಗಾಲ, ಸಾಲ ಮತ್ತಿತರೆ ಕಾರಣಗಳಿಂದ ರೈತರು ವರ್ಷ ವರ್ಷ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸರಕಾರದ ಸಾಲ ಮನ್ನಾ ಸೇರಿದಂತೆ ಅನೇಕ ಯೋಜನೆಗಳಿದ್ದ ಮೇಲೂ ರೈತರ ಸರಣಿ ಆತ್ಮಹತ್ಯೆ ನಿಲ್ಲದಿರುವುದು ಕಳವಳಕಾರಿಯಾದ ಬೆಳವಣಿಗೆಯಾಗಿದೆ.

2018-19ನೇ ಸಾಲಿನಲ್ಲಿ 57 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019- 20ನೇ ವರ್ಷದಲ್ಲಿ 42 ರೈತರು ಜೀವ ಕಳೆದುಕೊಂಡಿದ್ದಾರೆ. 2020- 21ನೇ ಸಾಲಿನಲ್ಲಿ 39 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2018-19 ರಲ್ಲಿ 57 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ ಬೀದರ್‌ ತಾಲೂಕಿನಲ್ಲಿ 8 ರೈತರು, ಭಾಲ್ಕಿಯಲ್ಲಿ 17, ಬಸವಕಲ್ಯಾಣದಲ್ಲಿ 15, ಹುಮನಾಬಾದ್‌ನಲ್ಲಿ 07 ಹಾಗೂ ಔರಾದ್‌ ತಾಲೂಕಿನಲ್ಲಿ 10 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

2019-20 ರಲ್ಲೂ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಬೀದರ್‌ನಲ್ಲಿ 11, ಭಾಲ್ಕಿಯಲ್ಲಿ 09, ಬಸವಕಲ್ಯಾಣದಲ್ಲಿ 03, ಹುಮನಾಬಾದ್‌ನಲ್ಲಿ 10 ಹಾಗೂ ಔರಾದ್‌ನಲ್ಲಿ 09 ರೈತರು ಜೀವ ಕಳೆದುಕೊಂಡಿದ್ದಾರೆ. 2020-21ರಲ್ಲಿ 37 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಬೀದರ್‌ನಲ್ಲಿ 3, ಭಾಲ್ಕಿ 05, ಬಸವಕಲ್ಯಾಣ 12, ಹುಮನಾಬಾದ್‌ 09 ಹಾಗೂ ಔರಾದ್‌ನಲ್ಲಿ 08 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಡೀ ಜಿಲ್ಲೆಯಲ್ಲಿ ಭಾಲ್ಕಿ ಮತ್ತು ಹುಮನಾಬಾದ್‌ ತಾಲೂಕುಗಳಲ್ಲೇ ಹೆಚ್ಚಿನ ರೈತರು ಆತ್ಮಹತ್ಯೆಗೆ ಶರಣಾಗಿರುವುದು ಕಂಡು ಬಂದಿದೆ. ಬರೀ ಮೂರೇ ವರ್ಷದಲ್ಲಿ 140 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

ಅತಿವೃಷ್ಟಿ, ಅನಾವೃಷ್ಟಿಗೆ ಮಂಡಿಯೂರಿದ ಅನ್ನದಾತ: ಈ ಪೈಕಿ 101 ಮೃತ ರೈತರ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ನೀಡಿದೆ. ಇನ್ನುಳಿದ 37 ರೈತರ ಆತ್ಮಹತ್ಯೆಯ ಪ್ರಕರಣಗಳು ನಾನಾ ಕಾರಣಗಳಿಂದ ತಿರಸ್ಕೃತಗೊಂಡಿವೆ. ಇನ್ನೂ ಆತ್ಮಹತ್ಯೆ ಮಾಡಿಕೊಂಡಿರುವ ಕೆಲವೂ ರೈತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಸಿಕ್ಕಿದೆ ಆದರೇ ಆತ ಮಾಡಿಕೊಂಡಿರುವ ಸಾಲ ಮಾತ್ರ ಮನ್ನಾ ಆಗಿಲ್ಲ.

ಇದು ರೈತರ ಅಸಮಾಧಾನ ಹೆಚ್ಚುವಂತೆ ಮಾಡಿದೆ. ಮಳೆ ಜಿಲ್ಲೆಯ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದರೂ ತಪ್ಪಾಗಲಾರದು. ಒಮ್ಮೆ ಅತಿವೃಷ್ಟಿ ಮತ್ತೊಮ್ಮೆ ಅನಾವೃಷ್ಟಿ. ಎರಡು ರೀತಿಯಿಂದಲೂ ರೈತರಿಗೆ ನಷ್ಟವಾಗುತ್ತಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಬರಗಾಲ ಜಿಲ್ಲೆಯಲ್ಲಿ ಮಂಡಿಯೂರಿದ್ದು, ರೈತ ಕುಸಿದು ಬಿದ್ದಂತಾಗಿದೆ. ಬೆಳೆ ಬೆಳೆಯದ ಕಾರಣ ಸಾಲ ಮಾಡುವುದು ಅನಿವಾರ‍್ಯವಾಗಿದೆ.

ಸಾಲ ತೀರಿಸಲಾಗದೇ ಸ್ವಾಭಿಮಾನಿಯಾದ ರೈತ ಕೊನೆಗೆ ಆತ್ಮಹತ್ಯೆಗೆ ಶರಣಾಗುತ್ತಿರುವುದು ಕಂಡು ಬರುತ್ತಿದೆ. ಮಳೆ ಇಲ್ಲದ ಸಮಯದಲ್ಲಿ ಸರ್ಕಾರ ಸಕಾಲದಲ್ಲಿ ರೈತರ ನೆರವಿಗೂ ಬಾರದೇ ಇರುವುದು ಒಂದು ಕಾರಣ ಎನ್ನಬಹುದಾಗಿದೆ.

ಸರಕಾರ ರೈತರಿಗೆ ಅನೂಕೂಲಕ್ಕಾಗಿ ಅವರನ್ನು ಸಂಕಷ್ಟದಿಂದ ಪಾರು ಮಾಡುವ ಉದ್ದೇಶದಿಂದ ಹತ್ತಾರು ಯೋಜನೆಯನ್ನ ಜಾರಿಗೆ ತಂದರೂ ಕೂಡಾ ರೈತರ ಆತ್ಮಹತ್ಯೆಯನ್ನ ತಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಈ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ರೈತರು ಯಾವ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದು ಆ ಸಮಸ್ಯೆಗೆ ಪರಿಹಾರ ಹುಡುಕಿ ರೈತರ ಆತ್ಮಹತ್ಯೆಗೆ ಬ್ರೇಕ್ ಹಾಕಬೇಕಾಗಿದೆ.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ