ಬೀದರ್ ಜಿಲ್ಲೆಯಲ್ಲಿ ಎರಡು ವರ್ಷದಲ್ಲಿ 132 ಮಂದಿ ರೈತರು ಆತ್ಮಹತ್ಯೆಗೆ ಶರಣು

ಬೀದರ್ ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ಸಾಲದ ಸುಳಿಯಿಂದ ಹೊರಬರಲಾರದೆ ಅನ್ನದಾತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ದುರಂತವೆಂದರೆ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಹತ್ತಾರು ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿವೆ, ಹೊರತು ಕಡಿಮೆಯಾಗುತ್ತಿಲ್ಲ ಇದು ಸಹಜವಾಗಿಯೇ ಆತಂಕಕ್ಕೆ ಕಾರಣವಾಗಿದೆ.

ಬೀದರ್ ಜಿಲ್ಲೆಯಲ್ಲಿ ಎರಡು ವರ್ಷದಲ್ಲಿ 132 ಮಂದಿ ರೈತರು ಆತ್ಮಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Updated By: ವಿವೇಕ ಬಿರಾದಾರ

Updated on: Jul 09, 2025 | 9:03 PM

ಬೀದರ್​, ಜುಲೈ 09: ಬೀದರ್ (Farmers) ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೀದರ್‌ (Bidar) ಕೃಷಿ ಪ್ರಧಾನ ಜಿಲ್ಲೆಯಾಗಿದೆ. ಕಬ್ಬು, ಉದ್ದು, ಹಸಿರು ಕಾಳು, ಸೋಯಾಬಿನ್‌, ಶುಂಠಿ ಹೀಗೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತದೆ. ಜಿಲ್ಲೆಯ ಒಂದಷ್ಟು ಕಡೆ ನೀರಾವರಿಯ ಸೌಲಭ್ಯವೂ ಇದೆ. ಆದರೆ, ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಸಂಖ್ಯೆ ಮಾತ್ರ ಏರುತ್ತಲೇ ಇದೆ. ಎರಡೂವರೆ ವರ್ಷದಲ್ಲಿ ಬೀದರ್‌ ಜಿಲ್ಲೆಯೊಂದರಲ್ಲೇ ಬರೋಬ್ಬರಿ 132 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹುತೇಕ ರೈತರ ಆತ್ಮಹತ್ಯೆಗೆ ಬ್ಯಾಂಕ್‌ ಹಾಗೂ ಖಾಸಗಿ ಸಾಲ ಕಾರಣವಾಗಿರುವುದು ಸ್ಪಷ್ಟವಾಗಿದೆ.

ಬರಗಾಲ, ಸಾಲ, ಮತ್ತಿತರೆ ಕಾರಣಗಳಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸರಕಾರದ ಸಾಲ ಮನ್ನಾ ಸೇರಿದಂತೆ ಅನೇಕ ಯೋಜನೆಗಳಿದ್ದ ಮೇಲೂ ರೈತರ ಸರಣಿ ಆತ್ಮಹತ್ಯೆ ನಿಲ್ಲದಿರುವುದು ಕಳವಳಕಾರಿಯಾದ ಬೆಳವಣಿಗೆಯಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳಲಿಕ್ಕೆ ಸರಕಾರ ಕಾರಣ ಎಂದು ರೈತ ಮುಂಖಡರು ಆರೋಪ ಮಾಡಿದ್ದಾರೆ.

ಅತಿವೃಷ್ಠಿ, ಅನಾವೃಷ್ಠಿಯಿಂದ ರೈತರು ಬೆಳೆ ಕಳೆದುಕೊಂಡರೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಪರಿಹಾರ ಸಿಗುತ್ತಿದೆ. ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೂ ಕೂಡ ರೈತರು ಸದೃಢವಾಗಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂಬುವುದು ದುರಾದೃಷ್ಟಕರ ಸಂಗತಿ. ಮಳೆಯೂ ಕೂಡ ಜಿಲ್ಲೆಯ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದರೆ ತಪ್ಪಾಗದು. ಒಮ್ಮೆ ಅತಿವೃಷ್ಟಿ ಮತ್ತೊಮ್ಮೆ ಅನಾವೃಷ್ಟಿ. ಎರಡು ರೀತಿಯಿಂದಲೂ ರೈತರಿಗೆ ನಷ್ಟವಾಗುತ್ತಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಬರಗಾಲ ಜಿಲ್ಲೆಯಲ್ಲಿ ಮಂಡಿಯೂರಿದ್ದು, ರೈತ ಕುಸಿದು ಹೋಗುವಂತಾಗಿದೆ.

ಇದನ್ನೂ ಓದಿ
ಬೆಂಗಳೂರು ಬೀದರ್ ಮಧ್ಯೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ
ಬೀದರ: ರೋಗ ಗುಣಮುಖಕ್ಕೆ ಜೀವಂತ ಮೀನು ನುಂಗುವುದು, ಏನಿದರ ವಿಶೇಷ?
ಸ್ವಾವಲಂಬಿ ಬದುಕಿಗೆ ಕೈ ಕಸೂತಿ ಕೆಲಸ ಆಸರೆ: ಇತರರಿಗೂ ಕಲಿಸುವ ಮೂಲಕ ಮಾದರಿ
ಬಂಜಾರ ಸಮುದಾಯದ ಟ್ರೈಬಲ್ ಪಾರ್ಕ್​ಗೆ ಗ್ರಹಣ: ಮುಗಿಯದ ಕಾಮಗಾರಿ

ಬೆಳೆ ಬೆಳೆಯದ ಕಾರಣ ಸಾಲ ಮಾಡುವುದು ಅನಿವಾರ್ಯವಾಗಿದೆ. ಸಾಲ ತೀರಿಸಲಾಗದೆ ರೈತರು ಕೊನೆಗೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮಳೆ ಇಲ್ಲದ ಸಮಯದಲ್ಲಿ ಸರ್ಕಾರ ಸಕಾಲದಲ್ಲಿ ರೈತರ ನೆರವಿಗೆ ಬಾರದೆ ಇರುವುದು ಒಂದು ಕಾರಣ ಎನ್ನಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ಬರ ಪರಿಹಾರ, ಬೆಳೆ ವಿಮೆ, ಕಬ್ಬಿನ ಬಾಕಿ ಹಣ ಇನ್ನೂವರೆಗೂ ರೈತರ ಕೈಗೆ ಸಿಗದೆ ಜಿಲ್ಲೆಯ ಅನ್ನದಾತರು ಪರದಾಡುವಂತಾಗುತ್ತಿದೆ.

ಇದನ್ನೂ ಓದಿ: ಬೀದರ್: ಮಕ್ಕಳನ್ನು ಆಕರ್ಷಿಲು ಶಾಲೆಯನ್ನು ರೈಲು ಗಾಡಿಯಂತೆ ಪೇಂಟ್ ಮಾಡಿಸಿದ ಮುಖ್ಯ ಶಿಕ್ಷಕ

2023-23ನೇ ಸಾಲಿನಲ್ಲಿ 46 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2024-25 ನೇ ಸಾಲಿನಲ್ಲಿ 76 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 2025ರಲ್ಲಿ ಈಗವರೆಗೆ 11 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಬೀದರ್‌ನಲ್ಲಿ 03, ಭಾಲ್ಕಿ 07, ಬಸವಕಲ್ಯಾಣ 0, ಹುಮನಾಬಾದ್‌ 02 ಹಾಗೂ ಔರಾದ್‌ನಲ್ಲಿ 0 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು.

ಕಳೆದ ಎರಡೂವರೆ ವರ್ಷದಲ್ಲಿ ರೈತರು ಒಂದಿಲ್ಲೊಂದು ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಲೇ ಇದ್ದಾರೆ. ರೈತರನ್ನು ಸಂಕಷ್ಟದಿಂದ ಪಾರು ಮಾಡುವ ಉದ್ದೇಶದಿಂದ ಸರ್ಕಾರ ಹತ್ತಾರು ಯೋಜನೆಯನ್ನು ಜಾರಿಗೆ ತಂದರು ಕೂಡ ರೈತರ ಆತ್ಮಹತ್ಯೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಈ ವಿಚಾರವನ್ನು ಗಂಭಿರವಾಗಿ ಪರಿಗಣಿಸಿ ರೈತರು ಯಾವ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುಲು ಮುಂದಾಗುತ್ತಾರೆ ಎಂದು ತಿಳಿದು ಆ ಸಮಸ್ಯೆಗೆ ಪರಿಹಾರ ಹುಡುಕಬೇಕಾಗಿದೆ. ರೈತರ ಆತ್ಮಹತ್ಯೆಗೆ ಬ್ರೇಕ್ ಹಾಕಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ