ಬೀದರ್: ಕಲ್ಯಾಣ ಕರ್ನಾಟಕದ (Kalyana Karnataka) ಜಿಲ್ಲೆಗಳಲ್ಲಿ ಆಗಾಗ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಂತಹ ಪ್ರಕರಣಗಳು ವರದಿಯಾಗುತ್ತಿರುತ್ತವೆ. ಆದರೂ ಕೂಡ ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ನೀಡದೆ ಇರುವುದು ದುರ್ದೈವದ ಸಂಗತಿ. ಇದೀಗ ಮತ್ತೆ ಬೀದರ್ (Bidar) ತಾಲೂಕಿನ ಬರೀದಾಬಾದ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 14 ಜನರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥರನ್ನು ಬ್ರೀಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಒಂದೇ ದಿನ ಆರು ಜನ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದರು. ಸದ್ಯ ಬರೀದಾಬಾದ್ ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದಾರೆ.
ಕೊಪ್ಪಳ: ಜಿಲ್ಲೆಯಲ್ಲಿ ಮತ್ತೆ ವಾಂತಿ ಭೇದಿ ಪ್ರಕರಣ ಉಲ್ಬಣವಾಗಿದೆ. ಹೌದು ಕೊಪ್ಪಳ ತಾಲೂಕಿನ ಚಿಲವಾಡಿಗಿ ಗ್ರಾಮದ ಸುಮಾರು 20 ಕ್ಕೂ ಹೆಚ್ಚು ಜನರು ಕಳೆದ ಒಂದು ವಾರದಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಕಲುಷಿತ ನೀರು ಕುಡಿದಿದ್ದರಿಂದ ವಾಂತಿ ಭೇದಿ, ಕಣ್ಣು ಉರಿ, ಮೈಕೈನೋವು ಕಾಣಿಸಿಕೊಳ್ಳುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಕಳೆದ ಒಂದುವಾರದಿಂದ ಜಿಟಿ ಜಿಟಿ ಮಳೆಯಿಂದ ಕಲುಷಿತ ನೀರು ಕುಡಿದು ಅನೇಕರು ಅಸ್ವಸ್ತರಾಗಿದ್ದಾರೆ. ಇವರನ್ನು ಕೊಪ್ಪಳ, ಹೊಸಪೇಟೆ ವಿವಿಧ ಖಾಸಗಿ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:08 am, Sun, 30 July 23