Bidar News: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30 ಮಕ್ಕಳು‌‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿಂಬೂರು ಸರಕಾರಿ ಪ್ರೌಢ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30 ಮಕ್ಕಳು‌‌ ಅಸ್ವಸ್ಥರಾಗಿರುವ ಘಟನೆ ನಿನ್ನೆ(ಜೂ.23) ನಡೆದಿದ್ದು, ವಿಷಯ ತಿಳಿದು ಹುಮ್ನಾಬಾದ್ ಬಿಜೆಪಿ ಶಾಸಕ ಡಾ. ಸಿದ್ದು ಪಾಟೀಲ್​ ಅವರು ಆಸ್ಪತ್ರೆಗೆ ಹೋಗಿ ಮಕ್ಕಳ ಆರೋಗ್ಯ ವಿಚಾಸಿದ್ದಾರೆ.

Bidar News: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30 ಮಕ್ಕಳು‌‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಬೀದರ್​ ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 24, 2023 | 8:31 AM

ಬೀದರ್​: ಜಿಲ್ಲೆಯ ಹುಮ್ನಾಬಾದ್(Humnabad) ತಾಲೂಕಿನ ನಿಂಬೂರು ಸರಕಾರಿ ಪ್ರೌಢ ಶಾಲೆ(Government School) ಯಲ್ಲಿ ಬಿಸಿಯೂಟ ಸೇವಿಸಿದ್ದ 30 ಮಕ್ಕಳು‌‌ ಅಸ್ವಸ್ಥರಾಗಿರುವ ಘಟನೆ ನಿನ್ನೆ(ಜೂ.23) ನಡೆದಿದೆ. ಎಂದಿನಂತೆ ಮಕ್ಕಳು ಮಧ್ಯಾಹ್ನ ಬಿಸಿ ಊಟ ಸೇವಿಸಿದ್ದರು. ಬಳಿಕ ಸಂಜೆ 5 ಗಂಟೆಯ ಸುಮಾರಿಗೆ ಮಕ್ಕಳಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಶಿಕ್ಷಕರು, ಪಾಲಕರು ಸೇರಿ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಇನ್ನು ಮಕ್ಕಳು ‌ಅಸ್ವಸ್ಥರಾದ ಸುದ್ದಿ ತಿಳಿದು, ಹುಮ್ನಾಬಾದ್ ಬಿಜೆಪಿ ಶಾಸಕ ಡಾ. ಸಿದ್ದು ಪಾಟೀಲ್​ ಅವರು ಆಸ್ಪತ್ರೆಗೆ ಹೋಗಿ ಮಕ್ಕಳ ಆರೋಗ್ಯ ವಿಚಾಸಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ಮಕ್ಕಳಲ್ಲಿ ಆರೋಗ್ಯ ಸುಧಾರಣೆ ಕಂಡ ಹಿನ್ನೆಲೆ ಡಿಸ್ ಜಾರ್ಜ್ ಮಾಡಿದ್ದಾರೆ.

ಇದೇ ತಿಂಗಳ ಜೂ.20 ರಂದು ಕಲಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡಿದ್ದ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ನಡೆದಿತ್ತು. ಅಸ್ವಸ್ಥರನ್ನು ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಯೋಗಕ್ಷೇಮ ವಿಚಾರಿಸಿದರು. ಇದೇ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಡಿಯುವ ನೀರಿನ ಬಾವಿಗೆ ಚರಂಡಿ ನೀರು ಮಿಶ್ರಣವಾಗಿ ಘಟನೆ ನಡೆದಿದೆ ಎಂದು ಹೇಳಲಾಗಿತ್ತು. ಇನ್ನು ಅಸ್ವಸ್ಥಗೊಂಡ 18 ಜನರ ಪೈಕಿ 6 ಮಕ್ಕಳು ಸೇರಿದ್ದರು.

ಇದನ್ನೂ ಓದಿ:ಬೀದರ್: ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ

ಇನ್ನು ಇದೇ ತರಹದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ನಡೆದಿತ್ತು. ಅಲ್ಲಿಯೂ ಕೂಡ 30ಕ್ಕೂ ಹೆಚ್ಚು ಜನರು ವಾಂತಿ ಬೇಧಿಯಾಗಿ ಅಸ್ವಸ್ಥಗೊಂಡಿದ್ದರು. ಆ ಪೈಕಿ ಒಂದೂವರೆ ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದರು. ತಾವರಗೇರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿತ್ತು. ನಂತರ ಹೊನ್ನಮ್ಮ ಎಂಬ ವೃದ್ದೆ ಸಾವನ್ನಪ್ಪಿದ್ದರು. ಇದಾದ ಬಳಿಕ 5 ವರ್ಷದ ಬುದ್ಧಿಮಾಂದ್ಯ ಮಗುವೊಂದು ವಾಂತಿ, ಭೇದಿಗೆ ಬಲಿಯಾಗಿತ್ತು, ಈ ಕುರಿತು ಡಿಹೆಚ್​ಒ ಅವರು ‘ವಾಂತಿಯು ಶ್ವಾಸಕೋಶದಲ್ಲಿ ಸೇರಿ, ಉಸಿರಾಟದ ತೊಂದರೆ ಉಂಟಾಗಿ ಸಾವನ್ನಪ್ಪಿದೆ ಎಂದು ಸ್ಪಷ್ಟನೆ ನೀಡಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?