AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ನಲ್ಲೊಂದು ಅಮಾನವೀಯ ಘಟನೆ: ಮಲತಾಯಿಯಿಂದ ದಾರುಣ ಅಂತ್ಯ ಕಂಡ ಪುಟ್ಟ ಕಂದಮ್ಮ

ಬೀದರ್ ನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಲತಾಯಿಯೇ ಪಟ್ಟಕಂದಮ್ಮನನ್ನ ಮೂರನೇ ಮಹಡಿ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾಳೆ. ನಂತರ ಮಗು ತಾನೇ ಮೂರನೇ ಮಹಡಿಯಿಂದ ಬಿದ್ದಿದೆ ಎಂದು ನಾಟಕಮಾಡಿ ಅಮಾಯಕಿಯಂತೆ ತಿರುಗಾಡುತ್ತಿದ್ದಳು. ಆದರೆ ಪಕ್ಕದ ಮನೆಯ ಸಿಸಿ ಕ್ಯಾಮೆರಾದಲ್ಲಿ ಮಲತಾಯಿಯ ಕ್ರೂರತೆ ಬಯಲಾಗಿದೆ.

ಬೀದರ್ ನಲ್ಲೊಂದು ಅಮಾನವೀಯ ಘಟನೆ: ಮಲತಾಯಿಯಿಂದ ದಾರುಣ ಅಂತ್ಯ ಕಂಡ ಪುಟ್ಟ ಕಂದಮ್ಮ
Shanvi
ಸುರೇಶ ನಾಯಕ
| Edited By: |

Updated on: Sep 15, 2025 | 10:30 PM

Share

ಬೀದರ್, (ಸೆಪ್ಟೆಂಬರ್ 15): ಮೂರನೇ ಮಹಡಿಯಿಂದ 7 ವರ್ಷದ ಮಗುವನ್ನ ನೂಕಿ ಮಲತಾಯಿ ಜೀವ ತೆಗೆದಿರುವ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ಆಗಸ್ಟ್​ 27ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಾನವಿ ಮೃತ ಬಾಲಕಿ.ಆಗಸ್ಟ್ 27ರಂದು ಶಾನವಿ ಮೃತಪಟ್ಟಾಗ ಮಹಡಿಯಿಂದ ಆಯತಪ್ಪಿ ಬಿದ್ದು ಮಗಳು ಜೀವ ಬಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಅಂದುಕೊಂಡಿದ್ದರು. ಆದ್ರೆ ಪಕ್ಕದ ಮನೆಯವರು ಸಿಸಿಟಿವಿ ದೃಶ್ಯ ಕಳುಹಿಸಿದ ಬಳಿಕ ಮಲತಾಯಿ ಕೃತ್ಯ ಬೆಳಕಿಗೆ ಬಂದಿದ್ದು, ಈ ಘಟನೆ ಸಂಬಂಧ ಮಲತಾಯಿ ರಾಧಾಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮೃತ ಶಾನವಿ ತಾಯಿ ಖಾಯಿಲೆಗೆ ತುತ್ತಾಗಿ ಕಳೆದ 6 ವರ್ಷಗಳ ಹಿಂದೆಯೇ ಸಾವನ್ನಪ್ಪಿದ್ದಳು. ಇದಾದ ಬಳಿಕ ಮೃತ ಶಾನವಿ ತಂದೆ ಸಿದ್ಧಾಂತ, 2023ರಲ್ಲಿ ರಾಧಾ ಜೊತೆ 2ನೇ ವಿವಾಹವಾಗಿದ್ದರು. ಸಿದ್ಧಾಂತ ಹಾಗೂ ರಾಧಾಗೆ ಎರಡು ಅವಳಿ ಮಕ್ಕಳು ಹುಟ್ಟಿದ ಬಳಿಕ ಸಿದ್ಧಾಂತರ ಮೊದಲನೇ ಮಗಳ ತಮ್ಮಗೆ ಹೊರೆಯಾಗ್ತಾಳೆಂದು 2ನೇ ಪತ್ನಿ ಜೀವ ತೆಗೆದಿದ್ದಾಳೆ. ಆಗಸ್ಟ್ 27ರಂದು ಶಾನವಿ ಮೃತಪಟ್ಟಾಗ, ಮಹಡಿಯಿಂದ ಆಯತಪ್ಪಿ ಬಿದ್ದು ಮಗಳು ಜೀವ ಬಿಟ್ಟಿದ್ದಾಳೆ ಎಂದು ಕುಟುಂಬಸ್ಥರು ಅಂದುಕೊಂಡಿದ್ದಾರೆ. ಆದ್ರೆ ಪಕ್ಕದ ಮನೆಯವರು ಸಿಸಿಟಿವಿ ದೃಶ್ಯ ಕಳುಹಿಸಿದ ಬಳಿಕ ಮಲತಾಯಿ ಕೃತ್ಯ ಬೆಳಕಿಗೆ ಬಂದಿದೆ. ರಾಧಾ ಬಾಲಕಿ ಜೊತೆ ಟೇರಸ್ ಮೇಲೆ ಸಂಶಯಾಸ್ಪದ ರೀತಿ ಓಡಾಡುವ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: ದೇವನಹಳ್ಳಿ: ಮಕ್ಕಳನ್ನ ಬಕೆಟ್​ನಲ್ಲಿ ಮುಳುಗಿಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ, ತಾಯಿ ಬಚಾವ್​​

ಈ ಸಿಟಿಟಿವಿ ದೃಶ್ಯವನ್ನ ಸೆಪ್ಟೆಂಬರ್ 12ರಂದು ಬಾಲಕಿ ತಂದೆ ಸಿದ್ಧಾಂತ ವಾಟ್ಸಾಪ್‌ಗೆ ಪಕ್ಕದ ಮನೆ ಮಾಲೀಕ ಕಳುಹಿಸಿದ್ದಾರೆ. ಮೇಲ್ಮಹಡಿಯಲ್ಲಿ ಖುರ್ಚಿ ಇಟ್ಟು ಅದರ ಮೇಲೆ ಬುಟ್ಟಿ ಉಲ್ಟಾ ಇಟ್ಟು ಶಾನವಿಯನ್ನ ಕೂರಿಸಿರೊದು ಪತ್ತೆಯಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಮೃತ ಬಾಲಕಿ ಅಜ್ಜಿ, ರಾಧಾ ವಿರುದ್ಧ ದೂರು ನೀಡಿದ್ದು, ಈ ದೂರು ದಾಖಲಿಸಿಕೊಂಡು ಪೊಲೀಸರು ಆರೋಪಿ ರಾಧಾಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!