AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸ್ಟ್​​ ಆಗಿದ್ದ ಆರೋಪಿ 6 ಗಂಟೆಯಲ್ಲೇ ಪೊಲೀಸ್​ ಠಾಣೆಯಿಂದ ಎಸ್ಕೇಪ್! ನಿರ್ಲಕ್ಷ್ಯ ಆರೋಪ

Accused Escapes from police station: ಓರ್ವ ಆರೋಪಿ ಬಂಧನಕ್ಕೊಳಗಾಗಿ ಕೇವಲ 6 ಗಂಟೆಗಳಲ್ಲಿ ಮತ್ತೆ ಪೊಲೀಸ್​ ಠಾಣೆಯಿಂದ ಎಸ್ಕೇಪ್ ಆಗಿರುವ ಆಘಾತಕಾರಿ ಘಟನೆಯೊಂದು ಬೀದರ್​ ಜಿಲ್ಲೆಯ ಖಟಕಚಿಂಚೊಳಿ ಪೊಲೀಸ್​ ಠಾಣೆಯಲ್ಲಿ ನಡೆದಿದೆ. ಸದ್ಯ ಪೊಲೀಸರ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಅರೆಸ್ಟ್​​ ಆಗಿದ್ದ ಆರೋಪಿ 6 ಗಂಟೆಯಲ್ಲೇ ಪೊಲೀಸ್​ ಠಾಣೆಯಿಂದ ಎಸ್ಕೇಪ್! ನಿರ್ಲಕ್ಷ್ಯ ಆರೋಪ
ಪ್ರಾತಿನಿಧಿಕ ಚಿತ್ರImage Credit source: Getty images
ಸುರೇಶ್ ನಾಯಕ್
| Edited By: |

Updated on:Jul 12, 2026 | 10:48 PM

Share

ಬೀದರ್, ಜುಲೈ 12: ಅರೆಸ್ಟ್ ಆಗಿ ಕೇವಲ 6 ಗಂಟೆಯಲ್ಲೇ ಪೊಲೀಸ್​ ಠಾಣೆಯಿಂದ ಆರೋಪಿ ಪರಾರಿ (Accused Escape) ಆಗಿರುವಂತಹ ಘಟನೆ ಬೀದರ್ (bidar) ಜಿಲ್ಲೆಯ ಖಟಕಚಿಂಚೊಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕೈಲಾಶ್ ಪರಾರಿ ಆಗಿರುವ ಆರೋಪಿ. ಪೊಲೀಸರ ಈ ನಿರ್ಲಕ್ಷ್ಯ ಹಾಗೂ ವೈಫಲ್ಯದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ನಡೆದಿದ್ದೇನು?

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಗೊರಟಾ ಗ್ರಾಮದಲ್ಲಿ ಇತ್ತೀಚೆಗೆ ಅನಿತಾ (32) ಎಂಬ ಮಹಿಳೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕೈಲಾಶ್​​​ ಹತ್ಯೆ ಮಾಡಿದ್ದ. ಈ ಘಟನೆಯ ನಂತರ ಕೈಲಾಶ್ ತಲೆಮರೆಸಿಕೊಂಡಿದ್ದ. ತನಿಖೆ ಕೈಗೆತ್ತಿಕೊಂಡಿದ್ದ ಖಟಕಚಿಂಚೊಳಿ ಠಾಣೆಯ ಪೊಲೀಸರು ಕೊನೆಗೂ ಕಾರ್ಯಾಚರಣೆ ನಡೆಸಿ ಕೈಲಾಶ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ತದನಂತರ ಆತನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು.

ಇದನ್ನೂ ಓದಿ: ಅಥಣಿಯಲ್ಲಿ ಭೀಕರ ದುರಂತ: ದುರಸ್ತಿ ವೇಳೆ ಕುಸಿದುಬಿದ್ದ ಮನೆ; ಇಬ್ಬರು ಕಾರ್ಮಿಕರು ಸಾವು

ಆರೋಪಿಯನ್ನು ಠಾಣೆಗೆ ಕರೆತಂದು ಇನ್ನು ಕೇವಲ 6 ಗಂಟೆ ಕಳೆಯುವಷ್ಟರಲ್ಲಿ ಆತ ರಾತ್ರಿ ವೇಳೆ ಪೊಲೀಸರ ಕಣ್ಣು ತಪ್ಪಿಸಿ ಠಾಣೆಯಿಂದ ಪರಾರಿ ಆಗಿದ್ದಾನೆ. ಇಷ್ಟು ಕೊಲೆ ಪ್ರಕರಣದ ಆರೋಪಿ ಪೊಲೀಸ್ ಕಾವಲಿನಲ್ಲಿದ್ದರೂ ಠಾಣೆಯಿಂದಲೇ ಓಡಿಹೋಗಿರುವುದು ಪೊಲೀಸರ ಕರ್ತವ್ಯದ ಬಗ್ಗೆ ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದೆ.

ಸತ್ಯ ಮುಚ್ಚಿಡಲು ಯತ್ನಿಸಿದ ಪೊಲೀಸರು?

ಇನ್ನು ಆರೋಪಿ ಕೈಲಾಶ್ ಪೊಲೀಸ್ ಠಾಣೆಯಿಂದ ಪರಾರಿಯಾಗಿರುವ ವಿಷಯದ ಬಗ್ಗೆ ಖಟಕಚಿಂಚೊಳಿ ಪೊಲೀಸರು ಯಾರ ಮುಂದೆಯೂ ಬಾಯಿ ಬಿಡದೆ ಸತ್ಯವನ್ನು ಮುಚ್ಚಿಡಲು ಪ್ರಯತ್ನಿಸಿದ್ದಾರೆ. ಆದರೆ, ಈ ವಿಷಯವನ್ನು ತಿಳಿದ ಮೃತ ಅನಿತಾ ಕುಟುಂಬಸ್ಥರು ತಕ್ಷಣವೇ ಮಾಧ್ಯಮಗಳಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಆರೋಪಿ ರಕ್ಷಣೆಗೆ ನಿಂತ್ರಾ ಪೊಲೀಸರು?

ಕೈಲಾಶ್​​ ಠಾಣೆಯಿಂದ ಓಡಿಹೋಗಲು ಪೊಲೀಸರ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಿರುವ ಮೃತರ ಕುಟುಂಬಸ್ಥರು, “ಬಂಧನಕ್ಕೊಳಗಾದ ಆರೋಪಿಗೆ ಪೊಲೀಸರೇ ರಕ್ಷಣೆ ನೀಡುತ್ತಿದ್ದಾರಾ?” ಎಂದು ಪ್ರಶ್ನಿಸಿದ್ದಾರೆ.

ಆರೋಪಿ ಕೊನೆಗೂ ಅರೆಸ್ಟ್​

ನಿನ್ನೆ ರಾತ್ರಿ ಖಟಕಚಿಂಚೋಳಿ ಠಾಣೆಯಿಂದ ತಪ್ಪಿಸಿಕೊಂಡಿದ್ದ ಕೈಲಾಶ್, ನಿರಂತರ ಶೋಧ ಬೆನ್ನಲ್ಲೇ ಬೀದರ್ ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರು ಬಳಿ ಕೈಲಾಶ್​​ನನ್ನು ಬಂಧಿಸಿರುವ ಪೊಲೀಸರು ಮತ್ತೆ ಖಟಕಚಿಂಚೋಳಿ ಠಾಣೆಗೆ ಕರೆದೊಯ್ದಿದ್ದಾರೆ.

ಲಾರಿ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ಜೈಲು ಸಿಬ್ಬಂದಿ ಸಾವು

ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಜೈಲು ಸಿಬ್ಬಂದಿ ಸಾವನ್ನಪ್ಪಿರುವಂತಹ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಧಾರವಾಡ ಜೈಲಿನ ವಾರ್ಡರ್ ಸಂಗಪ್ಪ ಮಜ್ಜಗಿ(41) ಮೃತ ವ್ಯಕ್ತಿ.

ಇದನ್ನೂ ಓದಿ: ಬೈಕ್​​ಗೆ ಸಾರಿಗೆ ಬಸ್​​ ಡಿಕ್ಕಿ: ಹುಮನಾಬಾದ್​​ನಲ್ಲಿ ದುರಂತ ಅಂತ್ಯ ಕಂಡ ಮಗ, ಚಿಕ್ಕಮ್ಮ

ಧಾರವಾಡದಿಂದ ಬಾಗಲಕೋಟೆ ಜಿಲ್ಲೆಯ ನೀರಲಗಿ ಗ್ರಾಮಕ್ಕೆ ತೆರಳುತ್ತಿದ್ದರು. ಭೈರನಹಟ್ಟಿ ಬಳಿ ಲಾರಿ, ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿತ್ತು. ಕಾರಿನಲ್ಲಿ ಸಿಲುಕಿ ನಜ್ಜುಗುಜ್ಜಾಗಿ ಸಂಗಪ್ಪ ಮಜ್ಜಗಿ ಮೃತಪಟ್ಟಿದ್ದಾರೆ. ಸದ್ಯ ಹರಸಾಹಸಪಟ್ಟು ಪೊಲೀಸರು ಶವವನ್ನು ಹೊರತೆಗೆದಿದ್ದು, ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:22 pm, Sun, 12 July 26

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ