ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್​ನ ಐವರು ರಸ್ತೆ ಅಪಘಾತದಲ್ಲಿ ಸಾವು

ಬೀದರ್ ಮೂಲದ ಒಂದು ಕುಟುಂಬದ 12 ಜನರು ಪ್ರಯಾಗರಾಜ್ ನಲ್ಲಿ ನಡೆಯುತ್ತಿದ್ದ ಕುಂಭಮೇಳಕ್ಕೆ ತೆರಳುತ್ತಿದ್ದರು. ಉತ್ತರಪ್ರದೇಶದಲ್ಲಿ ರಸ್ತೆ ಅಪಘಾತ ಸಂಭವಿಸಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಆರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು.

ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್​ನ ಐವರು ರಸ್ತೆ ಅಪಘಾತದಲ್ಲಿ ಸಾವು
ಜಖಂಗೊಂಡಿರುವ ಕ್ರೂಸರ್
Edited By:

Updated on: Feb 21, 2025 | 12:45 PM

ಬೀದರ್, ಫೆಬ್ರವರಿ 21: ಮಹಾ ಕುಂಭಮೇಳಕ್ಕೆ (Maha Kumbh Mela) ತೆರಳಿದ್ದ ಬೀದರ್​ ಮೂಲದ ಐವರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುನೀತಾ (40 ವರ್ಷ), ನೀಲಮ್ಮ( 62 ವರ್ಷ) ಲಕ್ಷ್ಮಿ (57 ವರ್ಷ) ಕಲಾವತಿ (60 ವರ್ಷ) ಸಂತೋಷ (45 ವರ್ಷ) ಮೃತ ದುರ್ದೈವಿಗಳು. ಉತ್ತರಪ್ರದೇಶದ ವಾರಣಾಸಿ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ.

ಬೀದರ್​ನ ಲಾಡಗೆರಿ ನಗರ ನಿವಾಸಿಗಳಾದ 14 ಜನ ಫೆಬ್ರವರಿ 18 ರಂದು ಮಧ್ಯಾಹ್ನ ಬೀದರ ನಗರದಿಂದ ಕ್ರೂಸರ್​​ಮಹಾಕುಂಭ ಪ್ರಯಾಗರಾಜಗೆ ಹೋಗಿದ್ದಾರೆ. ಶುಕ್ರವಾರ (ಫೆ.21) ಬೆಳಗಿನ ಜಾವ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು, ಕಳೆದ ತಿಂಗಳು ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ತೆರಳಿ ಯಾತ್ರೆ ಮುಗಿಸಿ ವಾಪಸ್​ ಬರುತ್ತಿದ್ದಾಗ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಕರ್ನಾಟಕದ ಇಬ್ಬರು ಯುವಕರು ಮೃತಪಟ್ಟಿದ್ದರು. ಉತ್ತರಪ್ರದೇಶದ ಮಿರ್ಜಾಪುರ ಬಳಿ ಅಪಘಾತ ಸಂಭವಿಸಿತ್ತು. ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನ ಕೆಆರ್​​ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತ ದುರ್ದೈವಿಗಳು.

ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬೆಂಗಳೂರಿನ ಮಹಿಳೆ ಅಪಘಾತದಲ್ಲಿ ಸಾವು

ಯುವಕರು ಎರಡು ಕಾರುಗಳಲ್ಲಿ ಪ್ರಯಾಗ್​ರಾಜ್​ ಯಾತ್ರೆಗೆ ಹೋಗಿದ್ದರು. ಪ್ರಯಾಗ್​ರಾಜ್​​ ಯಾತ್ರೆ ಮುಗಿಸಿ ಕಾಶಿಗೆ ಬರುತ್ತಿದ್ದಾಗ ಮಿರ್ಜಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ರಾಮಕೃಷ್ಣ ಶರ್ಮಾ ಮತ್ತು ಅರುಣ್ ಶಾಸ್ತ್ರಿ ಮೃತಪಟ್ಟಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Fri, 21 February 25