ಬೀದರ್: ಕಾಡುಹಂದಿ ದಾಳಿಗೆ ಮಹಿಳೆ ಸಾವು; ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಈಶ್ವರ್​ ಖಂಡ್ರೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 08, 2024 | 3:56 PM

ಬೀದರ್(Bidar) ತಾಲೂಕಿನ ಹೊಕ್ರಾಣ(ಕೆ) ಗ್ರಾಮದ ಮಹಿಳೆ ಕವಿತಾ (45) ಎಂಬುವವರ ಮೇಲೆ ಕಾಡುಹಂದಿ ದಾಳಿ ಮಾಡಿತ್ತು. ಗಂಭೀರ ಗಾಯಗೊಂಡಿದ್ದ ಮಹಿಳೆ ಇದೀಗ ಕೊನೆಯುಸಿರೆಳೆದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತ ಕುಟುಂಬದ ಮನೆಗೆ ಅರಣ್ಯಾಧಿಕಾರಿಗಳ ಜೊತೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿದ್ದಾರೆ. ತಕ್ಷಣವೇ ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ್ದಾರೆ.

ಬೀದರ್: ಕಾಡುಹಂದಿ ದಾಳಿಗೆ ಮಹಿಳೆ ಸಾವು; ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ಈಶ್ವರ್​ ಖಂಡ್ರೆ
ಕಾಡು ಹಂದಿ ದಾಳಿಯಿಂದ ಸಾವನ್ನಪ್ಪಿದ ಕುಟುಂಬಕ್ಕೆ ಪರಿಹಾರ ವಿತರಿಸಿದ ಖಂಡ್ರೆ
Follow us on

ಬೀದರ್, ಮಾ.08: ಕಾಡುಹಂದಿ ದಾಳಿಗೆ ಗಂಭೀರ ಗಾಯಗೊಂಡಿದ್ದ ಮಹಿಳೆ ಇದೀಗ ಕೊನೆಯುಸಿರೆಳೆದಿದ್ದಾರೆ. ಬೀದರ್ (Bidar) ತಾಲೂಕಿನ ಹೊಕ್ರಾಣ(ಕೆ) ಗ್ರಾಮದ ಮಹಿಳೆ ಕವಿತಾ (45) ಮೃತ ರ್ದುದೈವಿ. ರೈತನ ಹೊಲಕ್ಕೆ ಕೂಲಿ ಕೆಲಸಕ್ಕೆ ಹೋದಾಗ ಕಾಡುಹಂದಿ ದಾಳಿ ಮಾಡಿತ್ತು. ಹೊಟ್ಟೆಗೆ ಕಚ್ಚಿದ್ದರಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ಕುರಿತು ಮನ್ನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತ ಕುಟುಂಬದ ಮನೆಗೆ ಅರಣ್ಯಾಧಿಕಾರಿಗಳ ಜೊತೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿದ್ದಾರೆ. ತಕ್ಷಣವೇ ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಇನ್ಮುಂದೆ ಇಂತಹ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:ಕೊರಟಗೆರೆಯಲ್ಲಿ ಹುಚ್ಚು ನಾಯಿ ದಾಳಿ; ವೃದ್ದೆ ಸೇರಿದಂತೆ 10ಕ್ಕೂ ಹೆಚ್ಚು ಜನರಿಗೆ ಗಾಯ

ಬೈಕ್​ಗೆ ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಹುಬ್ಬಳ್ಳಿ: ತಾಲೂಕಿನ ಕುಸಗಲ್​ನಲ್ಲಿ ಬೈಕ್​ಗೆ ಟಿಪ್ಪರ್​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಇಂಗಳಹಳ್ಳಿಯ ರಾಜೇಸಾಬ ಕೊಲ್ಯಾಡಿ(24) ಮೃತ ದುರ್ದೈವಿ. ಬೈಕ್ ಟ್ಯಾಂಕ್ ಮೇಲೆ ಕುಳಿತಿದ್ದ 12 ವರ್ಷದ ಬಾಲಕ ಅದೃಷ್ಷವಶಾತ್ ಪಾರಾಗಿದ್ದು, ಕುಡಿದ ಮತ್ತಿನಲ್ಲಿ ಚಾಲಕ ಟಿಪ್ಪರ್​ನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದಾನೆಂಬ ಮಾಹಿತಿ ಇದ್ದು, ಟಿಪ್ಪರ್ ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಯಾಳು ಮಹಿಳೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ