Bidar Accident: ಬೀದರ್​​​ನಲ್ಲಿ ಭೀಕರ ರಸ್ತೆ ಅಪಘಾತ; ಹೈದರಾಬಾದ್ ಮೂಲದ ಐವರು ಸಾವು, ನಾಲ್ವರಿಗೆ ಗಾಯ

| Updated By: ಸುಷ್ಮಾ ಚಕ್ರೆ

Updated on: Aug 16, 2022 | 11:50 AM

ಬೀದರ್ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈದರಾಬಾದ್​ನಿಂದ ಕಲ್ಬುರ್ಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

Bidar Accident: ಬೀದರ್​​​ನಲ್ಲಿ ಭೀಕರ ರಸ್ತೆ ಅಪಘಾತ; ಹೈದರಾಬಾದ್ ಮೂಲದ ಐವರು ಸಾವು, ನಾಲ್ವರಿಗೆ ಗಾಯ
ಬೀದರ್​​ನಲ್ಲಿ ನಡೆದ ಅಪಘಾತ
Follow us on

ಬೀದರ್: ಎರಿಟಿಗಾ ಕಾರು ಹಾಗೂ ಕಂಟೇನರ್ ನಡುವೆ ಡಿಕ್ಕಿಯಾಗಿ ಬೀದರ್​​ನಲ್ಲಿ (Bidar) ಐವರು ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಹೈದರಾಬಾದ್-ಮುಂಬೈ ರಾಷ್ಟ್ರೀಯ ಹೆದ್ದಾರಿಯ ಬಂಗೂರ್ ಚೆಕ್ ಪೋಸ್ಟ್ ಬಳಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ (Accident) ಐವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬೀದರ್ ತಾಲೂಕಿನ ಮನ್ನಾಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರನ್ನು ಹೈದರಾಬಾದ್​ನ ಬೇಗಂ ಪೇಟ್ ನಿವಾಸಿಗಳು ಎಂದು ಗುರುತಿಸಲಾಗಿದೆ.

ಬೀದರ್ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ. ಹೈದರಾಬಾದ್​ನಿಂದ ಕಲ್ಬುರ್ಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತರನ್ನು ಹೈದರಾಬಾದ್‌ನಲ್ಲಿ ಹೆಡ್ ಕಾನ್‌ಸ್ಟೆಬಲ್ ಜಿ. ಗಿರಿಧರ್ (45), ಅವರ ಪತ್ನಿ ಅನಿತಾ (36), ಅವರ ಮಗ ಮಯಾಂಕ್ (2), ಅವರ ಸೊಸೆಯ ಮಗಳು ಪ್ರಿಯಾಂಕಾ (15) ಮತ್ತು ಕಾರು ಚಾಲಕ ಜಗದೀಶ್ (35) ಎಂದು ಗುರುತಿಸಲಾಗಿದೆ. ಬೀದರ್ ತಾಲೂಕಿನ ಮನ್ನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ

ಮೃತಪಟ್ಟವರೆಲ್ಲರೂ ಹೈದರಾಬಾದ್ ನಗರದ ಬೇಗಂಪೇಟೆಯ ನಿವಾಸಿಗಳು. ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮಯಾಂಕ್ ಮನ್ನೇಕಹಳ್ಳಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಿರಿಧರ್ ಅವರ ಪುತ್ರ ಹರ್ಷವರ್ಧನ್ (12) ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಬೀದರ್ ಪೊಲೀಸರು ನೀಡಿದ ಮಾಹಿತಿಯಂತೆ ಸಂತ್ರಸ್ತರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳಿ ಹೈದರಾಬಾದ್‌ಗೆ ಹಿಂತಿರುಗುತ್ತಿದ್ದರು. ಸಂತ್ರಸ್ತರು ಪ್ರಯಾಣಿಸುತ್ತಿದ್ದ ಕಾರು ಕಂಟೈನರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಗಿರಿಧರ್ ಅವರ ಸ್ನೇಹಿತ ಚಲಾಯಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Tragedy: ಸ್ವಾತಂತ್ರೋತ್ಸವದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ಬರುವಾಗ ಅಪಘಾತ: ಕಾಲೇಜು ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಗಿರಿಧರ್ ಅವರ ಸಂಬಂಧಿಕರಾದ ರಜಿತಾ, ಸರಿತಾ, ಶಾಲಿನಿ ಮತ್ತು ಸರಳಾ ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಹೈದರಾಬಾದ್‌ಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್, ಉಪ ಪೊಲೀಸ್ ವರಿಷ್ಠಾಧಿಕಾರಿ ಸತೀಶ್, ವೃತ್ತ ನಿರೀಕ್ಷಕ ಶ್ರೀಕಾಂತ ಅಲ್ಲಾಪುರ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕಲ್ಲಪ್ಪ ಮುಗಟೆ ಭೇಟಿ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ