
ಬೀದರ್, ನವೆಂಬರ್ 5: ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ದುರ್ಮರಣ ಹೊಂದಿದ್ದಾರೆ. ಕಾರು ಮತ್ತು ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಚಾಲಕ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ತೆಲಂಗಾಣ ಮೂಲದವರು ಎಂಬುದು ತಿಳಿದುಬಂದಿದೆ. ಅವರೆಲ್ಲ ತೆಲಂಗಾಣದಿಂದ ಕಲಬುರಗಿಯ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ ತೆರಳುತ್ತಿದ್ದರು. ಮೃತಪಟ್ಟವರು ರಾಜಪ್ಪ, ನವೀನ್, ನಾಗರಾಜ್ ಎಂದು ತಿಳಿದು ಬಂದಿದೆ. ನಾಗರಾಜ್ ಎಂಬವರು ನಾರಾಯಣ ಖೇಡ್ನಲ್ಲಿ ಪಿಯುಸಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.
ಮೈಸೂರು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಬಿ.ಪಿ.ಪರಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹುಣಸೂರು – ಮೈಸೂರು ಹೆದ್ದಾರಿಯ ಜಡಗನಕೊಪ್ಪಲು ಗೇಟ್ ಬಳಿ ಅಪಘಾತ ಸಂಭವಿಸಿದೆ. ಮೃತ ಪರಮೇಶ್ ವಕೀಲರಾಗಿದ್ದು, ಹುಣಸೂರು ತಾಲೂಕಿನ ಗ್ರಾಮದ ನಿವಾಸಿಯಾಗಿದ್ದರು. ಜಡಗನಕೊಪ್ಪಲಿನಿಂದ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವ್ಯಕ್ತಿಯೋರ್ವ ಬೈಕಿನಲ್ಲಿ ಹಳಿ ದಾಟುವಾಗ ವೇಗವಾಗಿ ಬಂದ ರೈಲು: ಮುಂದೇನಾಯ್ತು?
Published On - 9:08 am, Wed, 5 November 25