ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಬೀದರ್ ಬಂದ್: ಶಾಲೆಗಳಿಗೆ ರಜೆ ಘೋಷಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 08, 2025 | 8:12 PM

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರುದ್ಧದ ಹೇಳಿಕೆಗೆ ಬೀದರ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ವಿವಿಧ ದಲಿತ ಸಂಘಟನೆಗಳು ನಾಳೆ ಬೀದರ್ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬೀದರ್ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಡಿಡಿಪಿಐ ಎಸ್.ಎಲ್. ಪ್ರಸನ್ನ ಕುಮಾರ್ ಅವರು ರಜೆ ಆದೇಶ ಹೊರಡಿಸಿದ್ದಾರೆ.

ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಬೀದರ್ ಬಂದ್: ಶಾಲೆಗಳಿಗೆ ರಜೆ ಘೋಷಣೆ
ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಬೀದರ್ ಬಂದ್: ಶಾಲೆಗಳಿಗೆ ರಜೆ ಘೋಷಣೆ
Follow us on

ಬೀದರ್​, ಜನವರಿ 08: ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಕ್ಷೇಪಾರ್ಹ ಮಾತುಗಳನ್ನ ಆಡಿದ್ದಾರೆ ಅನ್ನೋ ವಿಚಾರ ಇನ್ನೂ ತಣ್ಣಗಾಗುವ ಲಕ್ಷಣಗಳೇ ಕಾಣುತ್ತಿಲ್ಲ. ರಾಷ್ಟ್ರಮಟ್ಟದಲ್ಲೂ ಈ ಬಗ್ಗೆ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗಿವೆ. ಇತ್ತ ಕರ್ನಾಟಕದಲ್ಲೂ ಆಕ್ರೋಶ ಭುಗಿಲೆದ್ದಿದೆ. ಈ ಹಿನ್ನೆಲೆ ನಾಳೆ ವಿವಿಧ ದಲಿತ ಪರ ಸಂಘಟನೆ‌ಯಿಂದ ಬೀದರ್ ಬಂದ್​ಗೆ ಕರೆ ನೀಡಿದ್ದು, ತಾಲೂಕಿನ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ದಲಿತಪರ ಸಂಘಟನೆಗಳಿಂದ ಬೀದರ್ ನಗರ ಬಂದ್‌ಗೆ ಕರೆ ನೀಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೀದರ್ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಉಪನಿರ್ದೇಶಕರು ಶಿಕ್ಷಣ ಇಲಾಖೆ ಡಿಡಿಪಿಐ ಎಸ್‌.ಎಲ್.ಪ್ರಸನ್ನ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಹಾಸನದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಹಾಸನದಲ್ಲಿ ಕೂಡ ವಿವಿಧ ಸಂಘಟನೆಗಳಿಂದ ಇಂದು ಪ್ರತಿಭಟನೆ ಮಾಡಲಾಗಿದೆ. ದಲಿತ ಹಾಗೂ ಪ್ರಗತಿ ಪರ ಸಂಘಟನೆಗಳ ನೇತೃತ್ವದಲ್ಲಿ ಹಾಸನದ ಕಸ್ತೂರವಳ್ಳಿ ಗೇಟ್ ಬಳಿ ಧರಣಿ ನೂರಾರು ಜನರು ಹೆದ್ದಾರಿ ತಡೆ ಪ್ರತಿಭಟನೆ ಮಾಡಿದ್ದಾರೆ.

ಇದನ್ನೂ ಓದಿ: ರಾಜಕೀಯ ತಿರುವು ಪಡೆದುಕೊಂಡ ನಾಳಿನ ಹುಬ್ಬಳ್ಳಿ-ಧಾರವಾಡ ಬಂದ್: ಪೊಲೀಸ್ ಅಲರ್ಟ್

ಕೇಂದ್ರ ಸಂಪುಟದಿಂದ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 75 ರದಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಇದನ್ನೂ ಓದಿ: ಮಂಡ್ಯ ಬಂದ್: ಮುಚ್ಚಿದ ಅಂಗಡಿಗಳನ್ನು ಓಪನ್ ಮಾಡಿಸಿ ಮಾಲೀಕರಿಗೆ ಹೂನೀಡಿ ಧೈರ್ಯ ಹೇಳಿದ ಬಿಜೆಪಿ ಕಾರ್ಯಕರ್ತರು

ಈ ವಿಚಾರವಾಗಿ ನಿನ್ನೆ ಮೈಸೂರು ಬಂದ್​ಗೆ ಕರೆ ನೀಡಲಾಗಿತ್ತು. ಮೈಸೂರಿನ ಪಂಚವಟಿ ವೃತ್ತದಲ್ಲಿರುವ ಆರ್​ಎಸ್​​ಎಸ್‌ ಕಚೇರಿಗೆ, ಕೆಪಿಸಿಸಿ ವಕ್ತಾರ ಲಕ್ಷ್ಮಣ್ ನೇತೃತ್ವದಲ್ಲಿ ಮುತ್ತಿಗೆ ಹಾಕಲು ಪ್ರತಿಭಟನಾಕರರು ಯತ್ನಿಸಿದ್ದರು. ಈ ವೇಳೆ ಲಕ್ಷ್ಮಣ್ ಮತ್ತು ಪೋಲೀಸರ ನಡುವೆ ಮಾತಿನ ಯುದ್ಧವೇ ನಡೆಯಿತು. ಬಳಿಕ ಬ್ಯಾರಿಕೆಡ್ ತಳ್ಳಿ ಪ್ರವೇಶಿಸಲು ಯತ್ನಿಸಿದ್ದರು. ಆದರೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.