AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಚ್ಚುವ ಹಂತಕ್ಕೆ ಬಂದ ಬೀದರ್ ‌ನಾಗರಿಕ ವಿಮಾನಯಾನ, ಸ್ಟಾರ್ ಏರ್ ಜೆಟ್ ವಿಮಾನ ಹಾರಾಟ ಸ್ಥಗಿತ

ಗಡಿ ಜಿಲ್ಲೆ ಬೀದರ್​ನಲ್ಲಿ ವಿಮಾನ ನಿಲ್ದಾಣವಾಗಬೇಕು ಎಂದು ಅಲ್ಲಿನ ಜನರು ಹತ್ತಾರು ಹೋರಾಟಗಳನ್ನು ಮಾಡಿದ್ದರು. ಜನರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ 2020ರ ಫೆಬ್ರವರಿ 7 ರಂದು ಬೀದರ್​ನಿಂದ ಬೆಂಗಳೂರಿಗೆ 72 ಸೀಟ್​ನ ಟ್ರೋಜೆಟ್ ವಿಮಾನದ ಹಾರಾಟ ಆರಂಭಿಸಿತು. ಆದರೆ ಪ್ರಯಾಣಿಕರ ಕೊರತೆ, ಆರ್ಥಿಕ ನಷ್ಟದಿಂದಾಗಿ ಟ್ರೂಜೇಟ್, ಸ್ಟಾರ್ ಏರ್ ಜೆಟ್ ವಿಮಾನ ತನ್ನ ಹಾರಾಟವನ್ನು ನಿಲ್ಲಿಸಿವೆ.

ಮುಚ್ಚುವ ಹಂತಕ್ಕೆ ಬಂದ ಬೀದರ್ ‌ನಾಗರಿಕ ವಿಮಾನಯಾನ, ಸ್ಟಾರ್ ಏರ್ ಜೆಟ್ ವಿಮಾನ ಹಾರಾಟ ಸ್ಥಗಿತ
ಬೀದರ್​ ವಿಮಾನ ನಿಲ್ದಾಣ
ಸುರೇಶ ನಾಯಕ
| Updated By: ವಿವೇಕ ಬಿರಾದಾರ|

Updated on: Feb 14, 2024 | 1:10 PM

Share

ಬೀದರ್, ಫೆಬ್ರವರಿ 14: ಬೀದರ್ (Bidar)​ ಜಿಲ್ಲೆಯಿಂದ ರಾಜ್ಯದ ರಾಜ್ಯಧಾನಿ ಬೆಂಗಳೂರಿಗೆ (Bengaluru) ವಿಮಾನ ಹಾರಾಡಬೆಕೆಂಬ ಕನಸನ್ನು ಇಲ್ಲಿನ ಜನ ಕಂಡಿದ್ದರು. ಈ ಜಿಲ್ಲೆಯ ನಾಗರಿಕರ ಕನಸಿನಂತೆ ಗಡಿ ಜಿಲ್ಲೆ ಬೀದರ್​​ನಿಂದ ಬೆಂಗಳೂರಿಗೆ ವಿಮಾನ ಹಾರಾಟ ಕುಡ ಆರಂಭವಾಯಿತು. ಆದರೆ ಕಳೆದೆರಡು ತಿಂಗಳಿಂದ ವಿಮಾನ ಹಾರಾಟ ನಿಲ್ಲಿಸಿದ್ದು, ಬೀದರ್ ವಿಮಾನ ನಿಲ್ದಾಣ (Bidar Airport) ಮುಚ್ಚುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಗಡಿ ಜಿಲ್ಲೆ ಬೀದರ್​ನಲ್ಲಿ ವಿಮಾನ ನಿಲ್ದಾಣವಾಗಬೇಕು. ರಾಜ್ಯ ರಾಜ್ಯಧಾನಿ ಬೆಂಗಳೂರು, ದೇಶದ ರಾಜಧಾನಿ ದೆಹಲಿ, ಹೈದರಾಬಾದ್, ಪುಣೆಗೆ ಇಲ್ಲಿಂದ ವಿಮಾನ ಹಾರಾಟ ಮಾಡಬೇಕು ಅಂತ ಜಿಲ್ಲೆಯ ಜನರು ಕನಸು ಕಂಡಿದ್ದರು. ಇದಕ್ಕಾಗಿ ಹತ್ತಾರು ಹೋರಾಟಗಳನ್ನ ಸಹ ಜನರು ಮಾಡಿದ್ದರು. ಜನರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ 2020ರ ಫೆಬ್ರವರಿ 7 ರಂದು ಬೀದರ್​ನಿಂದ ಬೆಂಗಳೂರಿಗೆ 72 ಸೀಟ್​ನ ಟ್ರೋಜೆಟ್ ವಿಮಾನದ ಹಾರಾಟ ಆರಂಭಿಸಿತು. ಆದರೆ ಪ್ರಯಾಣಿಕರ ಕೊರತೆ, ಆರ್ಥಿಕ ನಷ್ಟದಿಂದಾಗಿ ಟ್ರೂಜೇಟ್ ವಿಮಾನ ಕೆಲವು ತಿಂಗಳಲ್ಲಿಯೇ ತನ್ನ ಹಾರಾಟವನ್ನು ನಿಲ್ಲಿಸಿತು.

ಇದಾದ ಬಳಿಕ ಒಂದು ವರ್ಷಗಳ ಕಾಲ ವಿಮಾನ ಹಾರಾಡಲೇ ಇಲ್ಲ. ಪ್ರಯಾಣೀಕರು ಹೈದ್ರಾಬಾದ್​ಗೆ ಹೋಗಿ ಅಲ್ಲಿಂದ ವಿಮಾಣದ ಮೂಲಕ ಬೆಂಗಳೂರು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಗೆ ಪ್ರಯಾಣ ಮಾಡಲು ಆರಂಭಿಸಿದರು. ಇದು ಪ್ರಯಾಣಿಕರಿಗೆ ಕಷ್ಟವಾಗತೊಡಗಿದಾಗ ಪ್ರಯಾಣಿಕರ ಒತ್ತಾಯದ ಮೇರೆಗೆ 2022 ಜೂನ್ 15 ರಂದು ಸ್ಟಾರ್ ಏರ್ ವಿಮಾನ ತನ್ನ ಹಾರಾಟವನ್ನು ಆರಂಭಿಸಿತು. ಆದರೆ ಎರಡು ವರ್ಷದಲ್ಲಿಯೇ ಇದು ಕೂಡ ಆರ್ಥಿಕನಷ್ಟದಿಂದಾಗಿ ತನ್ನ ಸೇವೆಯನ್ನ ನಿಲ್ಲಿಸಿದೆ. ಹೀಗಾಗಿ ಇಲ್ಲಿ ಸುಸ್ಸಜ್ಜಿತ ಏರ್ ಪೋರ್ಟ್ ಇದ್ದರು ಕೂಡಾ ಜಿಲ್ಲೆಯ ಜನರಿಗೆ ವಿಮಾನ ಸೌಲಭ್ಯ ಸಿಗದಂತಾಗಿದೆ ಇದು ಸಹಜವಾಗಿಯೇ ಜಿಲ್ಲೆಯ ಜನರ ನಿರಾಸೆಗೆ ಕಾರಣವಾಗಿದೆ.

ಕೊರೊನಾ ಸಮಯದಲ್ಲಿ ಬೀದರ್ ವಿಮಾನ ನಿಲ್ದಾಣ ಆರಂಭವಾಗಿದ್ದರು ಕೂಡಾ ಅವತ್ತಿನಿಂದ ಇವತ್ತಿನ ವರೆಗೆ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿಯೇ ಓಡಾಡಿದ್ದಾರೆ. ಆದರೂ ಕೂಡಾ ಟ್ರೂಜೆಟ್ ಹಾಗೂ ಸ್ಟಾರ್ ಏರ್ ನವರು ನಷ್ಟವಾಗುತ್ತಿದೆಂದು ಹೇಳಿ ತಮ್ಮ ಸೇವೆಯನ್ನು ನಿಲ್ಲಿಸಿದ್ದು ಇದು ಪ್ರಯಾಣಿಕರಿಗೆ ಸಾಕಷ್ಟು ಸಮಸ್ಯೆಯನ್ನುಂಟು ಮಾಡಿದೆ. ಬಿದರ್​ನಲ್ಲಿ ವಿಮಾನ ಹಾರಾಟ ಸ್ಥಗಿತವಾಗಿದ್ದರಿಂದ ಜಿಲ್ಲೆಯ ಜನರು ಅನಿವಾರ್ಯವಾಗಿ ಕಲಬುರ್ಗಿ ಅಥವಾ ಹೈದ್ರಾಬಾದ್​ಗೆ ಹೋಗಿ ವಿಮಾನದ ಮೂಲಕ ಬೆಂಗಳೂರಿಗೆ ಹೋಗವಂತ ಸ್ಥಿತಿ ಉದ್ಭವಿಸಿದೆ. ಪಕ್ಕದ ಕಲಬುರ್ಗಿಯಿಂದ ದಿನಕ್ಕೆ ಐದಾರು ವಿಮಾನಗಳು ಹಾರಾಟ ಮಾಡುತ್ತಿವೆ. ಜೊತೆಗೆ ಅನ್ಯ ರಾಜ್ಯಕ್ಕೂ ಕೂಡ ಇಲ್ಲಿಂದ ವಿಮಾನ ಹಾರಾಟ ಮಾಡುತ್ತಿದೆ. ಆದರೆ ಬೀದರ್​ನಲ್ಲಿ ಮಾತ್ರ ಇದ್ದ ಒಂದೇ ಒಂದು ವಿಮಾನವೂ ಕೂಡ ಹಾರಾಟ ನಡೆಸದೆ ಇರುವುದು ಜಿಲ್ಲೆಯ ಜನರ ಅಸಮಾಧಾನ ಹೆಚ್ಚುವಂತೆ ಮಾಡಿದೆ.

ಇದನ್ನೂ ಓದಿ: Namma Metro: ವಿಮಾನ ನಿಲ್ದಾಣಕ್ಕೆ ರಸ್ತೆ ಜತೆಗೇ ಇರಲಿದೆ ಮೆಟ್ರೋ ಲೈನ್: 2026ಕ್ಕೆ ಪಿಂಕ್ ಲೈನ್ ಸಿದ್ಧ

ಬಡವರು ಸಹ ವಿಮಾನ ಪ್ರಯಾಣ ಮಾಡಲಿ ಅನ್ನೋ ಉದ್ದೇಶದಿಂದ‌ ಕೇಂದ್ರ ಸರ್ಕಾರ ಉಡಾನ್ ಯೋಜನೆ ಜಾರಿಗೆ ತಂದಿದೆ. ಅಡ-ತಡೆಗಳ ನಡುವೆ ಗಡಿನಾಡಿನಲ್ಲಿ ವಿಮಾನ ನಿಲ್ದಾಣ ಲೋಕಾರ್ಪಣೆಗೊಂಡು ಮೂರು ವರ್ಷದ ಕಳಿತು. ಅಷ್ಟರಲ್ಲಿಯೇ ವಿಮಾನ ಹಾರಾಟ ನಿಲ್ಲಿಸಿದೆ. ಈ ಬಗ್ಗೆ ಬೀದರ್ ಜಿಲ್ಲಾಧಿಕಾರಿಯವರು ಮಾತನಾಡಿ, ಪ್ರಯಾಣಿಕರ ಕೊರತೆಯಿಂದ ವಿಮಾನ ಹಾರಾಟ ನಿಲ್ಲಿಸಿದೆ ಶೀಘ್ರದಲ್ಲಿಯೇ ಮತ್ತೊಂದು ವಿಮಾನ ಕಂಪನಿಯ ಜೊತೆಗೆ ಮಾತುಕತೆ ನಡೆಸಿ ಪತ್ತೆ ವಿಮಾನ ಹಾರಿಸುವುದಾಗಿ ಜಿಲ್ಲಾಧಿಕಾರಿಗಳು ಹೇಳುತ್ತಿದ್ದಾರೆ.

ಬೀದರ್​ನಿಂದ ವಿಮಾನ ಹಾರಾಟ ಆರಂಭವಾಗಿ ನಾಲ್ಕು ವರ್ಷದಲ್ಲಿಯೇ ಎರಡು ಕಂಪನಿಯವರು ವಿಮಾನ ಹಾರಾಟ ನಿಲ್ಲಿಸಿವೆ. ಇನ್ಮುಂದೆ ಬೀದರ್​ನಿಂದ ಬೆಂಗಳೂರಿಗೆ ವಿಮಾನ ಹಾರಾಟ ನಡೆಸುವುದು ಅನುಮಾನವಾಗಿದ್ದು ಬೀದರ್ ವಿಮಾನ ನಿಲ್ದಾಣ ಮುಚ್ಚುವ ಎಲ್ಲಾ ಲಕ್ಷಣಗಳು ಇಲ್ಲಿ ಗೋಚರಿಸುತ್ತಿವೆ. ಪಕ್ಕದ ಕಲಬುರ್ಗಿಯಲ್ಲಿ ಬೆಂಗಳೂರು ಕಲಬುರಗಿಗೆ ಮೂರರಿಂದ ನಾಲ್ಕು ವಿಮಾನ ಹಾಗೂ ದೆಹಲಿ, ತಿರುಪತಿ ಸೇರಿದಂತೆ ಗೋವಾ ರಾಜ್ಯಗಳಿಗೂ ವಿಮಾನ ಹಾರಾಟ ನಡೆಸುತ್ತಿದೆ. ಕಲಬುರಗಿ ಸಂಸದರಿಗೆ ಇರುವ ಹುಮ್ಮಸು ಬೀದರ್ ಸಂಸದರಿಗೆ ಯಾಕೆ ಇಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ