AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಬಿಲ್ ಪಾವತಿಸದಷ್ಟು ಬಡವಾಯ್ತಾ ಬೀದರ್​​​​​​ ಬ್ರಿಮ್ಸ್ ಆಸ್ಪತ್ರೆ? ಬಾಕಿ ಮೊತ್ತ ಕೇಳಿದ್ರೆ ಶಾಕ್​​​ ಆಗ್ತೀರಾ

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯು ಜೆಸ್ಕಾಂಗೆ ಕಟ್ಟಬೇಕಾದ ವಿದ್ಯುತ್ ಬಿಲ್ ಮೊತ್ತ ಎಷ್ಟು ಅಂತ ಗೊತ್ತಾದರೆ ನೀವು ನಿಜಕ್ಕೂ ಶಾಕ್​ ಆಗುತ್ತೀರಾ. ಒಂದು ದಶಕದಿಂದ ಹಣ ಪಾವತಿಸದಿರುವುದು, ನೋಟಿಸ್‌ಗಳ ಹೊರತಾಗಿಯೂ ಕ್ರಮ ಕೈಗೊಳ್ಳದ ಜೆಸ್ಕಾಂ ಇಲಾಖೆಯ ಇಬ್ಬಗೆ ನೀತಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯುತ್​ ಬಿಲ್ ಪಾವತಿಸದಷ್ಟು ಬಡವಾಯ್ತಾ ಬೀದರ್​​​​​​ ಬ್ರಿಮ್ಸ್ ಆಸ್ಪತ್ರೆ? ಬಾಕಿ ಮೊತ್ತ ಕೇಳಿದ್ರೆ ಶಾಕ್​​​ ಆಗ್ತೀರಾ
ಬ್ರಿಮ್ಸ್ ಆಸ್ಪತ್ರೆ, ಜೆಸ್ಕಾಂ
ಸುರೇಶ ನಾಯಕ
| Edited By: |

Updated on: Feb 25, 2026 | 6:01 PM

Share

ಬೀದರ್​​, ಫೆಬ್ರವರಿ 25: ಜನಸಾಮಾನ್ಯರು ಕರೆಂಟ್ ಬಿಲ್ (Current Bill) ಕಟ್ಟುವುದು ತಡವಾದರೆ ಕನೆಕ್ಷನ್ ಕಟ್ ಮಾಡಲಾಗುತ್ತದೆ. ಆದರೆ ಬೀದರ್​ನ ಬ್ರಿಮ್ಸ್ ಆಸ್ಪತ್ರೆ 1.70 ಕೋಟಿ ರೂ ಜೆಸ್ಕಾಂಗೆ ಹಣ ಕಟ್ಟಿಲ್ಲ. ಹಣ ಕಟ್ಟಿ ಅಂತಾ ನೋಟಿಸ್ ಮೇಲೆ ನೋಟಿಸ್ ಕೊಟ್ಟರು ಬ್ರಿಮ್ಸ್ ಆಡಳಿತ ಮಂಡಳಿ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಜೆಸ್ಕಾಂ ಇಲಾಖೆಯ ಈ ತಾರತಮ್ಯ ನೀತಿಗೆ ಗಡೀ ಜಿಲ್ಲೆಯ ಬೀದರ್​ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

1 ಕೋಟಿ 70 ಲಕ್ಷ 80 ಸಾವಿರ ರೂ ಬಿಲ್ ಬಾಕಿ

ಬೀದರ್​ನ ಪ್ರತಿಷ್ಠಿತ ಬ್ರಿಮ್ಸ್ ಆಸ್ಪತ್ರೆಯ ಕರೆಂಟ್ ಬಿಲ್ ಬಾಕಿ ಇಟ್ಟುಕೊಂಡಿರುವ ಮೊತ್ತ ಕೇಳಿದರೆ, ನೀವು ಶಾಕ್ ಆಗುವುದು ಗ್ಯಾರಂಟಿ. ಬರೋಬ್ಬರಿ 1 ಕೋಟಿ 70 ಲಕ್ಷ 80 ಸಾವಿರ ರೂ ಕರೆಂಟ್ ಬಿಲ್ ಬಾಕಿ ಇದೆ. ಸುಮಾರು 10 ವರ್ಷದಿಂದ ಕರೆಂಟ್ ಬಿಲ್ ಬಾಕಿ ಇದ್ದು, ಹಣ ಕಟ್ಟಿ ಎಂದು ಜೆಸ್ಕಾಂನವರು ನೋಟಿಸ್​ ನೀಡಿದರು ಕೂಡ ಕರೆಂಟ್ ಬಿಲ್ ಮಾತ್ರ ಕಟ್ಟುತ್ತಿಲ್ಲ.

ಇದನ್ನೂ ಓದಿ: ಫುಟ್​ಪಾತ್ ಮೇಲೆಯೇ ಟ್ರಾನ್ಸ್​ಫಾರ್ಮರ್​​ಗಳ ಸ್ಥಾಪನೆ; ಜನರ ಜೀವದ ಜೊತೆ ಆಟ ಆಡುತ್ತಿದೆಯಾ ಬೆಸ್ಕಾಂ?

ಇನ್ನು ಜೆಸ್ಕಾಂನವರು ಹೆಸರಿಗೆ ಮಾತ್ರ ನೋಟಿಸ್ ಕೊಟ್ಟು ನಮಗೂ ಆ ಹಣಕ್ಕೂ ಸಂಬಂಧವೇ ಇಲ್ಲದವರಂತೆ ವರ್ತನೆ ಮಾಡುತ್ತಿದ್ದಾರೆ. ಜನ ಸಾಮಾನ್ಯರು ಒಂದು ತಿಂಗಳು ಕರೆಂಟ್ ಬಿಲ್ ಕಟ್ಟದೆ ಹೋದರೆ ಅವರ ಮನೆಯ ಕರೆಂಟ್ ಕಟ್ ಮಾಡುತ್ತಾರೆ, ಆದರೆ ಒಂದು ದಶಕದಿಂದ ಬ್ರಿಮ್ಸ್, ಜೆಸ್ಕಾಂಗೆ ಕರೆಂಟ್ ಬಿಲ್ ಕಟ್ಟಿಲ್ಲ. ಹಣ ವಸೂಲಿ ಮಾಡುವಂತೆ ಅಂಬ್ರೇಷ್ ಕೆಂಚಾ ಎಂಬ ನಿವಾಸಿ ಜೆಸ್ಕಾಂಗೆ ಒತ್ತಾಯಿಸಿದ್ದಾರೆ.

ಕೋಟ್ಯಂತರ ರೂ ವಿದ್ಯುತ್‌ ಬಿಲ್‌ ಬಾಕಿ ಉಳಿದಿದ್ದು, ವಸೂಲಿಗಾಗಿ ಜೆಸ್ಕಾಂ ಸರಣಿ ನೋಟಿಸ್ ನೀಡಿದೆ. ಆದರೂ ಬಿಲ್‌ ಮೊತ್ತ ಪಾವತಿಯಾಗದಿರುವುದು ಜೆಸ್ಕಾಂ ಆಡಳಿತವನ್ನು ಹೈರಾಣಾಗಿಸಿದೆ. ಇನ್ನೊಂದೆಡೆ ಸರ್ಕಾರಿ ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗದಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ವದಂತಿ ಬಗ್ಗೆ ಬೆಸ್ಕಾಂ ಎಂಡಿ ಸ್ಪಷ್ಟನೆ

ಇಲ್ಲಿನ ಜನರು ಕೂಡ ಜೆಸ್ಕಾಂ ಇಲಾಖೆಯ ಇಬ್ಬಗೆ ನೀತಿಯಿಂದ ಜನರು ಆಕ್ರೋಶ ಹೊರಹಾಕುತ್ತಿದ್ದು, ಬಾಕಿ ಮೊತ್ತವನ್ನ ವಸೂಲಿ ಮಾಡಿ ಸರಕಾರದ ಬೊಕ್ಕಸವನ್ನು ತುಂಬಿಸಿ ಎಂದು ಇಲ್ಲಿನ ಜನರು ಜೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ. ಲೋಡ್ ಶೆಡ್ಡಿಂಗ್​​ನಿಂದ ಜನತೆ ಮತ್ತು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಜೆಸ್ಕಾಂಗೆ ಬಾಕಿ ಬರಬೇಕಿರುವ ಹಣ ಪಾವತಿಯಾದರೆ ವಿದ್ಯುತ್ ಖರೀದಿಗೆ ಅನುಕೂಲವಾಗಲಿದೆ. ಈಗಲಾದರೂ ಇತ್ತ ಗಮನ ಹರಿಸಿ ಕ್ರಮಕೈಗೊಳ್ಳಬೇಕು ಎಂದು ಜನರು ಆಗ್ರಹಿಸುತ್ತಿದ್ದಾರೆ.

ಮಾತನಾಡಲು ಅಧಿಕಾರಿಗಳು ಹಿಂದೇಟು

ಜೆಸ್ಕಾಂಗೆ ಈಗ ಬರಬೇಕಿರುವ ಹಣದಲ್ಲಿ ಸದ್ಯಕ್ಕೆ ಅರ್ಧ ಹಣ ಪಾವತಿ ಆದರೂ ಸಾಕು ಎನ್ನಲಾಗುತ್ತಿದೆ. ಇದರಿಂದ ವಿದ್ಯುತ್ ಖರೀದಿ ಮತ್ತು ಸಮರ್ಪಕ ಪೂರೈಕೆಗೆ ಅನುಕೂಲವಾಗುತ್ತದೆ. ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳು ಮಾತನಾಡಲು ಹಿಂದೇಟು ಹಾಕಿದ್ದಾರೆ. ಒಟ್ಟಿನಲ್ಲಿ ಬ್ರಿಮ್ಸ್ ಆಸ್ಪತ್ರೆಯಿಂದ ಬರಬೇಕಾಗಿರುವ ಲಕ್ಷಾಂತರ ರೂ ಹಣವನ್ನ ಬ್ರಿಮ್ಸ್​, ಜೆಸ್ಕಾಂಗೆ ಪಾವತಿ ಮಾಡಿದರೆ ಎಲ್ಲರಿಗೂ ಒಳ್ಳೆಯದಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ