ಕೋರ್ಟ್ ತೀರ್ಪು ತಿದ್ದಿ ಸಿಕ್ಕಿಬಿದ್ದ ಸ್ವಾಮೀಜಿ, ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಡಿಸಿ ಆದೇಶ

ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ(ಕೆಎಟಿ) ತೀರ್ಪು ತಿದ್ದಿದ್ದ ಬಸವತೀರ್ಥ ಮಠದ ಸ್ವಾಮೀಜಿ ಸಿಕ್ಕಿಬಿದ್ದಿದ್ದು, ಇದೀಗ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೋರ್ಟ್ ತೀರ್ಪು ತಿದ್ದಿ ಸಿಕ್ಕಿಬಿದ್ದ ಸ್ವಾಮೀಜಿ, ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಡಿಸಿ ಆದೇಶ
ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಡಿಸಿ ಆದೇಶ
Follow us
ಸುರೇಶ ನಾಯಕ
| Updated By: ರಮೇಶ್ ಬಿ. ಜವಳಗೇರಾ

Updated on:Aug 09, 2023 | 11:23 AM

ಬೀದರ್, (ಆಗಸ್ಟ್ 09): ಕೋರ್ಟ್​ ತೀರ್ಪು (Court Verdict) ಫೋರ್ಜರಿ ಮಾಡಿದ್ದ ಹುಮ್ನಾಬಾದ್(humnabad) ತಾಲೂಕಿನ ಬಸವತೀರ್ಥ ಮಠದ  ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ (Bidar DC) ಆದೇಶಿಸಿದ್ದಾರೆ. ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ(ಕೆಎಟಿ ) ತೀರ್ಪನ್ನು ತಿದ್ದಿದ್ದ ಪ್ರಕರಣಕ್ಕೆ  ಬಸವತೀರ್ಥ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಹಶೀಲ್ದಾರ್​​ಗೆ ಜಿಲ್ಲಾಧಿಕಾರಿ ಗೋಂವಿದರೆಡ್ಡಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹೈಕೋರ್ಟ್ ಛೀಮಾರಿ ಹಾಕಿದ ಬಳಿಕ ಎಚ್ಚೆತ್ತ ಬಿಬಿಎಂಪಿ, 59,000 ಫ್ಲೆಕ್ಸ್ ಬ್ಯಾನರ್ ತೆರವು

ದೂರುದಾರ ಚಂದ್ರಕಾಂತ ಜಲಾದಾರ, ಸ್ವಾಮೀಜಿ ನಡುವೆ ಭೂವಿವಾದಕ್ಕೆ ಸಂಬಂಧಿಸಿದಂತೆ 2017ರ ನವೆಂಬರ್ 17ರಂದು ಕೆಎಟಿಯ ಅಧಿಕೃತ ತೀರ್ಪನ್ನು ಬಸವತೀರ್ಥ ಮಠದ ಸ್ವಾಮೀಜಿ ಫೋರ್ಜರಿ ಮಾಡಿ ಸಿಕ್ಕಿಬಿದ್ದಿದ್ದರು. ಇದೀಗ ಕೋರ್ಟ್ ಆದೇಶದಂತೆ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಹುಮ್ನಾಬಾದ್ ತಹಶೀಲ್ದಾರ್​ಗೆ ಬೀದರ್ ಡಿಸಿ ಗೋಂವಿದರೆಡ್ಡಿ ಆದೇಶಿಸಿದ್ದಾರೆ.

ಸಿದ್ಧಲಿಂಗ ಸ್ವಾಮಿ ಕೋರ್ಟ್​ನ ತೀರ್ಪನ್ನು ಫೋರ್ಜರಿ 5-12-2017ರಂದು ಜಿಲ್ಲಾಧಿಕಾಗಳಿಗೆ ಅರ್ಜಿ ಸಲ್ಲಿಸಿ ತೀರ್ಪಿನಲ್ಲಿ ಇಲ್ಲದೇ ಇರುವುದನ್ನು ಸೇರಿಸಿರುವುದು ದೃಢಪಟ್ಟಿದ್ದು, ಕರ್ನಾಟಕ ಹೈಕೋರ್ಟ್​ ಕಲಬುರಗಿ ಪೀಠ ಕ್ರಮ ಜರುಗಿಸುವಂತೆ ನಿರ್ದೆಶಿಸಿರುವಂತೆ ಹುಮನಾಬಾದ್​ನ ಬಸವತೀರ್ಥ ಮಠದ ಗುರು ಚನ್ನಬಸಪ್ಪಯ್ಯ ಮಠಾಧಿಪತಿಗಳು ಡಾ. ಸಿದ್ದಲಿಂಗ ಸ್ವಾಮಿ ವಿರುದ್ಧ ದಂಡ ಸಂಹಿತೆ ಕಲಂ 466 ಮತ್ತ ಅನ್ವಯವಾಗುವಂತೆ ಇತರೆ ಕಾನೂನಿ ಸೆಕ್ಷನ್​ಗಳ ಪ್ರಕಾರ ಸಂಬಂಧಿಸಿದ ಪೊಲೀಸ್​ ಠಾಣೆಯಲ್ಲಿ ಕ್ರಿಮಿನಲ್​ ಮೊಕದ್ದಮೆ ಕೂಡಲೇ ದಾಖಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:22 am, Wed, 9 August 23