Earthquake: ಬೀದರ್​​: ಹುಮ್ನಾಬಾದ್ ತಾಲೂಕಿನ ಗ್ರಾಮಗಳಲ್ಲಿ ಮತ್ತೆ ಭೂಕಂಪನ: ಭಯಪಡದಂತೆ ಗ್ರಾಮಸ್ಥರಿಗೆ ಡಿಸಿ ಮನವಿ

Earthquake: ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗ್ರಾಮಗಳಾದ ವಡ್ಡನಕೇರಾ, ಮದರಗಾಂವ್ ಗ್ರಾಮಗಳಲ್ಲಿ ಮತ್ತೆ ಭೂಕಂಪನ ಉಂಟಾಗಿದೆ. ಬೀದರ್​ನ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದ ಕೇಂದ್ರದಲ್ಲಿ 2.4ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನ ಪ್ರಮಾಣ ಕಡಿಮೆ ಹಿನ್ನೆಲೆ ಭಯಪಡದಂತೆ ಗ್ರಾಮಸ್ಥರಿಗೆ ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಮನವಿ ಮಾಡಿದ್ದಾರೆ.

Earthquake: ಬೀದರ್​​: ಹುಮ್ನಾಬಾದ್ ತಾಲೂಕಿನ ಗ್ರಾಮಗಳಲ್ಲಿ ಮತ್ತೆ ಭೂಕಂಪನ: ಭಯಪಡದಂತೆ ಗ್ರಾಮಸ್ಥರಿಗೆ ಡಿಸಿ ಮನವಿ
ಪ್ರಾತಿನಿಧಿಕ ಚಿತ್ರ
Follow us
ಸುರೇಶ ನಾಯಕ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 08, 2023 | 6:49 PM

ಬೀದರ್, ನವೆಂಬರ್​​ 8: ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗ್ರಾಮಗಳಾದ ವಡ್ಡನಕೇರಾ, ಮದರಗಾಂವ್ ಗ್ರಾಮಗಳಲ್ಲಿ ಮತ್ತೆ ಭೂಕಂಪನ (Earthquake) ಉಂಟಾಗಿದೆ. ಬೀದರ್​ನ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದ ಕೇಂದ್ರದಲ್ಲಿ 2.4ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನ ಪ್ರಮಾಣ ಕಡಿಮೆ ಹಿನ್ನೆಲೆ ಭಯಪಡದಂತೆ ಗ್ರಾಮಸ್ಥರಿಗೆ ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಮನವಿ ಮಾಡಿದ್ದಾರೆ. ಗ್ರಾಮಗಳಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ನ.6ರಂದು ವಡ್ಡನಕೇರಾ, ಮದರಗಾಂವ್​ನಲ್ಲಿ ಭೂಮಿ ಕಂಪಿಸಿತ್ತು.

ಹುಮ್ನಾಬಾದ್ ತಾಲೂಕಿನ ವಡ್ಡನಕೇರಾ ಮದರಗಾಂವ್ ಗ್ರಾಮದಲ್ಲಿ ನ.6ರಂದು ಬೆಳಗ್ಗೆ 4:28ರ ಸುಮಾರಿಗೆ ಭೂಕಂಪನ ಉಂಟಾಗಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದಲ್ಲಿ 1.9 ರಷ್ಟು ತಿವ್ರತೆ ದಾಖಲಾಗಿತ್ತು. ಭೂಕಂಪ ಪ್ರಮಾಣ ಕಡಿಮೆಯಿರುವ ಕಾರಣ ಭಯಗೊಳದಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದರು.

ಇದನ್ನೂ ಓದಿ: ಬೀದರ್​​​: ಹುಮ್ನಾಬಾದ್​ನಲ್ಲಿ ಭೂಕಂಪನ: 1.9 ರಷ್ಟು ತಿವ್ರತೆ ದಾಖಲು

ವಡ್ಡನಕೇರಾ ಗ್ರಾಮದ 1.7 ಕಿಮೀ ಎನ್‌ಎನ್‌ಇ, ಮದರಗಾಂವ್ ಜಿಪಿ, ಹುಮ್ನಾಬಾದ್ ತಾಲೂಕಿನಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆ ಆಗಿತ್ತು. ಈ ರೀತಿಯ ಭೂಕಂಪನಗಳು ಸ್ಥಳೀಯವಾಗಿ ಯಾವುದೇ ಹಾನಿಯನ್ನು ಉಂಟುಮಾಡುವುದಿಲ್ಲ. ಏಕೆಂದರೆ ಭೂಕಂಪನದ ತೀವ್ರತೆಗಳು ತುಂಬಾ ಕಡಿಮೆ ಆಗಿರುತ್ತದೆ.

ವಿಜಯಪುರ ಜಿಲ್ಲೆಯಲ್ಲಿ ಕೆಲ ತಿಂಗಳ ಹಿಂದೆ ಭೂಕಂಪನದ ಅನುಭವವಾಗಿತ್ತು. ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಜು.25ರ ಬೆಳಿಗ್ಗೆ 9:55ಕ್ಕೆ 2.4 ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಮನಗೂಳಿ ಪಟ್ಟಣದಿಂದ 2.9 ಕಿ.ಮೀ ದೂರದಲ್ಲಿ ಭೂಕಂಪವಾಗಿತ್ತು.

ಇದನ್ನೂ ಓದಿ: ರಾಯಚೂರು: ಲಿಂಗಸೂರು ತಾಲೂಕಿನ 4 ಗ್ರಾಮಗಳಲ್ಲಿ ಲಘು ಭೂಕಂಪ: 2.7ರಷ್ಟು ತೀವ್ರತೆ ದಾಖಲು

ಭೂಕಂಪನದ ‘ಸೆಸ್ಮಿಕ್ ಇಂಟೆನ್ಸಿಟಿ ಮ್ಯಾಪ್’ ಪ್ರಕಾರ, ತೀವ್ರತೆಯು ತುಂಬಾ ಕಡಿಮೆ ಇದೆ. ಭೂಮಿಯ 15 ರಿಂದ 20 ಕಿಮೀ ಆಳದಲ್ಲಿ ಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿತ್ತು.

ಬರ ವೀಕ್ಷಣೆ ಮಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ

ಜಿಲ್ಲೆಯಲ್ಲಿಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಬರ ವೀಕ್ಷಣೆಗೆ ಆಗಮಿಸಿದರು. ಬಿಜೆಪಿ ಶಾಸಕರಿರುವ ತಾಲೂಕಿನಲ್ಲಿ ಬರ ವೀಕ್ಷಣೆ ಮಾಡಿದ್ದಾರೆ. ಬಸವಕಲ್ಯಾಣ ಹುಮ್ನಾಬಾದ್ ಬೀದರ್ ದಕ್ಷಿಣ ಹಾಗೂ ಔರಾದ್ ನಲ್ಲಿ ಬರ ವೀಕ್ಷಣೆ ಮಾಡಲಾಗಿದೆ. ಒಂದೇ ದಿನ ನಾಲ್ಕು ವಿಧಾನ ಸಭಾ ಕ್ಷೇತ್ರದಲ್ಲಿ ಬರ ವೀಕ್ಷಣೆ ಮಾಡಿದ್ದಾರೆ. ಮಾಜಿ ಸಚಿವ ಪ್ರಭು ಚೌಹಾನ್, ಶಾಸಕರಾದ ಶರಣು ಸಲಗರ್, ಬೀದರ್ ದಕ್ಷಿಣ ಶಾಸಕ ಶೈಲೇಂದ್ರ ಬೆಲ್ದಾಳೆ ಸಾಥ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:34 pm, Wed, 8 November 23

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು