AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಭೀಕರ ಬರಗಾಲದ ನಡುವೆಯೂ ಸಾವಯವ ಪದ್ದತ್ತಿಯಲ್ಲಿ ಪಪ್ಪಾಯಿ ಬೆಳೆಸಿ ಲಕ್ಷಲಕ್ಷ ಆದಾಯದ ನಿರೀಕ್ಷೆಯಲ್ಲಿ ರೈತ!

ಬೀದರ್ ಜಿಲ್ಲೆಯ ಬರಗಾಲದ ನಡುವೆಯೂ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದ ರೈತ ವೆಂಕಟ್ ರೆಡ್ಡಿ ಅವರು ಹನಿ ನೀರಾವರಿ ಮತ್ತು ಸಾವಯವ ಪದ್ಧತಿಯಲ್ಲಿ ಪಪ್ಪಾಯಿ ಬೆಳೆ ಬೆಳೆಸಿದ್ದಾರೆ. ಎರಡು ಎಕರೆಯಲ್ಲಿ ಉತ್ತಮ ಇಳುವರಿ ಪಡೆಯುತ್ತಿದ್ದು, ಸುಮಾರು 25 ಲಕ್ಷ ರೂಪಾಯಿ ಆದಾಯದ ನಿರೀಕ್ಷೆಯಲ್ಲಿದ್ದಾರೆ.

ಬೀದರ್: ಭೀಕರ ಬರಗಾಲದ ನಡುವೆಯೂ ಸಾವಯವ ಪದ್ದತ್ತಿಯಲ್ಲಿ ಪಪ್ಪಾಯಿ ಬೆಳೆಸಿ ಲಕ್ಷಲಕ್ಷ ಆದಾಯದ ನಿರೀಕ್ಷೆಯಲ್ಲಿ ರೈತ!
ಪಪ್ಪಾಯ ಬೆಳೆ ಜತೆ ವೆಂಕಟ್ ರೆಡ್ಡಿImage Credit source: tv9
ಸುರೇಶ್ ನಾಯಕ್
| Edited By: |

Updated on: Sep 17, 2026 | 1:20 PM

Share

ಮುಖ್ಯಾಂಶಗಳು

  • ಬರಗಾಲದಲ್ಲೂ ಪಪ್ಪಾಯಿ ಬೆಳೆದು ಉತ್ತಮ ಇಳುವರಿ
  • ಎರಡು ಎಕರೆಯಲ್ಲಿ 25 ಲಕ್ಷ ರೂ. ಆದಾಯ ನಿರೀಕ್ಷೆ
  • ಹನಿ ನೀರಾವರಿ, ಸಾವಯವ ಪದ್ಧತಿಯಿಂದ ಯಶಸ್ಸು

ಬೀದರ್, ಸೆಪ್ಟೆಂಬರ್ 17: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ರೈತರೊಬ್ಬರು ಕಡಿಮೆ ನೀರಿನಲ್ಲಿ ಸಾವಯವ ಪದ್ಧತಿ ಹಾಗೂ ಹನಿ ನೀರಾವರಿ ಅಳವಡಿಸಿಕೊಂಡು ಪಪ್ಪಾಯಿ ಬೆಳೆ ಬೆಳೆಸಿದ್ದಾರೆ. ಎರಡು ಎಕರೆಯಲ್ಲಿ ಉತ್ತಮ ಇಳುವರಿ ಪಡೆಯುತ್ತಿರುವ ಬೀದರ್​ನ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದ ರೈತ ವೆಂಕಟ್ ರೆಡ್ಡಿ, ಇತರೆ ರೈತರಿಗೆ ಮಾದರಿಯಾಗಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ವೆಂಕಟ್ ರೆಡ್ಡಿ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಪಪ್ಪಾಯಿ ಕೃಷಿ ಆರಂಭಿಸಿದ್ದರು. ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದರೂ, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯೊಂದಿಗೆ ಸುಮಾರು 1,900 ಪಪ್ಪಾಯಿ ಸಸಿಗಳನ್ನು ನಾಟಿ ಮಾಡಿದ್ದರು. ಆದರೆ ಸಸಿಗಳು ಬೆಳೆದು ದೊಡ್ಡದಾಗುವ ವೇಳೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಲಿಲ್ಲ. ಪರಿಣಾಮವಾಗಿ ಜಮೀನಿನ ಬಾವಿಯ ನೀರಿನ ಮಟ್ಟವೂ ಕುಸಿಯತೊಡಗಿತು.

ಇಂತಹ ಪರಿಸ್ಥಿತಿಯಲ್ಲಿ ಬೆಳೆ ಒಣಗುವ ಆತಂಕ ಎದುರಾದರೂ, ವೆಂಕಟ್ ರೆಡ್ಡಿ ಅವರು ಲಭ್ಯವಿರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮುಂದಾದರು. ಜಮೀನಿನಲ್ಲಿ ಹನಿ ನೀರಾವರಿ ವ್ಯವಸ್ಥೆ ಅಳವಡಿಸಿ, ಪ್ರತಿ ಗಿಡಕ್ಕೂ ಅಗತ್ಯವಿರುವಷ್ಟು ಮಾತ್ರ ನೀರು ತಲುಪುವಂತೆ ವ್ಯವಸ್ಥೆ ಮಾಡಿದರು. ಇದರಿಂದ ನೀರಿನ ವ್ಯರ್ಥ ಬಳಕೆಯನ್ನು ಕಡಿಮೆ ಮಾಡಿ, ಬರಗಾಲದಲ್ಲಿಯೂ ಬೆಳೆಯನ್ನು ಉಳಿಸಿಕೊಳ್ಳಲು ಸಾಧ್ಯವಾಯಿತು.

ಸಾವಯವ ಪದ್ಧತಿಗೆ ಆದ್ಯತೆ

ಹನಿ ನೀರಾವರಿಯ ಜೊತೆಗೆ ಪಪ್ಪಾಯಿ ಬೆಳೆಯಲ್ಲಿ ಸಾವಯವ ಕೃಷಿ ಪದ್ಧತಿಗೂ ರೈತ ಆದ್ಯತೆ ನೀಡಿದ್ದಾರೆ. ಗಿಡಗಳ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು ಸಾವಯವ ರೀತಿಯಲ್ಲಿ ಒದಗಿಸಿ, ಉತ್ತಮ ಗುಣಮಟ್ಟದ ಹಣ್ಣು ಪಡೆಯಲು ಪ್ರಯತ್ನಿಸಿದ್ದಾರೆ. ಸದ್ಯ ಜಮೀನಿನಲ್ಲಿರುವ ಪಪ್ಪಾಯಿ ಗಿಡಗಳು ಉತ್ತಮವಾಗಿ ಬೆಳೆದಿದ್ದು, ಹಣ್ಣುಗಳಿಂದ ತುಂಬಿಕೊಂಡಿವೆ. ಒಂದು ಗಿಡದಿಂದ ಸುಮಾರು 60ರಿಂದ 70 ಕೆ.ಜಿ.ವರೆಗೆ ಇಳುವರಿ ಪಡೆಯುವ ನಿರೀಕ್ಷೆ ಇದೆ. ಒಂದೊಂದು ಪಪ್ಪಾಯಿ ಹಣ್ಣು ಸುಮಾರು 3ರಿಂದ 5 ಕೆ.ಜಿ.ವರೆಗೆ ತೂಕ ಹೊಂದಿದೆ ಎಂದು ರೈತರು ತಿಳಿಸಿದ್ದಾರೆ.

25 ಲಕ್ಷ ರೂ. ಆದಾಯದ ನಿರೀಕ್ಷೆ

Bidar Organic Pappaya Crop

ಎರಡು ಎಕರೆಯಲ್ಲಿ ಬೆಳೆದಿರುವ ಪಪ್ಪಾಯಿ ಬೆಳೆಯಿಂದ ಸುಮಾರು 25 ಲಕ್ಷ ರೂಪಾಯಿ ಆದಾಯ ಬರುವ ನಿರೀಕ್ಷೆಯನ್ನು ವೆಂಕಟ್ ರೆಡ್ಡಿ ಹೊಂದಿದ್ದಾರೆ. ಮಳೆ ಕೊರತೆ ಮತ್ತು ನೀರಿನ ಅಭಾವದ ನಡುವೆಯೂ ಉತ್ತಮ ಇಳುವರಿ ಸಿಗುತ್ತಿರುವುದು ರೈತನಲ್ಲಿ ಸಂತಸ ಮೂಡಿಸಿದೆ. ಪಪ್ಪಾಯಿ ಬೆಳೆಗೆ ನೀರು ಮತ್ತು ನಿರ್ವಹಣೆಯ ಅಗತ್ಯವಿದ್ದರೂ, ಲಭ್ಯವಿರುವ ನೀರನ್ನು ಮಿತವಾಗಿ ಬಳಸಿಕೊಂಡು ಹನಿ ನೀರಾವರಿ ಮೂಲಕ ಕೃಷಿ ಮಾಡಿದರೆ ಬರಗಾಲದಲ್ಲಿಯೂ ಉತ್ತಮ ಫಲಿತಾಂಶ ಪಡೆಯಬಹುದು ಎಂಬುದನ್ನು ವೆಂಕಟ್ ರೆಡ್ಡಿ ಅವರ ಜಮೀನು ತೋರಿಸಿಕೊಟ್ಟಿದೆ.

ರೈತರಿಗೆ ಪರ್ಯಾಯ ಕೃಷಿಯ ಸಂದೇಶ

ಬೀದರ್ ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಅನೇಕ ರೈತರು ಬೆಳೆಗಳ ಬಗ್ಗೆ ಆತಂಕದಲ್ಲಿದ್ದಾರೆ. ಸೂಕ್ತ ಸಮಯದಲ್ಲಿ ಮಳೆಯಾಗದ ಕಾರಣ ಹಲವೆಡೆ ಬೆಳೆಗಳು ಒಣಗುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಕಡಿಮೆ ನೀರಿನಲ್ಲಿ ಪಪ್ಪಾಯಿ ಬೆಳೆ ಬೆಳೆಸಿ ಉತ್ತಮ ಇಳುವರಿ ಪಡೆಯುತ್ತಿರುವ ವೆಂಕಟ್ ರೆಡ್ಡಿ ಅವರ ಪ್ರಯತ್ನ ಗಮನ ಸೆಳೆದಿದೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಅಪೌಷ್ಟಿಕತೆ: 5 ವರ್ಷದೊಳಗಿನ ಶೇ 40ಕ್ಕೂ ಹೆಚ್ಚು ಮಕ್ಕಳ ತೂಕ ಕಡಿಮೆ

ನೀರಿನ ಕೊರತೆ ಇದೆ ಎಂದು ಕೃಷಿಯನ್ನು ಕೈಬಿಡದೆ, ನೀರಿನ ಸದ್ಬಳಕೆ, ಹನಿ ನೀರಾವರಿ ಮತ್ತು ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡರೆ ಬರಗಾಲದಲ್ಲಿಯೂ ಪರ್ಯಾಯ ಬೆಳೆಗಳ ಮೂಲಕ ಆದಾಯ ಗಳಿಸಬಹುದು ಎಂಬ ಸಂದೇಶವನ್ನು ಈ ರೈತರ ಕೃಷಿ ನೀಡುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ