ಬೀದರ್: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿಗ್ರಹಕ್ಕೆಂದೆ ಲೋಕಾಯುಕ್ತ ಇದ್ದು, ಆದರೂ ಲಂಚ ಪ್ರಕರಣಗಳಿಗೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಬೀದರ್ (Bidar) ನಗರದ ಹೊರವಲಯದಲ್ಲಿರುವ ವಿವೇಕಾನಂದ ಶಾಲೆಯಲ್ಲಿ ಲಂಚ(bribe)ಪಡೆಯುವಾಗ ಮುಖ್ಯ ಶಿಕ್ಷಕನೊಬ್ಬ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಘಟನೆ ನಡೆದಿದೆ.

ಬೀದರ್: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಮುಖ್ಯ ಶಿಕ್ಷಕ
ಬೀದರ್​ನಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯಶಿಕ್ಷಕ
Updated By: ಕಿರಣ್ ಹನುಮಂತ್​ ಮಾದಾರ್

Updated on: Feb 15, 2024 | 3:58 PM

ಬೀದರ್, ಫೆ.15: ಮುಖ್ಯ ಶಿಕ್ಷಕನೊಬ್ಬ ಲಂಚ(bribe)ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಘಟನೆ ಬೀದರ್ (Bidar) ನಗರದ ಹೊರವಲಯದಲ್ಲಿರುವ ವಿವೇಕಾನಂದ ಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ ಎಂಬಾತ 50 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ(Lokayukta) ಬಲೆಗೆ ಬಿದ್ದಿದ್ದಾನೆ. ವಿಜ್ಞಾನ ಶಿಕ್ಷಕಿ ಶಶಿಕಲಾ ಎಂಬುವವರು ಪೆನ್ಷನ್ ಮಂಜೂರಿ ಪ್ರಕ್ರಿಯೆಗಾಗಿ ಮುಖ್ಯಶಿಕ್ಷಕನ ಬಳಿ ಮನವಿ ಮಾಡಿದ್ದರು. ಆದರೆ, ಪೈಲ್ ಮೂವ್‌ ಮಾಡಲು ತುಕಾರಾಂ ಕಾಂಬಳೆ ಅವರು ಬರೊಬ್ಬರಿ 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದೀಗ 1 ಲಕ್ಷ ಹಣದ ಚೆಕ್ ಪಡೆದು, 50 ಸಾವಿರ ಹಣ ಪಡೆಯುವ ವೇಳೆ ಲೋಕಾಯುಕ್ತ ಡಿವೈಎಸ್‌‌ಪಿ ಎನ್.ಎಮ್.ಓಲೇಕಾರ್ ಮಾಗದರ್ಶನದಲ್ಲಿ ದಾಳಿ ಮಾಡಿ, ಶಿಕ್ಷಕನನ್ನು ವಶಕ್ಕೆ ಪಡೆದಿದ್ದಾರೆ.

ಲಂಚ ಸ್ವೀಕರಿಸುವಾಗ ಇಬ್ಬರು ಆಹಾರ ನಿರೀಕ್ಷಕರು ಲೋಕಾಯುಕ್ತ ಬಲೆಗೆ

ಕಲಬುರಗಿ: ಲಂಚ ಪಡೆಯುವಾಗ ಇಬ್ಬರು ಆಹಾರ ನಿರೀಕ್ಷಕರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪರಮೇಶ್ವರ್ ಹಾಗೂ ಕಿರಣ್ ಛಲವಾದಿ ಎಂಬುವವರು ನೀರಿನ ಪ್ಲಾಂಟ್​ಗೆ ಪರವಾನಗಿ ನೀಡಲು ಅಮ್ಜದ್ ಎಂಬುವರ ಬಳಿ ನಿನ್ನೆ(ಫೆ.14) ರಾತ್ರಿ 40 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, ಅದನ್ನು ಸ್ವೀಕರಿಸುವಾಗ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ:ಚಿತ್ರದುರ್ಗ: ಲೋಕಾಯುಕ್ತ ಬಲೆಗೆ ಬಿದ್ದ ಭೂ ದಾಖಲೆ ಅಧಿಕಾರಿ ಕಾರು ಚಾಲಕ; ಹಣ ಪಡೆಯಲು ಮಾಡಿದ್ದ

ಕೆಎಸ್​ಆರ್​ಟಿಸಿ ವಿಭಾಗ ನಿಯಂತ್ರಕ ಲೋಕಾ ಬಲೆಗೆ

ಇದೇ ಫೆ.06 ರಂದು ಚಿಕ್ಕಮಗಳೂರು ಕೆಎಸ್​ಆರ್​ಟಿಸಿ ವಿಭಾಗ ನಿಯಂತ್ರಕ ಬಸವರಾಜು ಎಂಬುವವರು  ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು ಲಂಚಕ್ಕೆ  ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆ ಚಾಲಕ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಚಾಲಕ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿದ್ದ ಲೋಕಾಯುಕ್ತರು,  ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲೇ ಬಸ್ ಚಾಲಕನಿಂದ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್​ಹ್ಯಾಂಡ್​ ಆಗಿ ಅಧಿಕಾರಿಯನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Thu, 15 February 24