AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ: ಕೊಳೆತ ತರಕಾರಿ ಸಮೇತ ಶಾಸಕರ ಮನೆಗೆ ಬಂದು ವಿದ್ಯಾರ್ಥಿಗಳಿಂದ ದೂರು

ಬೀದರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ನೀಡುತ್ತಿರುವುದನ್ನು ಪ್ರತಿಭಟಿಸಿ ವಿದ್ಯಾರ್ಥಿಗಳು ಕೊಳೆತ ತರಕಾರಿಗಳೊಂದಿಗೆ ಶಾಸಕರ ಮನೆಗೆ ಧಾವಿಸಿದ್ದಾರೆ. ಆ ಬೆನ್ನಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲೇ ಊಟ ಹಾಕಿಸಿದ್ದಾರೆ. ಬಳಿಕ ಇನ್ನುಮುಂದೆ ಈ ರೀತಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.

ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ವಿತರಣೆ: ಕೊಳೆತ ತರಕಾರಿ ಸಮೇತ ಶಾಸಕರ ಮನೆಗೆ ಬಂದು ವಿದ್ಯಾರ್ಥಿಗಳಿಂದ ದೂರು
ಶಾಸಕರ ಮನೆಗೆ ಕೊಳೆತ ತರಕಾರಿ ಹಿಡಿದುಬಂದ ವಿದ್ಯಾರ್ಥಿಗಳುImage Credit source: Tv9 Kannada
ಸುರೇಶ್ ನಾಯಕ್
| Edited By: |

Updated on:Jun 04, 2026 | 11:16 AM

Share

ಬೀದರ್​​, ಜೂನ್​ 04: ಶಿಕ್ಷಣಕ್ಕಾಗಿ ಪ್ರತಿ ವರ್ಷ ಕೋಟ್ಯಾಂತರ ಹಣವನ್ನು ಸರ್ಕಾರ ವೆಚ್ಚ ಮಾಡುತ್ತೆ. ಹೀಗಿದ್ದರೂ ಅವುಗಳು ಮಾತ್ರ ಎಷ್ಟರ ಮಟ್ಟಿಗೆ ವಿದ್ಯಾರ್ಥಿಗಳನ್ನು ತಲುಪುತ್ತೆ ಎಂಬುದನ್ನು ಮಾತ್ರ ಆ ಭಗವಂತನೇ ಬಲ್ಲ. ಮಳೆ ಬಂದರೆ ಸೋರುವ ಶಾಲಾ ಕಟ್ಟಡಗಳು, ಸುಣ್ಣ-ಬಣ್ಣವಿಲ್ಲದ ಗೋಡೆಗಳು ಹೀಗೆ ಕೆಲ ಶಾಲೆ-ಕಾಲೇಜುಗಳ ದುಃಸ್ಥಿತಿ ಹೇಳತೀರದು. ಹಾಸ್ಟೆಲ್​​ಗಳ ಅವ್ಯವಸ್ಥೆಯೂ ಇದಕ್ಕೆ ಹೊರತಾಗಿಲ್ಲ. ಈ ನಡುವೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿಗಳಿಗೆ ತೀರಾ ಕಳಪೆ ಮಟ್ಟದ ಆಹಾರ ಒದಗಿಸುತ್ತಿರುವ ಘಟನೆ ಬೀದರ್​​ನಲ್ಲಿ ನಡೆದಿದೆ. ಅಷ್ಟಕ್ಕೂ ಯಾವುದೋ ಅಧಿಕಾರಿಗಳು ಪರಿಶೀಲನೆಗೆ ಬಂದಾಗ ಈ ವಿಚಾರ ಬಯಲಾಗಿದ್ದಲ್ಲ. ಬದಲಾಗಿ ಆಹಾರ, ಕೊಳೆತ ತರಕಾರಿಗಳನ್ನು ಹಿಡಿದು ವಿದ್ಯಾರ್ಥಿಗಳೇ ಶಾಸಕರ ಮನೆ ಬಾಗಿಲು ತಟ್ಟಿದ್ದಾರೆ.

ವಾರ್ಡನ್​​ ಮತ್ತು ಅಧಿಕಾರಿಗಳ ಮೇಲೆ ಶಾಸಕರು ಗರಂ

ವಿದ್ಯಾರ್ಥಿಗಳು ತಂದಿದ್ದ ಕಳಪೆ ಗುಣಮಟ್ಟದ ಆಹಾರ ಮತ್ತು ತರಕಾರಿಗಳನ್ನು ಕಂಡು ಗರಂ ಆದ ಬಸವಕಲ್ಯಾಣ ಶಾಸಕ ಶಾಸಕ ಶರಣು ಸಲಗರ್, ದೂರವಾಣಿ ಕರೆ ಮಾಡಿ ವಾರ್ಡನ್​​ ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ‌ ಮಕ್ಕಳಿಗೂ ಇದೇ ರೀತಿ ಊಟ ಕೋಡ್ತಿರಾ ಎಂದು ವಾರ್ಡ‌ನ್​​ರನ್ನು ಪ್ರಶ್ನಿಸಿರುವ ಶಾಸಕರು, ಮಕ್ಕಳಿಗೆ ಚೆನ್ನಾಗಿರುವ ಊಟ ಕೊಡಿ ಅಂತಾ ಸರ್ಕಾರ ಹಣ ಕೊಡುತ್ತೆ, ಆದರೆ ನೀವೇನು ಮಾಡುತ್ತಿದ್ದೀರಾ ಎಂದು ತರಾಟೆಗೆ ಪಡೆದಿದ್ದಾರೆ.

ಇದನ್ನೂ ಓದಿ: ಹರಿದ ಬಟ್ಟೆಯ ಗುಡಿಸಲೇ ಇವರ ಅರಮನೆ; ಕತ್ತಲ ಕೂಪದಲ್ಲಿ ಹಕ್ಕಿಪಿಕ್ಕಿ ಸಮುದಾಯ

ಶಾಸಕರ ಮನೆಯಲ್ಲಿಯೇ ಊಟ ಸವಿದ ವಿದ್ಯಾರ್ಥಿಗಳು

ಅಧಿಕಾರಿಗಳಿಗೆ ಖಡಕ್​​ ಎಚ್ಚರಿಕೆ ಬಳಿಕ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿಯೇ ಊಟ ನೀಡುವ ಮೂಲಕ ಶಾಸಕರು ಗಮನ ಸೆಳೆದಿದ್ದಾರೆ. ವಿದ್ಯಾರ್ಥಿಗಳೂ ಸಾಲಾಗಿ ಕೂತು ಭೋಜನ ಸವಿದಿದ್ದಾರೆ. ಇನ್ನುಮುಂದೆ ಈ ರೀತಿ ಸಮಸ್ಯೆ ಆಗದಂತೆ ಕ್ರಮ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ವಿದ್ಯಾರ್ಥಿಗಳಿಗೆ ಶಾಸಕ ಶರಣು ಸಲಗರ್​ ಭರವಸೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 11:15 am, Thu, 4 June 26

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ