ಬೀದರ್: ಚಿತ್ರಾನ್ನ ತಿಂದು ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ-ಭೇದಿ
ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಹೊರವಲಯದಲ್ಲಿರುವ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಕ್ಕಳು ಬುಧವಾರ ಬೆಳಗ್ಗೆ ಉಪಹಾರಕ್ಕೆ ಚಿತ್ರಾನ್ನ ತಿಂದಿದ್ದಾರೆ. ಬಳಿಕ ವಾಂತಿ-ಭೇದಿಯಿಂದ ಬಳಲಿದ್ದಾರೆ.
ಬೀದರ್, ನವೆಂಬರ 13: ಹುಮ್ನಾಬಾದ್ (Humnabad) ಪಟ್ಟಣದ ಹೊರವಲಯದಲ್ಲಿರುವ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ಬಳಲಿದ್ದಾರೆ. ಕೂಡಲೆ ಮಕ್ಕಳನ್ನು ಹುಮ್ನಾಬಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು (ನ.13) ಬೆಳಗ್ಗೆ ಮಕ್ಕಳು ಉಪಹಾರಕ್ಕೆ ಚಿತ್ರಾನ್ನ ಸೇವಿಸಿದ್ದಾರೆ. ಬಳಿಕ, ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ, ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ರಾತ್ರಿ ಉಳಿದ ಅನ್ನಕ್ಕೆ ಬೆಳಗ್ಗೆ ಒಗ್ಗರಣೆ ಹಾಕಿ, ಮಕ್ಕಳಿಗೆ ತಿನ್ನಲು ನೀಡಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ಎಂಎಲ್ಸಿ ಭೀಮರಾವ್ ಪಾಟೀಲ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.
ಕಲುಷಿತ ನೀರು ಸೇವಿಸಿ ಗ್ರಾಮಸ್ಥರು ಅಸ್ವಸ್ಥ
ಎರಡು ತಿಂಗಳ ಹಿಂದೆ ಬೀದರ ತಾಲ್ಲೂಕಿನ ಚಟನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರೀದಾಬಾದ ಗ್ರಾಮದಲ್ಲಿ ಚರಂಡಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಈ ವಿಚಾರವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ಥಳೀಯ ಅಧಿಕಾರಿಗಳಿಗೆ ತಿಳಿಸದೆ ಕಾಮಗಾರಿ ಕೈಗೊಳ್ಳಲಾಗಿತ್ತು. ಈ ಕಾಮಗಾರಿ ಕುಡಿಯುವ ನೀರಿನ ಪೈಪ್‌ಲೈನ್ ಹಾದು ಹೋದ ದಾರಿಯಲ್ಲೇ ನಡೆದಿತ್ತು.
ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿದ 43 ಮಕ್ಕಳು ಅಸ್ವಸ್ಥ
ಇದರಿಂದ ಕುಡಿಯುವ ನೀರಿನ ಪೈಪ್ಲೈನ್ಗೆ ಹಾನಿಯಾಗಿ ಜು. 25 ರಂದು ಚರಂಡಿಯ ಕಲುಷಿತ ನೀರು ಪೈಪ್‌ಲೈನ್ ನೀರಿಗೆ ಸೇರಿತ್ತು. ಇದೇ ನೀರನ್ನು ಕುಡಿದು 21 ಜನರು ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೇ ಜಿಲ್ಲಾ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:31 pm, Wed, 13 November 24