AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಜಾತಿಗಣತಿಗೆ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ನೀರಿನ ಟ್ಯಾಂಕ್​​, ಮರವೇರಿದ ಶಿಕ್ಷಕರು

ಕರ್ನಾಟಕದಲ್ಲಿ ಈಗಾಗಲೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಂಡಿದೆ. ಆದರೆ ಶುರುವಿನಲ್ಲೇ ಕೆಲ ಸಮಸ್ಯೆಗಳು ಕಾಣಿಸಿಕೊಂಡಿವೆ. ಅದರಲ್ಲೂ ನೆಟ್‌ವರ್ಕ್ ಸಮಸ್ಯೆಯಿಂದ ಸಮೀಕ್ಷಗೆ ಅಡಚಣೆ ಉಂಟಾಗುತ್ತಿದೆ. ಬೀದರ್​​​ ಜಿಲ್ಲೆಯಲ್ಲಿ ಗಣತಿಗೆ ಬಂದ ಶಿಕ್ಷಕರು ನೆಟ್‌ವರ್ಕ್​​ಗಾಗಿ ಮರ ಮತ್ತು ನೀರಿನ ಟ್ಯಾಂಕ್ ಹತ್ತಿರುವಂತಹ ಘಟನೆ ನಡೆದಿವೆ.

ಬೀದರ್: ಜಾತಿಗಣತಿಗೆ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ನೀರಿನ ಟ್ಯಾಂಕ್​​, ಮರವೇರಿದ ಶಿಕ್ಷಕರು
ನೆಟ್‌ವರ್ಕ್​​ಗಾಗಿ ಟ್ಯಾಂಕ್​​, ಮರವೇರಿದ ಶಿಕ್ಷಕರು
ಸುರೇಶ ನಾಯಕ
| Edited By: |

Updated on: Sep 25, 2025 | 8:44 AM

Share

ಬೀದರ್​​, ಸೆಪ್ಟೆಂಬರ್​ 25: ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಮಹತ್ವ ಆಕಾಂಕ್ಷೆ ಯೋಜನೆ ಜಾತಿಗಣತಿ (caste census) ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸದ್ಯ ಎಲ್ಲೆಡೆ ನೆಟ್‌ವರ್ಕ್ ಸಮಸ್ಯೆ ಉಂಟಾಗಿದೆ.​​ ಪರಿಣಾಮ ಸಮೀಕ್ಷೆ ಬಂದ ಶಿಕ್ಷಕರು ಮೊಬೈಲ್ ನೆಟ್‌ವರ್ಕ್​​ಗಾಗಿ (network) ಮರ ಮತ್ತು ನಿರೀನ ಟ್ಯಾಂಕ್ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮರ, ನೀರಿನ ಟ್ಯಾಂಕ್ ಏರಿದ ಶಿಕ್ಷಕರು 

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮೊಬೈಲ್ ನೆಟ್‌ವರ್ಕ್ ಅನಿವಾರ್ಯ.​​ ಆದರೆ ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ ಗಣತಿದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೀದರ್​​ ಜಿಲ್ಲೆಯ ಮಹಾರಾಷ್ಟ್ರದ ‌ಗಡಿಯಲ್ಲಿ ಬರುವ ಔರಾದ್, ಕಮಲನಹರ, ಬಸವ ಕಲ್ಯಾಣ, ಹುಲಸೂರು ತಾಲೂಕಿನ ಕೆಲವು ಗ್ರಾಮ ಹಾಗೂ ತಾಂಡಾಗಳಲ್ಲಿ ಮೊಬೈಲ್ ನೆಟ್‌ವರ್ಕ್​​ ಸಮಸ್ಯೆ ಉಂಟಾಗಿದೆ. ನೆಟ್‌ವರ್ಕ್​​ಗಾಗಿ ಶಿಕ್ಷಕರು ಮರ ಮತ್ತು ನೀರಿನ ಟ್ಯಾಂಕ್ ಹತ್ತಿದ  ಆಶ್ಚರ್ಯಕರ ಸಂಗತಿಗಳು ನಡೆದಿವೆ.

ಇದನ್ನೂ ಓದಿ: ಗೊಂದಲದ ಜಾತಿಗಣತಿ: ನೆಟ್‌ವರ್ಕ್, ಆ್ಯಪ್ ಸಮಸ್ಯೆಯಿಂದ ಸಿಬ್ಬಂದಿ ಪರದಾಟ

ಇದನ್ನೂ ಓದಿ
Image
ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಜಾತಿಗಣತಿ ಶುರು: ಹಲವಡೆ ಸಿಗದ ಕಿಟ್
Image
ಬೆಂಗಳೂರಿನಲ್ಲಿ ಮಾತ್ರ ಇಂದಿನಿಂದ ಶುರುವಾಗಲ್ಲ ಜಾತಿ ಗಣತಿ!
Image
ನಾಳೆಯಿಂದ ಜಾತಿಗಣತಿ: ಈ 60 ಪ್ರಶ್ನೆಗಳಿಗೆ ಉತ್ತರ ನೀಡಲು ಸಜ್ಜಾಗಿರಿ
Image
ಜಾತಿಗಣತಿ ಗೊಂದಲ​: ಕ್ರಿಶ್ಚಿಯನ್ ಉಪ-ಜಾತಿಗಳ ಹೆಸರು ಕೈಬಿಟ್ಟ ಆಯೋಗ

ಸೆಪ್ಟೆಂಬರ್ 22 ರಂದು ಆರಂಭಗೊಂಡಿರುವ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಗೆ ಹಲವು ರೀತಿಯ ತಾಂತ್ರಿಕ ದೋಷದಿಂದ ಆರಂಭದಲ್ಲೇ ವಿಘ್ನ ಶುರುವಾದಂತಾಗಿದೆ. ನೆಟ್‌ವರ್ಕ್, ತರಬೇತಿ ಸೇರಿದಂತೆ ಹಲವು ರೀತಿಯ ಗೊಂದಲಗಳು ಸೃಷ್ಟಿಯಾಗಿವೆ.

ಸದ್ಯ ಜನಗಣತಿ ಆರಂಭಗೊಂಡು ಮೂರು ದಿನಗಳು ಕಳೆದರೂ ಪರಿಹಾರವಿಲ್ಲ. ಹೀಗಾಗಿ ಬೀದರ್ ಜಿಲ್ಲೆಯಲ್ಲಿ ವೇಗವಾಗಿ ಸರ್ವೆ ಕಾರ್ಯ ನಡೆಯುತ್ತಿಲ್ಲ. ಜಿಲ್ಲೆಯಲ್ಲಿ 3,381 ಜನರಿಂದ ಸರ್ವೆಕಾರ್ಯ ನಡೆಯುತ್ತಿದೆ. ಸುಮಾರು 3.69 ಲಕ್ಷ ಕುಟುಂಬದ ಸಮೀಕ್ಷೆ ಕಾರ್ಯ ನಡೆಯಬೇಕಿದೆ.

ಆರಂಭದಿಂದಲೂ ಧರ್ಮ, ಜಾತಿ, ಆರ್ಥಿಕ ಮಾಹಿತಿ ಯಾವ ರೀತಿ ನೀಡಬೇಕು ಎಂಬ ಗೊಂದಲಕ್ಕೆ ಒಳಗಾದ ಕುಟುಂಬಗಳು ಸೇರಿದಂತೆ ಗಣತಿದಾರರು ಇದೀಗ ನೆಟ್‌ವರ್ಕ್​​ ಸಿಗದೇ ಇರುವುದು ಇನ್ನೊಂದು ವಿಘ್ನ ಎದುರಾಗಿದೆ.

ಇದನ್ನೂ ಓದಿ: ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಜಾತಿಗಣತಿ ಶುರು: ಹಲವಡೆ ಸಿಗದ ಕಿಟ್, ಟ್ರೈನಿಂಗ್ ಇಲ್ಲ, ಸರ್ವರ್ ಸಮಸ್ಯೆ

ದಿನಕ್ಕೆ ಹತ್ತು ಕುಟುಂಬಗಳ ಶೈಕ್ಷಣಿಕ ಮತ್ತು ಸಾಮಾಜಿಕ ಜಾತಿ ಗಣತಿ ಮಾಡಬೇಕು ಎಂಬ ಗುರಿ ನೀಡಲಾಗಿದೆ. ಆದರೆ ನೆಟ್‌ವರ್ಕ್​​ ಸಮಸ್ಯೆಯಿಂದ ಇಲ್ಲಿಯವರೆಗೆ ವೇಗವಾಗಿ ಗಣತಿ ಕಾರ್ಯ ನಡೆಯದೇ ಇರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?