AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಭರ್ತಿಗೆ ಒತ್ತಾಯ

ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಜಾನಿಗಳ ವಿಶ್ವವಿದ್ಯಾಲಯಕ್ಕೆ ಸಿಬ್ಬಂದಿಯ ಕೊರತೆ ಕಾಡುತ್ತಿದೆ. ವಿಶ್ವವಿದ್ಯಾಲಯದಲ್ಲಿ ಎರಡೂ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇರುವ ಪರಿಣಾಮವಾಗಿ ವ್ಯವಸ್ಥೆ ಹಳ್ಳಹಿಡಿಯುತ್ತಿದೆ.

ಬೀದರ್​ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಭರ್ತಿಗೆ ಒತ್ತಾಯ
ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಜಾನಿಗಳ ವಿಶ್ವವಿದ್ಯಾಲಯ
ಗಂಗಾಧರ​ ಬ. ಸಾಬೋಜಿ
|

Updated on:Apr 01, 2023 | 8:16 PM

Share

ಬೀದರ್: ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಜಾನಿಗಳ ವಿಶ್ವವಿದ್ಯಾಲಯಕ್ಕೆ (Veterinary and Fisheries Sciences University) ಸಿಬ್ಬಂದಿಯ ಕೊರತೆ ಕಾಡುತ್ತಿದೆ. ವಿಶ್ವವಿದ್ಯಾಲಯದಲ್ಲಿ ಎರಡೂ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇರುವ ಪರಿಣಾಮವಾಗಿ ವ್ಯವಸ್ಥೆ ಹಳ್ಳಹಿಡಿಯುತ್ತಿದೆ. ದೇಶದಲ್ಲಿಯೇ ಅತ್ಯುತ್ತಮ 5 ಸ್ಟಾರ್ ಗ್ರೇಡ್ ಹೊಂದಿರು ವಿಶ್ವವಿದ್ಯಾಲಯಕ್ಕೆ ಸಿಬ್ಬಂದಿಗಳೇ ಇಲ್ಲದಿರುವುದು ಸಾರ್ವಜನಿಕರಿಗೆ ಆಶ್ಚರ್ಯವನ್ನುಂಟು ಮಾಡಿದೆ. ಗಡಿ ಜಿಲ್ಲೆ ಬೀದರ್​ನಲ್ಲಿರುವ ರಾಜ್ಯದ ಏಕೈಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಜಾನಿಗಳ ವಿಶ್ವವಿದ್ಯಾಲಯಕ್ಕೆ ಈಗ ಅನಾಥ ಪ್ರಜ್ಞೆ ಕಾಡತೊಡಗಿದೆ. ಈ ವಿಶ್ವವಿದ್ಯಾಲಯ ಆರಂಭವಾದಾಗಿನಿಂದಲೂ ವಿವಿಧ ಹುದ್ದೆಗಳನ್ನ ಭರ್ತಿಮಾಡಿಲ್ಲ. ಹೀಗಾಗಿ ವಿಶ್ವವಿದ್ಯಾಲಯದಲ್ಲಿ ಸುಮಾರು 2104 ಹುದ್ದೆಗಳು ಖಾಲಿಯಿದ್ದು ಇಲ್ಲಿನ ಕೆಲಸ ಕಾರ್ಯಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಐದು ಕಡೆಗಳಲ್ಲಿ ಪಶುವೈದ್ಯಕೀಯ ಕಾಲೇಜುಗಳಿವೆ. ಅಥಣಿ ಮತ್ತು ಪುತ್ತೂರಗಳಲ್ಲಿ ಈಗ ಹೊಸದಾಗಿ ಪಶು ವೈದ್ಯಕೀಯ ಕಾಲೇಜುಗಳು ಆರಂಭವಾಗಿವೆ.

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಈಗ ನೂರಾರು ಸಂಖ್ಯೆಯಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು, ಪಿಎಚ್‌ಡಿ, ಡಿಪ್ಲೋಮಾ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಹಾವೇರಿ, ಹಾಸನ ಸೇರಿದಂತೆ ರಾಜ್ಯದ ಐದು ಕಡೆಗಳಲ್ಲಿ ಪಾಲಿಟೆಕ್ನಿಕ್‌ ಕೇಂದ್ರಗಳಿವೆ. ಮಂಗಳೂರಿನಲ್ಲಿ ಹೈನುಗಾರಿಕಾ ವಿಜ್ಞಾನ ಮಹಾ ವಿದ್ಯಾಲಯವಿದೆ. ಈ ವಿವಿಗಳಲ್ಲಿ ಆಫೀಸರ್ಸ್, ಟೀಚಿಂಗ್‌, ಟೆಕ್ನಿಕಲ್‌, ನಾನ್‌ ಟಿಚೀಂಗ್‌ ಹುದ್ದೆಗಳು ಸೇರಿ ಒಟ್ಟು 2104 ಖಾಲಿ ಇವೆ. ಹೀಗಾಗಿ ಎಲ್ಲಾ ಕೆಲಸವನ್ನೂ ಕೂಡಾ ಇರುವ ಸಿಬ್ಬಂದಿಯಿಂದಲೇ ಮಾಡಿಸಬೇಕಾಗಿರುವುದರಿಂದ ಕೆಲಸದ ಒತ್ತಡ ಜಾಸ್ತಿಯಾಗಿದ್ದು ಸಮಸ್ಯೆಯಾಗುತ್ತಿದೆ. ಕೂಡಲೇ ರಾಜ್ಯಪಾಲರು ಮುಂದೆ ಬಂದು ಖಾಲಿ ಇರುವ ಹುದ್ದೇಗಳನ್ನು ಭರ್ತಿ ಮಾಡಬೇಕೆಂದು ಇಲ್ಲಿನ ಜನರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ರಾಮನ ಮೂರ್ತಿ ಮೇಲೆ ನಿಂತು ಪೋಸ್​ ಕೊಟ್ಟ ಬಿಜೆಪಿ ಶಾಸಕ: ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ಬೀದರ್ ನಂದಿನಗರದಲ್ಲಿರುವ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಜಾನಿಗಳ ವಿಶ್ವವಿದ್ಯಾಲಯ ದೇಶದಲ್ಲಿಯೇ 12 ನೇ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆ ಹೊಂದಿದೆ. ಇಲ್ಲಿ ಓದಿದ ಹಲವಾರು ವಿದ್ಯಾರ್ಥಿ, ವಿದ್ಯಾರ್ಥಿನೀಯರು ರಾಜ್ಯದ ಮೂಲೇ ಮೂಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಜ್ಜಾನಿಗಳೂ ಕೂಡ ಆಗಿದ್ದಾರೆ. ಆದರೆ ಇಂತಹ ವಿವಿಯಲ್ಲಿ ಸಾವಿರಾರು ಹುದ್ದೆಗಳು ಖಾಲಿಯಿದ್ದು, ಆಡಳಿತ ಯಂತ್ರವೇ ಇಲ್ಲಿ ಕುಸಿಯುತ್ತಿದೆ. ಇದರ ಜೊತೆಗೆ ಜಿಲ್ಲೆಯಲ್ಲಿರುವ ಪಶು ಸಂಗೋಪನಾ ಇಲಾಖೆಯಲ್ಲಿಯೂ ಕೂಡ ಸಿಬ್ಬಂದಿಯ ಕೊರತೆಯಿದೆ.

ನೂರಕ್ಕೂ ಹೆಚ್ಚು ಹುದ್ದೆಗಳು ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿಯಿವೆ. ಹೀಗಾಗಿ ರೈತರು ತಾವು ಚಿಕಿತ್ಸೆಗೆ ತಂದ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ದೂರುತ್ತಿದ್ದಾರೆ. ಸಾಮಾನ್ಯವಾಗಿ ಬೆಸಿಗೆಕಾಲ, ಮಳೆಗಾಲದಲ್ಲಿ ಜಾನುವಾರುಗಳಿಗೆ ನಾನಾ ರೋಗಗಳು ಕಾಣಿಸಿಕೊಳ್ಳುತ್ತವೆ. ಅವುಗಳ ಆರೈಕೆ ಮತ್ತು ಚಿಕಿತ್ಸೆಗೆ ಪಶು ಇಲಾಖೆ ಪಾತ್ರ ಬಹಳ ಮುಖ್ಯವಾಗಿದೆ. ಆದರೆ 114 ಆಸ್ಪತ್ರೆಗಳ ಪೈಕಿ ಒಬ್ಬೊಬ್ಬ ವೈದ್ಯರು ತಲಾ ಎರೆಡೆರೆಡು ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ. ಎಮ್ಮೆ, ಆಕಳು, ಕುರಿ, ಮೇಕೆ ಸೇರಿದಂತೆ ಲಕ್ಷಾಂತರ ಜಾನುವಾರುಗಳಿವೆ. ಅವುಗಳ ಚಿಕಿತ್ಸೆಗೆ ತೊಂದರೆ ಆಗುತ್ತಿದೆ. ಇದರ ಜೊತೆಗೆ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಪಶು ಸಂಗೋಪನಾ ಇಲಾಖೆ ಜಾರಿಗೆ ತರುತ್ತಿರುವ ನಾನಾ ಯೋಜನೆಗಳ ಅನುಷ್ಠಾನ ಕೂಡ ಕಷ್ಟಕರವಾಗುತ್ತಿದೆ.

ಇದನ್ನೂ ಓದಿ: ಬೀದರ್​: ಗ್ರಾಮ ಪಂಚಾಯ್ತಿ ಅಧಿಕಾರಿಗೆ ಲಂಚ ನೀಡಲು ಹಣವಿಲ್ಲದೆ, ಎತ್ತುಗಳನ್ನೇ ನೀಡಲು ಮುಂದಾದ ರೈತ

ವಿಶ್ವ ವಿದ್ಯಾಲಯದಲ್ಲಿ ಬೀದರ್ ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಟಿಚಿಂಗ್ ಹುದ್ದೆಗಳೇ ಇಲ್ಲಿ ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ಪಾಠಕ್ಕೂ ಕೂಡ ತೊಂದರೆಯಾಗುತ್ತಿದೆ. ಹೀಗಾಗಿ ಖಾಲಿ ಇರುವ ಹುದ್ದೇಗಳನ್ನ ಬೇಗ ಭರ್ತಿ ಮಾಡಿ ಎಂದು ಇಲ್ಲಿನ ಜನರು ಸರಕಾರಕ್ಕೆ ವಿನಂತಿಸುತ್ತಿದ್ದಾರೆ.

ವರದಿ: ಸುರೇಶ್ ನಾಯಕ್​, ಟಿವಿ9, ಬೀದರ್-99809-14145  

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:16 pm, Sat, 1 April 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ