ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ: ಐವರ ಪೈಕಿ ಮೂವರು ದುರ್ಮರಣ
ಬೀದರ್ ತಾಲೂಕಿನ ಚಟ್ನಳ್ಳಿ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಐವರ ಪೈಕಿ ಮೂವರು ಯುವಕರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಬೀದರ್, ಮೇ 2: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ (accident) ಹೊಡೆದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಐವರ ಪೈಕಿ ಮೂವರು ಯುವಕರು ಸಾವನ್ನಪ್ಪಿರುವಂತಹ (death) ಘಟನೆ ಬೀದರ್ ತಾಲೂಕಿನ ಚಟ್ನಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಪ್ರದೀಪ್(25), ವಿನೋದ್(26), ವರ್ದೀಶ್(25) ಮೃತರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ
ಕಲಬುರಗಿ: ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಪೂಜಾರಿ(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಗ್ರಾಮದ ಹೊರವಲಯದ ಜಮೀನಿನಲ್ಲಿ ನಿಖಿಲ್ ನೇಣಿಗೆ ಶರಣಾಗಿದ್ದಾನೆ.
ಇದನ್ನೂ ಓದಿ: ಬೆಂಗಳೂರು ವಿವಿ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ನಾಲ್ಕು ದಿನದ ಹಿಂದೆ ಗ್ರಾಮದಲ್ಲಿ ಜಾತ್ರೆ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಸಮುದಾಯದವರ ನಡುವೆ ಗಲಾಟೆ ನಡೆದಿತ್ತು. ಗಲಾಟೆ ಬಳಿಕ ಗ್ರಾಮದ ಹಿರಿಯರು ರಾಜಿ ಮಾಡಿಸಿದ್ದರು. ಆದರೆ ನರೋಣಾ ಠಾಣೆಯಲ್ಲಿ ನಿಖಿಲ್ ಸೇರಿದಂತೆ ವಿರುದ್ಧ ಅನ್ಯ ಸಮುದಾಯದವರು ದೂರು ನೀಡಿದ್ದರು. ಕೇಸ್ ಆಗಿದ್ದಕ್ಕೆ ಹೆದರಿ ನೇಣಿಗೆ ಶರಣಾಗಿದ್ದಾನೆ.
ಫುಡ್ ಡೆಲಿವರಿ ಬಾಯ್ ಮೇಲೆ ಮಾರಣಾಂತಿಕ ಹಲ್ಲೆ: ನಾಲ್ವರ ಬಂಧನ
ಬೆಂಗಳೂರು: ಫುಡ್ ಡೆಲಿವರಿ ಬಾಯ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಮಂಗಳಮುಖಿ ಡಾಮಿನಿ ಸೇರಿ ಮರಿಯನ್, ನಾಗೇಂದ್ರ, ಕಿರಣ್ ಬಂಧಿತರು. ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನ ಮಾಡಲಾಗಿದೆ.
ಇದನ್ನೂ ಓದಿ: ಅಪ್ರಾಪ್ತ ವಯಸ್ಸಿನಲ್ಲಿ ಪ್ರೀತಿ ಬಲೆಗೆ ಬಿದ್ದ ಯುವತಿ ಊರ ಹಬ್ಬದ ದಿನ ಗಂಡನ ಕೈಯಲ್ಲಿ ಹತ್ಯೆ!
ಏಪ್ರಿಲ್ 28 ರಂದು ಫುಡ್ ಡೆಲಿವರಿ ಬಾಯ್ ಸಂಕೇತ್ ಮೇಲೆ ಗ್ಯಾಂಗ್ ಹಲ್ಲೆ ನಡೆಸಿತ್ತು. ನಾಗರಬಾವಿ ಸರ್ಕಲ್ ಬಳಿ ಬಿಯರ್ ಬಾಟಲ್ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದರು. ಚಾಕುವಿನಿಂದ ಇರಿಯಲು ಯತ್ನಿಸಿದ್ದ ವೇಳೆ ಸಂಕೇತ್ ಕೈಅಡ್ಡ ನೀಡಿದ್ದ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:48 am, Thu, 2 May 24