Bidar News: ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ: ಇಬ್ಬರ ಬಂಧನ

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ಬಂಧನ ಮಾಡಿದ್ದಾರೆ.

Bidar News: ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ ಸಾಗಾಟ: ಇಬ್ಬರ ಬಂಧನ
ಗಾಂಜಾ ವಶಕ್ಕೆ ಪಡೆದ ಅಬಕಾರಿ ಪೊಲೀಸರು
Follow us
ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 5:23 PM

ಬೀದರ್​: ಮಹಾರಾಷ್ಟ್ರ ಸರ್ಕಾರಿ ಬಸ್​ನಲ್ಲಿ ಗಾಂಜಾ (ganja) ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್​​ನಿಂದ ಬೀದರ್​​ ಮೂಲಕ ಮಹಾರಾಷ್ಟ್ರಕ್ಕೆ ತೆರಳಿದ್ದ ಬಸ್​​ನಲ್ಲಿ ಸಾಗಾಟ ಮಾಡಲಾಗುತ್ತಿದ್ದ 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ‌ಡಿಸಿ ಮೊಹಮ್ಮದ್ ಇಸ್ಮಾಯಿಲ್ ಇನಾಮದಾರ್​ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಬೀದರ್ ತಾಲೂಕಿನ ಬಂಗೂರು‌ ಚೆಕ್​​​ಪೋಸ್ಟ್​​​ನಲ್ಲಿ ಗಾಂಜಾ‌ ವಶಕ್ಕೆ ಪಡೆದಿದ್ದಾರೆ.

ಟ್ರಾಕ್ಟರ್-ಬೈಕ್ ನಡುವೆ ಡಿಕ್ಕಿ: 5 ಜನ ದುರ್ಮರಣ

ಧಾರವಾಡ: ಟ್ರಾಕ್ಟರ್-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗ್ರಾಮ ಪಂಚಾಯತಿ ಪಿಡಿಒ ಸಾವನ್ನಪ್ಪಿರುವ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರಿನವರಾದ ಮೃತ ಪಿಡಿಓ ಶಿವಾನಂದ ಹಡಪದ. ಹಾವೇರಿ ಜಿಲ್ಲೆಯ ಶಿರಬಡಗಿ ಗ್ರಾಮ ಪಂಚಾಯತಿ ಪಿಡಿಓ ಆಗಿ ಕೆಲಸ ಮಾಡುತ್ತಿದ್ದರು. ದುರಾದೃಷ್ಟವಶಾತ್​ ನಿನ್ನೆ(ಮೇ.24) ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Hasan News: ಪಿತ್ರಾರ್ಜಿತ ಆಸ್ತಿಗಾಗಿ ದಾಯಾದಿಗಳ ನಡುವೆ ಗಲಾಟೆ: ಸಿನಿಮೀಯ ರೀತಿಯಲ್ಲಿ ಮಚ್ಚಿನಿಂದ ಹಲ್ಲೆಗೈದ ಆರೋಪ

ನಿಂತಿದ್ದ ಬಸ್​ಗೆ ಟಿಟಿ ವಾಹನ ಡಿಕ್ಕಿ ಇಬ್ಬರ ಸಾವು

ತುಮಕೂರು: ನಿಂತಿದ್ದ ಬಸ್​ಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ.ಹೊಸಹಳ್ಳಿ ಬಳಿ ನಡೆದಿದೆ. ವೀರೇಶ್ (30), ಶಶಿಕಲಾ (75) ಮೃತ ರ್ದುದೈವಿಗಳು. ಮೃತರು ರಾಯಚೂರು ಜಿಲ್ಲೆಯ ಸಿಂಧನೂರಿನವರು ಎಂದು ತಿಳಿದು ಬಂದಿದೆ. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಎಂಬುವವರು ಗಾಯಗೊಂಡಿದ್ದು, ಗಾಯಾಳುಗಳಿಗೆ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಶಿಕಲಾ ಕುಟುಂಬದವರು ಸಿಂಧನೂರಿನಿಂದ ಮೈಸೂರಿಗೆ ಪ್ರವಾಸಕ್ಕೆ ಹೊರಟಿದ್ದ ವೇಳೆ ಮಾರ್ಗ ಮಧ್ಯೆ ಡಿ.ಹೊಸಹಳ್ಳಿ ಬಳಿ ನಿಂತಿದ್ದ ಖಾಸಗಿ ಬಸ್​ಗೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಈ ಕುರಿತು ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kalaburagi News: ಹಾಡಹಗಲೇ ಬಸ್​ ಚಾಲಕನ ಹತ್ಯೆ; ಇಬ್ಬರು ಆರೋಪಿಗಳು ಅರೆಸ್ಟ್​, ಕೊಲೆಗೆ ಕಾರಣ ಕೇಳಿ ದಂಗಾದ ಪೋಲಿಸರು​

ಹಣ ವಾಪಾಸ್ ಕೇಳಿದ್ದಕ್ಕೆ ರಾಡ್​ನಿಂದ ಹಲ್ಲೆ

ಬೆಂಗಳೂರು: ಹಣ ವಾಪಾಸ್​ ಕೇಳಿದ್ದ ವೃದ್ದೆ ಮೇಲೆ ಎದುರು ಮನೆಯ ನಿವಾಸಿಯಿಂದ ಮಾರಣಾಂತಿಕ ಹಲ್ಲೆ ಮಾಡಿರುವಂತಹ ಘಟನೆಯೊಂದು ನಗರದ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮೇ 21 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ವೃದ್ದೆ ಗಿರಿಯಮ್ಮ ಹಲ್ಲೆಗೊಳಗಾದವರು. ಎದುರು ಮನೆಯ ನಿವಾಸಿ ಶಾಂತಮ್ಮಳಿಂದ ಮಾರಣಾಂತಿಕ ಹಲ್ಲೆ ಆರೋಪ ಮಾಡಲಾಗಿದೆ. ಹಣ ಕೊಡುವ ನೆಪದಲ್ಲಿ ಬಂದು ರಾಡ್​ನಿಂದ ವೃದ್ದೆ ಗಿರಿಯಮ್ಮ ತಲೆಗೆ ಹೊಡೆದಿರುವ ಆರೋಪ ಕೇಳಿಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ